ರಾಜ್ಯ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಕಡೆಗಣನೆ: ಶಾಸಕ ತಿಪ್ಪಾಡ್ಡಿ
Team Udayavani, Sep 14, 2017, 12:49 PM IST
ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷಗಳಲ್ಲಿ ಒಂದೇ ಒಂದು ಕಾಲೇಜು, ಪ್ರೌಢಶಾಲೆಯನ್ನು ಹೊಸದಾಗಿ ಆರಂಭಿಸಿಲ್ಲ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಆರೋಪಿಸಿದರು.
ಇಲ್ಲಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕ್ರೀಡಾ, ಸಾಂಸ್ಕೃತಿಕ, ರೋವರ್ಸ್ ಹಾಗೂ ಎನ್‌ಎಸ್‌ಎಸ್‌ಘಟಕ, ಹೊಸ ಕೊಠಡಿ, ಪ್ರಯೋಗಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ನೂರು ವರ್ಷಗಳ ಹಿಂದೆ ನಿರ್ಮಿಸಿದ ಓಬಿರಾಯನ ಕಾಲದ ಹಳೆ ಪಿಯು ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲಿ ಮಕ್ಕಳು ಪಾಠ ಕಲಿಯುತ್ತಿದ್ದಾರೆ. ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿದ್ದರೂ ಅಗತ್ಯ ಪಿಯು ಕಾಲೇಜು, ಪ್ರೌಢಶಾಲೆ ಮಂಜೂರು ಮಾಡಿಲ್ಲ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಡೊನೇಷನ್ ನೀಡಿ ಬಡ ಮಕ್ಕಳು ಶಿಕ್ಷಣ ಕಲಿಯುವ ವ್ಯವಸ್ಥೆ ಇದೆ ಎಂದರು.
ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ತನ್ನದೇ ಆದ ಇತಿಹಾಸವಿದೆ. ಶತಮಾನ ಕಂಡ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ. ಆದರೆ ಕೊಠಡಿಗಳ ಕೊರತೆ ಇದೆ. ಅದೇ ರೀತಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿಯೂ ಕೊಠಡಿಗಳ ಕೊರತೆ ಇರುವುದನ್ನು ಗಮನಿಸಿ 1.15 ಕೋಟಿ ರೂ. ವೆಚ್ಚದಲ್ಲಿ ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಆರ್‌ಐಡಿಎಫ್ ಯೋಜನೆಯಡಿ ಇನ್ನೂ ಒಂದು ಕೋಟಿ ರೂ. ಬಿಡುಗಡೆಯಾಗಿದೆ. ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ 4 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಆ ಹಣದಲ್ಲಿ
ಶಾಲಾ-ಕಾಲೇಜು ಕಟ್ಟಡ ನಿರ್ಮಿಸಲು 3 ಕೋಟಿ ರೂ.ಗಳನ್ನು ನೀಡಬೇಕೆಂಬ ಆದೇಶವಿದೆ ಎಂದು ತಿಳಿಸಿದರು.
ಭಾರತದಲ್ಲಿರುವಂತಹ ಯುವಶಕ್ತಿ ಬೇರೆ ಯಾವ ದೇಶದಲ್ಲಿಯೂ ಇಲ್ಲ. ವಿಜ್ಞಾನ ತಂತ್ರಜ್ಞಾನದಲ್ಲಿ ಭಾರತದ ಮಕ್ಕಳು ಬೇರೆ ದೇಶಗಳ ಮಕ್ಕಳಿಗಿಂತ ಮುಂದಿದ್ದಾರೆ. ಶಿಕ್ಷಣ ಕೇವಲ ಅಂಕಪಟ್ಟಿಗೆ ಮೀಸಲಾಗಬಾರದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಎದೆಗುಂದಿ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಿಮ್ಮ ಮೇಲೆ ಅಪಾರ ನಿರೀಕ್ಷೆಯಿಟ್ಟುಕೊಂಡಿರುವ ತಂದೆ ತಾಯಿಗಳ ಮನಸ್ಸನ್ನು ನೋಯಿಸಬೇಡಿ ಎಂದು ಕಿವಿಮಾತು ಹೇಳಿದರು.
ಎಸ್‌ಜೆಎಂ ಕಾನೂನು ಕಾಲೇಜು ಪ್ರಾಚಾರ್ಯ ಕೆ.ಎನ್. ವಿಶ್ವನಾಥ್ ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಬಿ. ಲಕ್ಷ್ಮೀನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ರಾಜೇಶ್ವರಿ, ಹಾಸ್ಯ ಕವಿ ಜಗನ್ನಾಥ, ಜಾನಪದ ಹಾಡುಗಾರ ಗಂಜಿಗಟ್ಟೆ ಕೃಷ್ಣಮೂರ್ತಿ ಇದ್ದರು. ದೊಡ್ಡಪ್ಪ ಸ್ವಾಗತಿಸಿದರು. ಚನ್ನಬಸಪ್ಪ ನಿರೂಪಿಸಿದರು.
10-15 ವರ್ಷಗಳ ಹಿಂದೆ ಚಿತ್ರದುರ್ಗದ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇತ್ತು. ಕಳೆದ ಎರಡೂ¾ರು ವರ್ಷಗಳಿಂದ ಹಾಜರಾತಿಯಲ್ಲಿ ಏರಿಕೆಯಾಗಿದೆ. ನಗರದ ಜನಸಂಖ್ಯೆ ಈಗ ಮೂರು ಲಕ್ಷ ದಾಟಿರುವುದರಿಂದ ರಾಜ್ಯ ಸರ್ಕಾರ ಹೊಸ ಶಾಲಾ-ಕಾಲೇಜುಗಳನ್ನು ಆರಂಭಿಸಬೇಕು.
ಜಿ.ಎಚ್. ತಿಪ್ಪಾರೆಡ್ಡಿ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.