ಚಿಲ್ಲರೆ ಹಣದುಬ್ಬರ 5 ತಿಂಗಳ ಗರಿಷ್ಠ: ಸೆನ್ಸೆಕ್ಸ್ 57 ಅಂಕ ಏರಿಕೆ
Team Udayavani, Sep 13, 2017, 10:27 AM IST
ಮುಂಬಯಿ : ಚಿಲ್ಲರೆ ಹಣದುಬ್ಬರ ಕಳೆದ ಐದು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿರುವ ಹೊರತಾಗಿಯೂ ಸಾಂಸ್ಥಿಕ ಹೂಡಿಕೆದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೋರಿದ ಆಸಕ್ತಿಯ ಫಲವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 57 ಅಂಕಗಳ ಮುನ್ನಡೆಯನ್ನು ದಾಖಲಿಸಿತು.
ಕಳೆದ ನಾಲ್ಕು ದಿನಗಳ ನಿರಂತರ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟಾರೆಯಾಗಿ 496.69 ಅಂಕಗಳ ಮುನ್ನಡೆಯನ್ನು ಸಂಪಾದಿಸಿದ್ದು ಇಂದು ಕೂಡ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿರುವುದು ಆಶಾದಾಯಕ ಬೆಳವಣಿಗೆ ಎಂದು ತಿಳಿಯಲಾಗಿದೆ.
ಬೆಳಗ್ಗೆ 10.30ರ ವೇಳೆಗೆ ಸೆನ್ಸೆಕ್ಸ್ 74.50 ಅಂಕಗಳ ಮುನ್ನಡೆಯನ್ನು ಸಾಧಿಸಿ 32,233.16 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 17.50 ಅಂಕಗಳ ಏರಿಕೆಯೊಂದಿಗೆ 10,110.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಬ್ಯಾಂಕ್ ನಿಫ್ಟಿ ಇಂದಿನ ಆರಂಭಿಕ ವಹಿವಾಟಿನಲ್ಲಿ 73.30 ಹಾಗೂ ನಿಫ್ಟಿ ಐಟಿ 67.10 ಅಂಕಗಳ ಮುನ್ನಡೆಯನ್ನು ದಾಖಲಿಸಿರುವುದು ಗಮನಾರ್ಹವೆನಿಸಿತು. ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಇಂದು 29 ಶೇರುಗಳು ಮುನ್ನಡೆ ಸಾಧಿಸಿದರೆ 22 ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.