ತಾಂಡವವಾಡುತ್ತಿದೆ ಮಾನವೀಯತೆ ಬರ
Team Udayavani, Sep 15, 2017, 2:09 PM IST
ಹೊಸಪೇಟೆ: ನೀರಿನ ಬರಕ್ಕಿಂತ ಮಾನವೀಯತೆಯ ಬರ ತಾಂಡವಾಡುತ್ತಿದ್ದು, ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ ಅವರ ವಸ್ತುಗಳನ್ನು ಕಡಿಮೆ ಬೆಲೆಗೆ ಕೊಳ್ಳಲು ಹವಣಿಸುವುದೇ ಅಮಾನವೀಯ ಎನ್ನಿಸುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಬೇಸರ ವ್ಯಕ್ತಪಡಿಸಿದರು. ಕನ್ನಡ ವಿಶ್ವವಿದ್ಯಾಲಯದ ರಜತ ಮಹೋತ್ಸವ ಅಂಗವಾಗಿ ಮಂಟಪ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕರ್ನಾಟಕದ ಜ್ವಲಂತ ಸಮಸ್ಯೆಗಳು; ನೀರು, ಬರ ನಿರ್ವಹಣೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ನೀರು, ಬರ, ಕೃಷಿ ನಡುವೆ ಪರಸ್ಪರ ಸಂಬಂಧ ಇದೆ. ನೀರು, ಬರ ನಿರ್ವಹಣೆಯಲ್ಲಿ ಪ್ರಭುತ್ವದೊಂದಿಗೆ ನಾಗರಿಕರ ಪಾತ್ರವೂ ಇದೆ. ನಾವೆಲ್ಲ ಆತ್ಮ ವಂಚಕರಾಗಿದ್ದೇವೆ. ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ರೈತರಿಂದ ಕಡಿಮೆ ಬೆಲೆಗೆ ವಸ್ತುಗಳನ್ನು ಪಡೆಯಲು ಯೋಚಿಸುವುದೇ ಅಮಾನವೀಯ ಅನಿಸುತ್ತದೆ ಎಂದು ಹೇಳಿದರು.
ಪ್ರತಿ 2 ಗಂಟೆಗೊಮ್ಮೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ಥಳೀಯ ಲೇವಾದೇವಿಗಾರರ ಒತ್ತಡದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ವಿಷಯದಲ್ಲಿ ರಾಜಕೀಯ ಸಲ್ಲದು. ಸಮೀಕ್ಷೆ ಪ್ರಕಾರ ರೈತನ ಮಾಸಿಕ ಆದಾಯ 3,080 ರೂ. ಇದೆ. ಭೂ ಸ್ವಾಧೀನ ತಡೆಯಲು ಸಾಧ್ಯವಾಗುತ್ತಿಲ್ಲ. ಭೂ ಸುಧಾರಣಾ ಕಾಯಿದೆ ರೈತರಿಗೆ ಅನುಕೂಲವಾಗಿಲ್ಲ. ರೈತರ ಸಾಲ ಮನ್ನಾ ಅನಿವಾರ್ಯ ಆದರೆ ರಾಜಕೀಯಕರಣಗೊಂಡಿದೆ ಎಂದರು. ವಿಶ್ರಾಂತ ಪ್ರಾಧ್ಯಾಪಕ ಡಾ|ಟಿ.ಆರ್. ಚಂದ್ರಶೇಖರಯ್ಯ ಮಾತನಾಡಿ, ಬರ, ನೀರು, ನಿರ್ವಹಣೆ, ಜಾಗತಿಕ ಮಟ್ಟದ ಸಮಸ್ಯೆಯಾಗಿದ್ದರೂ ಎಲ್ಲರಿಗೂ ಸಮಸ್ಯೆ ತರುವುದಿಲ್ಲ. ವಾಣಿಜ್ಯ ಉದ್ದಿಮೆಗಳು, ನೌಕರಶಾಹಿ, ರಾಜಕಾರಣಿಗಳು, ಬರದ ಲಾಭ ಪಡೆಯುತ್ತಿದ್ದಾರೆ. ರೈತರು, ವಿಕಲಚೇತನರು ಅಂಚಿನಲ್ಲಿರುವವರು ತೊಂದರೆ ಅನುಭವಿಸುವಂತಾಗಿದೆ ಎಂದರು. ಪ್ರಾಧ್ಯಾಪಕ ಡಾ| ಸಿ.ಜಿ. ಲಕ್ಷ್ಮೀ ಪತಿ, ಸಾಮಾಜಿಕ ಕಾರ್ಯಕರ್ತ ಜನಾರ್ದನ ಕೆಸರಗದ್ದೆ ಮಾತನಾಡಿದರು. ಕುಲಪತಿ ಡಾ| ಮಲ್ಲಿಕಾ ಎಸ್. ಘಂಟಿ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಡಾ| ಡಿ. ಪಾಂಡುರಂಗಬಾಬು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.