ರೈತರ ಹಿತಕ್ಕಾಗಿ ಬಿಜೆಪಿ ರಾಜಕಾರಣ


Team Udayavani, Sep 14, 2017, 11:37 AM IST

14-DV-1.jpg

ದಾವಣಗೆರೆ: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್‌ ಮಂಡಿಸುವ ಮೂಲಕ ನಮ್ಮಪಕ್ಷ ಇತಿಹಾಸ ನಿರ್ಮಿಸಿದ್ದನ್ನು ಮರೆಯಬಾರದು ಎಂದು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಹೇಳಿದ್ದಾರೆ. ನಗರದ ಹದಡಿ ರಸ್ತೆಯಲ್ಲಿರುವ ಎಸ್‌ಎಸ್‌
ಮಿನಿ ಸಮುದಾಯ ಭವನದಲ್ಲಿ ಬುಧವಾರ ಜಿಲ್ಲಾ ರೈತ ಪ್ರಹಾರಿಗಳ ಸಮಾವೇಶ ಉದ್ಘಾಟಿಸಿ, ಮಾತನಾಡಿದ ಅವರು, ಬಿಜೆಪಿ ಎಂದಿಗೂ
ಜಾತಿ ರಾಜಕಾರಣ ಮಾಡಿಲ್ಲ. ಸದಾ ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ರಾಜಕಾರಣ ಮಾಡುತ್ತಾ ಬಂದಿದೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ
ಯಡಿಯೂರಪ್ಪನವರು ರೈತ ನಾಯಕರು. ಅವರು ಸಿಎಂ ಆಗಿದ್ದಾಗ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್‌ ಮಂಡಿಸಿ, ರೈತ ಪರ ನಿಲುವು ಸಾಬೀತುಪಡಿಸಿದ್ದರು ಎಂದರು.

ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ನಮ್ಮ ಪಕ್ಷ ಜನಸಂಘದ ಕಾಲದಿಂದಲೂ ರೈತರಿಗಾಗಿ ಹೋರಾಟ ಮಾಡುತ್ತಲೇ ಬಂದಿದೆ.
ಜನಸಂಘದ ಕಾಲದಲ್ಲಿ ಅಧಿಕಾರಿಗಳನ್ನು ವಿರೋಧ ಹಾಕಿಕೊಳ್ಳಲು ಎಲ್ಲರೂ ಹೆದರುತ್ತಿದ್ದರು. ಅಧಿಕಾರಿಗಳು ಸುಂಕದ ಹೆಸರಲ್ಲಿ ರೈತರ ಶೋಷಣೆ
ಮಾಡುತ್ತಿದ್ದರು. ಬಾಯಿಗೆ ಬಂದ ಬೆಲೆ ನಿಗದಿಮಾಡಿ ಸುಂಕ ವಸೂಲಿ ಮಾಡುತ್ತಿದ್ದರು. ನಮಗೆ ಜನಸಂಘದ ಮೂಲಕ ನೀಡಿದ ತಿಳಿವಳಿಕೆಯಿಂದಾಗಿ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುವಂತಹ ಪ್ರೇರಣೆ ಸಿಕ್ಕಿತು. ಹಾಗಾಗಿಯೇ ಈ ಹಿಂದೆ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಿ, ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡಿದೆವು ಎಂದರು.

ಇಂದು ನೀವು ಸಹ ಇದೇ ರೀತಿಯ ಹೋರಾಟ ರೂಪಿಸಬೇಕಿದೆ. ಇಂದಿನ ಸರ್ಕಾರ ಸಹ ರೈತಪರ ಯಾವುದೇ ಕೆಲಸ ಮಾಡುತ್ತಿಲ್ಲ. ಕೇಂದ್ರ ಸರ್ಕಾರ
ಹಲವು ರೈತಪರ ಯೋಜನೆ ಜಾರಿಮಾಡಿದೆ. ಅಂತಹ ಯೋಜನೆಗಳು ರೈತರಿಗೆ ತಲುಪುವಂತೆ ಆಗಬೇಕು. ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ರೈತರ ವಿಷಯ ಬಂದಾಗ ಸಿಡಿಲಮರಿಯಿದ್ದಂತೆ. 7 ವರ್ಷಗಳ ಆಡಳಿತದಲ್ಲಿ ಯಡಿಯೂರಪ್ಪ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆದಾಗ ಸಹಿಸಿಕೊಳ್ಳುತ್ತಿರಲಿಲ್ಲ ಎಂದು ಅವರು ಸ್ಮರಿಸಿದರು.

ಇನ್ನೋರ್ವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಕಾಂಗ್ರೆಸ್‌ ನವರದ್ದು ಎಲುಬಿಲ್ಲದ ನಾಲಿಗೆ. ಅವರು ರೈತ ಪರ ಎಂಬುದಾಗಿ ಹೇಳಿಕೊಳ್ಳುತ್ತಾರೆ. ಆದರೆ, ರೈತ ಪರ ಯಾವುದೇ ಕೆಲಸ ಮಾಡಲ್ಲ. ಇನ್ನೊಂದು ಪಕ್ಷ ಮಣ್ಣಿನ ಮಕ್ಕಳೆಂದೇ ಹೇಳಿಕೊಳ್ಳುತ್ತದೆ. ಆದರೆ,ಅವರು ಎಂದಿಗೂ ರೈತ ಪರ ಕೆಲಸ ಮಾಡಿದವರಲ್ಲ. ನಮ್ಮ ನಾಯಕ ಬಿ.ಎಸ್‌. ಯಡಿಯೂರಪ್ಪ ಮಾತ್ರಸದಾ ರೈತರ ಶ್ರಯೋಭಿವೃದ್ಧಿಗೆ ಶ್ರಮಿಸಿದವರು
ಎಂದರು.

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದು ರೈತರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದೆ.ಈ ಹಿಂದೆ ಅಟಲ್‌ ಬಿಹಾರಿ ವಾಜಪೇಯಿ
ಪ್ರಧಾನಿಯಾಗಿದ್ದಾಗ ರೂಪಿಸಿದ್ದ ನದಿ ಜೋಡಣೆ ಯೋಜನೆಗೆ ಇದೀಗ ಕೇಂದ್ರ ಸರ್ಕಾರ ಚಾಲನೆ ನೀಡಲಿದೆ. ಇನ್ನು ರಸಗೊಬ್ಬರದ ಬೆಲೆ ಇಳಿಸಿದ್ದು
ಇತಿಹಾಸದಲ್ಲೇ ಮೊದಲು ನಾವೇ ಎಂಬುದು ನಮ್ಮ ಪಕ್ಷಕ್ಕೆ ರೈತರ ಬಗ್ಗೆ ಇರುವ ಕಾಳಜಿ ತೋರುತ್ತದೆಎಂದು ಅವರು ಪ್ರತಿಪಾದಿಸಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಾಂತರಾಜ ಪಾಟೀಲ್‌ ಅಧ್ಯಕ್ಷತೆ ವಹಿಸಿದ್ದರು. ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್‌, ಮಾಜಿಶಾಸಕರಾದ ಕೆ. ಮಾಡಾಳು ವಿರುಪಾಕ್ಷಪ್ಪ, ಡಾ|ಎ.ಎಚ್‌. ಶಿವಯೋಗಿ ಸ್ವಾಮಿ, ಎಂ. ಬಸವರಾಜ ನಾಯ್ಕ, ಮುಖಂಡರಾದ ರಮೇಶ ನಾಯ್ಕ,
ಎಚ್‌.ಎನ್‌. ಶಿವಕುಮಾರ, ಆನಂದಪ್ಪ, ಬನ್ನಿಕೋಡು ಹನುಮಂತಪ್ಪ, ತಾಪಂ ಸದಸ್ಯ ಸಂಗಜ್ಜಗೌಡ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.