ಚೆಂಬೂರು ಕರ್ನಾಟಕ ಸಂಘ: ಸಾಧಕರಿಗೆ ಗೌರವಾರ್ಪಣೆ
Team Udayavani, Sep 14, 2017, 2:45 PM IST
ಮುಂಬಯಿ: ಚೆಂಬೂರು ಕರ್ನಾಟಕ ಸಂಘ ಆಡಳಿತದ ನೂತನ ಚೆಂಬೂರು ಕರ್ನಾಟಕ ಕಾಲೇಜ್ ಆಫ್ ಲಾ ಶಿಕ್ಷಣ ಸಂಸ್ಥೆಯ ಉದ್ಘಾಟನ ಸಮಾರಂಭವು ಸೆ. 10 ರಂದು ಪೂರ್ವಾಹ್ನ ಸಂಸ್ಥೆಯ ಸಭಾಂಗಣದಲ್ಲಿ ಜರಗಿತು.
ಸಮಾರಂಭದಲ್ಲಿ ಉದ್ಘಾಟಕರಾಗಿ ಆಗಮಿಸಿದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಜಸ್ಟೀಸ್ ಡಾ| ಶಿವರಾಜ್ ವಿ. ಪಾಟೀಲ್, ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹಿರಿಯ ನ್ಯಾಯವಾದಿ ಇಕ್ಬಾಲ್ ಚಾಗ್ಲಾ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ರೋಹಿತ್ ಎ. ಕಪಾಡಿಯಾ ಅವರನ್ನು ಸಂಸ್ಥೆಯ ವತಿಯಿಂದ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಅಭಿನಂದಿಸಿ ಗೌರವಿಸಿದರು. ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ ನ್ಯಾಯವಾದಿ ಎಚ್. ಕೆ. ಸುಧಾಕರ್ ಅವರನ್ನು ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ವೇದಿಕೆಯಲ್ಲಿ ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ ನ್ಯಾಯವಾದಿ ಎಚ್. ಕೆ. ಸುಧಾಕರ್, ಗೌರವ ಕಾರ್ಯದರ್ಶಿ ರಂಜನ್ ಕುಮಾರ್ ಆರ್. ಅಮೀನ್, ಗೌರವ ಕೋಶಾಧಿಕಾರಿ ಟಿ. ಆರ್. ಶೆಟ್ಟಿ, ಮಾಜಿ ಅಧ್ಯಕ್ಷ ಜಯ ಶೆಟ್ಟಿ, ಪ್ರಾಂಶುಪಾಲ ಡಾ| ದಿನಕರ್ ಪವಾರ್ ಮೊದಲಾದವರು ಉಪಸ್ಥಿತರಿದ್ದರು.
ಆಡಳಿತ ಸಮಿತಿಯ ಉಪಾಧ್ಯಕ್ಷ ಪ್ರಭಾಕರ ಬೋಳಾರ್,ಜತೆ ಕಾರ್ಯದರ್ಶಿ ದೇವದಾಸ್ ಕೆ. ಶೆಟ್ಟಿಗಾರ್, ಜತೆ ಕೋಶಾಧಿಕಾರಿ ಸುಂದರ ಎಂ. ಕೋಟ್ಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ವಿಶ್ವನಾಥ ಎನ್. ಶೇಣವ, ಗುಣಕರ ಎಚ್. ಹೆಗ್ಡೆ, ಯೋಗೀಶ್ ವಿ. ಗುಜರನ್, ಮಧುಕರ ಜಿ. ಬೈಲೂರು, ರಾಮ ಪೂಜಾರಿ, ಸುಧಾಕರ ಅಂಚನ್, ಮೋಹನ್ ಎಸ್. ಕಾಂಚನ್, ಚಂದ್ರಶೇಖರ ಎ. ಅಂಚನ್, ಅಶೋಕ್ ಸಾಲ್ಯಾನ್, ಜಯ ಎಂ. ಶೆಟ್ಟಿ, ದಯಾಸಾಗರ್ ಚೌಟ, ಸುಧೀರ್ ಪುತ್ರನ್, ಚಂದ್ರಕಾಂತ್ ನೈಕ್, ಸಂಜೀವ ಎಸ್. ಶೆಟ್ಟಿ, ನ್ಯಾಯವಾದಿ ಮೊದ್ದಿನ್ ಮುಂಡ್ಕೂರು, ಚಂದ್ರಶೇಖರ ಪಾಲೆತ್ತಾಡಿ, ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನ್ಯಾಯವಾದಿಗಳು, ವಿದ್ಯಾರ್ಥಿಗಳು, ಪಾಲಕರು, ತುಳು-ಕನ್ನಡಿಗರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.