ಪ್ರತಿ 150 ಕಿ.ಮೀ.ಗೆ ಸಣ್ಣ ವಿಮಾನ ನಿಲ್ದಾಣ: ಸಿಎಂ
Team Udayavani, Sep 15, 2017, 7:15 AM IST
ಬೆಳಗಾವಿ: ರಾಜ್ಯದಲ್ಲಿ ಈಗಿರುವ ವಿಮಾನ ನಿಲ್ದಾಣಗಳ ಜತೆಗೆ ಪ್ರತಿ 150 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಚಿಕ್ಕ ವಿಮಾನ ನಿಲ್ದಾಣ ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮೇಲ್ದರ್ಜೆಗೇರಿಸಿದ ಸಾಂಬ್ರಾ ನೂತನ ವಿಮಾನ ನಿಲ್ದಾಣವನ್ನು ಗುರುವಾರ ಕೇಂದ್ರ ವಿಮಾನಯಾನ ಸಚಿವ ಪಿ.ಗಜಪತಿರಾಜು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಮಾತ್ರ ದೊಡ್ಡ ವಿಮಾನ ನಿಲ್ದಾಣಗಳಿವೆ. ಬೆಳಗಾವಿ, ಮೈಸೂರು, ಹುಬ್ಬಳ್ಳಿಯಲ್ಲಿ ದೇಶೀಯ ವಿಮಾನ ನಿಲ್ದಾಣಗಳಿವೆ. ಇದಕ್ಕೆ ಪೂರಕವಾಗಿ ಈಗ ಇರುವ ವಿಮಾನ ನಿಲ್ದಾಣಗಳ ಜತೆಗೆ ಪ್ರತಿ 150 ಕಿ. ಮೀ. ವ್ಯಾಪ್ತಿಯಲ್ಲಿ ಒಂದು ಚಿಕ್ಕ ವಿಮಾನ ನಿಲ್ದಾಣ ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಜನ ವಿಮಾನದಲ್ಲಿ ಪ್ರಯಾಣ ಮಾಡುವವರು ಕರ್ನಾಟಕದಲ್ಲಿದ್ದಾರೆ. ಇದರಲ್ಲಿ ರಾಜ್ಯಕ್ಕೆ ಮೊದಲ ಸ್ಥಾನವಿದೆ. ಈ ನಿಟ್ಟಿನಲ್ಲಿ ಕಲಬುರಗಿ, ಶಿವಮೊಗ್ಗ, ಹಾಸನ ಮತ್ತು ವಿಜಯಪುರದಲ್ಲಿ ಚಿಕ್ಕ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.