ಪರಿಷತ್ ಸದಸ್ಯರ ಧರಣಿಗೆ ಪ್ರಮುಖರ ಸಾಥ್
Team Udayavani, Sep 13, 2017, 7:50 AM IST
ಬೆಂಗಳೂರು: ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.
“ನಿಮ್ಮ ಬೇಡಿಕೆಗಳಿಗೆ ತನ್ನ ಸಹಮತವೂ ಇದೆ. ಪಕ್ಷ ನಿಮ್ಮ ಜತೆಯಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ’ ಎಂದು ದೇವೇಗೌಡ ಭರವಸೆ ನೀಡಿದರು.
ಜಗದೀಶ್ ಶೆಟ್ಟರ್ ಮಾತನಾಡಿ, “ಜನಪ್ರತಿನಿಧಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಕಳೆದ 7 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಸ್ಪಂದಿಸಿಲ್ಲ. ಗೃಹ ಸಚಿವ ರಾಮಲಿಂಗಾರೆಡ್ಡಿ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಭೇಟಿ ನೀಡಿದ್ದಾರೆ. ಆದರೆ, ಯಾವ ಭರವಸೆಯನ್ನು ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲ್ಮನೆ ಸದಸ್ಯರನ್ನು ಕರೆದು ಬೇಡಿಕೆ ಆಲಿಸುವ ಕನಿಷ್ಠ ಪ್ರಯತ್ನವೂ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿ, “ರಾಜ್ಯದ ಇತಿಹಾಸದಲ್ಲಿ ಇಂಥ ಧರಣಿ ಇದೇ ಮೊದಲು ನಡೆಯುತ್ತಿರುವುದು. ಸಮಸ್ಯೆ ಬಗೆಹರಿಸಿ, ಪ್ರತಿಭಟನೆ ನಿಲ್ಲಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪರಿಷತ್ ಸದಸ್ಯರು ಶಿಕ್ಷಣ ಸಚಿವರಿಗೆ ಮನವಿ ಪತ್ರ ನೀಡಿದ್ದಾರೆ. ಸಚಿವರು ಬೇಡಿಕೆಗಳನ್ನು ಈಡೇರಿ ಸದೇ ಸುಮ್ಮನಿದ್ದಾರೆ. ರಾಜ್ಯ ಸರ್ಕಾರ ಶಿಕ್ಷಕ ಪ್ರತಿ ನಿಧಿಗಳ ಹೋರಾಟದ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿದೆ’ ಎಂದು ದೂರಿದರು. ಮುಖ್ಯಮಂತ್ರಿಯವರು ಬುಧವಾರ ಸಂಜೆಯೊಳಗೆ ಶಿಕ್ಷಕಪ್ರತಿನಿಧಿಗಳ ಸಭೆ ಕರೆದು, ಸಮಸ್ಯೆಯ ಬಗ್ಗೆ ಚರ್ಚಿಸದೇ ಇದ್ದರೆ, ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.
ಸೆ.16ರಿಂದ ಶಾಲಾ ಕಾಲೇಜು ಬಂದ್
ವಿಧಾನ ಪರಿಷತ್ ಸದಸ್ಯರ ಪ್ರತಿಭಟನೆಯಲ್ಲಿ ಅನುದಾನಿತ ಶಾಲಾ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದ ಕಾಲ್ಪನಿಕ ವೇತನ ಬಡ್ತಿಯವನ್ನು ಪ್ರಮುಖ ವಿಷಯವಾಗಿಟ್ಟುಕೊಂಡಿದ್ದಾರೆ. ಸೆ.15ರಂದು ಸಿಎಂ ಸಿದ್ದರಾಮಯ್ಯ ಅವರು ನಡೆಸುವ ಸಭೆಯಲ್ಲಿ ಈ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ ಸೆ.16ರಿಂದ ಶಾಲಾ ಕಾಲೇಜು ಬಂದ್ ಮಾಡಲಿದ್ದೇವೆ ಎಂದು ರಾಜ್ಯ ಸರ್ಕಾರಿ
ಅನುದಾನಿತ ಶಾಲಾ ಕಾಲೇಜು ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.