ಮಹದಾಯಿಗಾಗಿ ಸೆ.22ಕ್ಕೆ ಗೋವಾ ಮುತ್ತಿಗೆ: ವಾಟಾಳ್
Team Udayavani, Sep 14, 2017, 7:05 AM IST
ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಸೆ.22ರಂದು ಗೋವಾಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮಹದಾಯಿ ಯೋಜನೆ ಜಾರಿಗಾಗಿ ನವಲಗುಂದದಲ್ಲಿ ಕಳೆದ 2 ವರ್ಷಗಳಿಂದ ರೈತರು ಹೋರಾಟ ಮಾಡುತ್ತಿರುವುದು ರಾಜ್ಯದಲ್ಲೇ ಐತಿಹಾಸಿಕವಾಗಿದೆ. ಆದರೂ ಸರ್ಕಾರ ನಿರ್ಲಕ್ಷé ತೋರುತ್ತಿದೆ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಹಾಗೂ ರೈತರಿಗೆ, ಹೋರಾಟಗಾರರಿಗೆ ಕನ್ನಡಪರ ಸಂಘಟನೆಗಳು ಪಾಲ್ಗೊಂಡು ದೊಡ್ಡ ಶಕ್ತಿ ನೀಡಲಿವೆ. ಹಂತ ಹಂತವಾಗಿ ತೀವ್ರ ಸ್ವರೂಪದ ಹೋರಾಟ, ಚಳವಳಿ ಆಯೋಜಿಸಲಾಗುವುದು. ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಮಹದಾಯಿ ಹೋರಾಟವನ್ನು ರಾಜ್ಯವ್ಯಾಪಿ ಕೈಗೊಳ್ಳಲಾಗುವುದು ಎಂದರು. ಗೋವಾ ಮುತ್ತಿಗೆ ಹೋರಾಟದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.