ರಾಜ್ಯ ಸರ್ಕಾರದಿಂದ 1300 ಎಕರೆ ಡಿನೋಟಿಫಿಕೇಷನ್‌: ಯಡಿಯೂರಪ್ಪ

Team Udayavani, Sep 13, 2017, 7:05 AM IST

BSY-800.jpg

ಬೆಂಗಳೂರು: ರಾಜ್ಯಸರ್ಕಾರ ಸುಮಾರು 1300 ಎಕರೆ ಜಮೀನು ಡಿನೋಟಿಫಿಕೇಶನ್‌ ಮಾಡಿದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಡಾ.ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್‌ ಸಂಬಂಧ ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ಮಂಗಳವಾರದ ವಿಚಾರಣೆ ವೇಳೆ ಹಿರಿಯ ವಕೀಲ ಸಿ.ವಿ ನಾಗೇಶ್‌, ನ್ಯಾಯಪೀಠಕ್ಕೆ ಈ ಹೇಳಿಕೆ ನೀಡಿದರು.

ಯಡಿಯೂರಪ್ಪ ಪರ ವಾದಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್‌, ಅರ್ಜಿದಾರರ ವಿರುದ್ಧ 250 ಎಕರೆ ಡಿನೋಟಿಫಿಕೇಶನ್‌ ಮಾಡಿದೆ ಎಂಬ ಆರೋಪವಿದೆ. ಆದರೆ , ಪ್ರಸ್ತುತ ರಾಜ್ಯಸರ್ಕಾರದ ಅವಧಿಯಲ್ಲಿಯೇ ಸುಮಾರು 1300 ಎಕರೆ ಡಿನೋಟಿಫಿಕೇಶನ್‌ ಮಾಡಲಾಗಿದೆ. ಈ ಕುರಿತ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠಕ್ಕೆ ತಿಳಿಸಿದರು.

ಇದಕ್ಕೂ ಮುನ್ನ ಯಡಿಯೂರಪ್ಪ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ಕೋರಿದ್ದ ಎಸಿಬಿಯ ವಾದಕ್ಕೆ ಪ್ರತಿವಾದ ಮಂಡಿಸಿದ ಸಿ.ವಿ ನಾಗೇಶ್‌, ಅರ್ಜಿದಾರರ ವಿರುದ್ಧ ಎಸಿಬಿ ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಅವರ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ. ಎಫ್ಐಆರ್‌ ರದ್ದುಕೋರಿರುವ ರಿಟ್‌ ಅರ್ಜಿ ಊರ್ಜಿತವಾಗಲಿದೆ ಎಂದು ಸುಪ್ರೀಂಕೋರ್ಟ್‌ನ ಕೆಲ ತೀರ್ಪುಗಳನ್ನು ಉಲ್ಲೇಖೀಸಿದರು. ಇಂತಹ ಪ್ರಕರಣಗಳಲ್ಲಿ ಆರೋಪಿತರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿ ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೆ ಮಾತ್ರ ತಡೆಯಾಜ್ಞೆ ನೀಡಲು ನಿರ್ಬಂಧವಿದೆ. ಆದರೆ, ಈ ಪ್ರಕರಣ ಇನ್ನೂ ಪೊಲೀಸ್‌ ತನಿಖಾ ಹಂತದಲ್ಲಿದೆ. ಹೀಗಾಗಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡುವ ಅಧಿಕಾರ ಹೈಕೋರ್ಟ್‌ಗಿದೆ. ಅರ್ಜಿದಾರರ ವಿರುದ್ಧದ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿದರು.ಈ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಬುಧವಾರಕ್ಕೆ (ಸೆ.13)ಮುಂದೂಡಿತು.

ಟಾಪ್ ನ್ಯೂಸ್

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.