ಸ್ವಚ್ಛ ಸರ್ವೇಕ್ಷಣ್-2018 ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
Team Udayavani, Sep 15, 2017, 12:10 PM IST
ಮೈಸೂರು: 2018ರ ಜನವರಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಆರಂಭವಾಗಲಿದ್ದು, ನಗರ ಸ್ಥಳೀಯ ಸಂಸ್ಥೆಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಂಡಲ್ಲಿ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯಲ್ಲಿ ಉತ್ತಮ ಶ್ರೇಯಾಂಕ ಗಳಿಸಬಹುದು ಎಂದು ಮೈಸೂರು ಮಹಾ ನಗರ ಪಾಲಿಕೆ ಆಯುಕ್ತ ಜಿ.ಜಗದೀಶ್ ತಿಳಿಸಿದರು.
ನಗರದಲ್ಲಿ ಗುರುವಾರ ರಾಜ್ಯ ನಗರಾಭಿವೃದ್ಧಿ ಸಂಸ್ಥೆ, ಆಡಳಿತ ತರಬೇತಿ ಸಂಸ್ಥೆ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಚ್ಛ ಸರ್ವೇಕ್ಷಣೆ -2018 ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯ ಪ್ರಶ್ನಾವಳಿಯಲ್ಲಿನ ಪ್ರತಿಯೊಂದು ಪ್ರಶ್ನೆಗಳಿಗೂ ಅಂಕ ಹಂಚಿಕೆ ಮಾಡಿಕೊಂಡು ಒಟ್ಟಾರೆ ಗಳಿಸಿರುವ ಅಂಕಗಳ ಆಧಾರದ ಮೇಲೆ ನಗರ ಸ್ಥಳೀಯ ಸಂಸ್ಥೆಯ ಸ್ಥಾನವನ್ನು ಈಗಿನಿಂದಲೇ ತಿಳಿದುಕೊಳ್ಳಬಹುದಾಗಿದೆ.
ನಗರ ಸ್ಥಳೀಯ ಸಂಸ್ಥೆಯು ಯಾವ ಅಂಶದಲ್ಲಿ ಹಿಂದುಳಿದಿದೆ ಎಂಬುದನ್ನು ತಿಳಿದುಕೊಂಡು ಆಯಾ ಅಂಶಗಳಲ್ಲಿ ನಿರೀಕ್ಷಿತ ಮಟ್ಟಕ್ಕೆ ತಲುಪಲು ಬೇಕಾದ ಕ್ರಮ ತೆಗೆದುಕೊಳ್ಳಬಹುದು ಎಂದು ಹೇಳಿದರು. ಕಾರ್ಯಾಗಾರ ಸಂಯೋಜಕ ಮಲ್ಲಿಕಾರ್ಜುನ, ಕೇಂದ್ರ ಸಂಪನ್ಮೂಲ ವ್ಯಕ್ತಿ ಜಿ.ವೆಂಕಟೇಶ್ ಕಡಗದಕೈ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.