ಮಹಿಳಾ ಸುರಕ್ಷತೆ, ಸಬಲೀಕರಣಕ್ಕೆ ಪ್ರತ್ಯೇಕ ನೀತಿ


Team Udayavani, Sep 15, 2017, 11:49 AM IST

mahila-surakhshate.jpg

ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.

ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಶಿಕ್ಷಣ ಪಡೆದು ಸ್ವಾವಲಂಬಿಯಾದರೆ ಇಡೀ ಕುಟುಂಬ ಆರ್ಥಿಕವಾಗಿಯೂ ಸದೃಢವಾಗಿರುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಹಣ ವೆಚ್ಚ  ಮಾಡುತ್ತಿದೆ.  ವಿಕಲಚೇತನ ತಾಯಂದಿರಿಗೆ ಮಾಸಿಕ ಎರಡು ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಬಾಲ್ಯ ವಿವಾಹ ತಡೆಯಲು ಪರಿಣಾಮಕಾರಿ ತಿದ್ದುಪಡಿ ಕಾಯ್ದೆ ತಂದಿದ್ದು  ಅದಕ್ಕೆ ರಾಷ್ಟ್ರಪತಿ ಅವರ ಅಂಕಿತ ಸಿಕ್ಕಿದೆ. ಈ ತಿದ್ದುಪಡಿ ಕಾಯ್ದೆ ಜಾರಿಯಾದರೆ  ಬಾಲ್ಯ ವಿವಾಹ ಅಪರಾಧಕ್ಕಾಗಿ ಗರಿಷ್ಠ ಎರಡು ವರ್ಷ ಶಿಕ್ಷೆಯಾಗಲಿದೆ.

ಜತೆಗೆ ನಿಧಿಗಾಗಿ ಮಕ್ಕಳನ್ನು ಬಲಿ ನೀಡುವುದು, ಹರಕೆ ನೆಪದಲ್ಲಿ ಮಕ್ಕಳನ್ನು ಕೆಳಕ್ಕೆ ಬಿಸಾಡುವುದು ಸೇರಿ ಅಮಾನವೀಯ ಆಚರಣೆಗಳು ನಿಲ್ಲಲಿವೆ. ಹೆಣ್ಣು ಮಕ್ಕಳನ್ನು ವೇಶ್ಯವಾಟಿಕೆಗೆ ದೂಡುವಂತಹ ಅನಿಷ್ಟಗಳನ್ನು ತಡೆಯಲು ಪ್ರಬಲವಾದ ಕಾಯ್ದೆ ಅಗತ್ಯವಿದೆ. ಮಹಾರಾಷ್ಟ್ರ ಮಾದರಿಯಲ್ಲಿ ಮೌಡ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಕೇಂದ್ರ ಸರ್ಕಾರವೇ ದೇಶಾದ್ಯಂತ ಮೌಡ್ಯ ನಿಷೇಧ ಕಾಯ್ದೆ ಜಾರಿಗೆ ತರುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರ ದತ್ತು ಸ್ವೀಕಾರ ನಿಯಮಗಳನ್ನು ಸರಳೀಕರಣ ಮಾಡಿದೆ. ಇದರಿಂದ ಸಾಕಷ್ಟು ಅನಾಥ ಮಕ್ಕಳಿಗೆ ಜೀವನ ಸಿಕ್ಕಂತಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ತೊಟ್ಟಿಲು ಯೋಜನೆ ಜಾರಿಗೆ ತಂದಿದೆ. ಹೋಂ ಸ್ಟೇಗಳಲ್ಲಿ ಮಕ್ಕಳಿಗೆ ಜಾನಪದ ಅಕಾಡೆಮಿಯಿಂದ ಜಾನಪದ ಕಲೆಯ ಬಗ್ಗೆ, ಸಾಹಿತ್ಯದ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ  , ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ 14ಕ್ಕೂ ಹೆಚ್ಚು ಕಾನೂನುಗಳಿವೆ. ಅವು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಎಲ್ಲವನ್ನೂ ಕ್ರೂಢೀಕರಿಸಿ ಸಮರ್ಥವಾದ ಏಕರೂಪ ಕಾನೂನು ಮಾಡುವ ಅಗತ್ಯವಿದೆ ಎಂದು ತಿಳಿಸಿದರು.

ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಪದ್ಧತಿ, ಬಾಲಾಪರಾಧ ಕಾನೂನು , ಮಕ್ಕಳ ಹಕ್ಕುಗಳ ರಕ್ಷಣೆ ಕಾನೂನು ಸೇರಿದಂತೆ ದೇಶದಲ್ಲಿ ಹಲವಾರು ಕಾನೂನುಗಳಿದ್ದರೂ ಕಾಲಮಿತಿಯಲ್ಲಿ ಜಾರಿಯಾಗಿಲ್ಲ. ಇನ್ನು ಕೆಲವು ಕಾನೂನುಗಳು ಈಗಿನ ಕಾಲಮಾನಕ್ಕೆ ಅನುಕೂಲವಾಗಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನು ಕೂಡ ಜಾರಿಯಾಗಿಲ್ಲ. ಹೀಗಾಗಿ, ಏಕರೂಪ ಕಾನೂನು ಅಗತ್ಯವಿದೆ ಎಂದು ಹೇಳಿದರು.

ದೇಶದಲ್ಲಿ ಮೂರನೇ ಒಂದರಷ್ಟು ಮಕ್ಕಳ ಸಂಖ್ಯೆಯಿದೆ. ಆದರೆ, ಬಜೆಟ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಹಣ ಖರ್ಚು ಮಾಡುತ್ತಿಲ್ಲ. ಎಲ್ಲ ರಾಜ್ಯಗಳು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಣ ಖರ್ಚು ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ರಾಜ್ಯ ಸರ್ಕಾರ ಕ್ಷೀರಧಾರೆ ಮತ್ತು ಅಂಗನವಾಡಿಯಲ್ಲಿ ಮೊಟ್ಟೆ ನೀಡುವ ಯೋಜನೆಯಿಂದ ಮಕ್ಕಳಲ್ಲಿ ಪೌಷ್ಠಿಕತೆ ವೃದ್ಧಿಯಾಗುತ್ತಿದೆ ಎಂದು ಹೇಳಿದರು. 

ವಿಧಾನಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿಕರ್ನಾಟಕ ಮತ್ತು ತೆಲಂಗಾಣ ಹಾಗೂ ಆಂಧ್ರಪ್ರದೇಶದ ಯುನಿಸೆಫ್ ಮುಖ್ಯಸ್ಥೆ ಮೈತಲ್ ರಸಿಯಾ, ವಿಧಾನಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಐವಾನ್‌ ಡಿಸೋಜ  ಪರಿಷತ್‌ ಸದಸ್ಯ ಗಣೇಶ್‌ ಕಾರ್ಣಿಕ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.