ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಿ
Team Udayavani, Sep 15, 2017, 3:14 PM IST
ಹೊಸಪೇಟೆ: ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ
ಎಸ್.ಭೀಮಾನಾಯ್ಕ ಅಧ್ಯಕ್ಷತೆಯಲ್ಲಿ ಸಾಂಕ್ರಾಮಿಕ ರೋಗಗಳ ಹತೋಟಿ ಕುರಿತು ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಲಾಯಿತು.
ಹಗರಿಬೊಮ್ಮನಹಳ್ಳಿ ಕ್ಷೇತ್ರದ 4 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಲಕನಹಟ್ಟಿ, ಡಣಾಯಕನಕೆರೆ, ಜಿ.ನಾಗಲಾಪುರ ಹಾಗೂ ಡಾಣಾಪುರ ಗ್ರಾಮ ಪಂಚಾಯ್ತಿ ವ್ಯಾಪಿಯ ಗ್ರಾಮಗಳಲ್ಲಿ ಡೆಂಘೀ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗ-ರುಜಿನಗಳು ಹರುಡುವ ಭೀತಿ ಗ್ರಾಮಸ್ಥರನ್ನು ಕಾಡುತ್ತಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಎಲ್ಲಾ ಗ್ರಾಮಗಳಲ್ಲಿ ಚರಂಡಿಗಳಲ್ಲಿ ಹೊಳು ತೆಗೆಯುವ ಮೂಲಕ ಹೊರ ಸಾಗಿಸುವುದು. ವೈದ್ಯಾಧಿಕಾರಿಗಳ ಸಲಹೆ
ಪಡೆದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು. ಸೊಳ್ಳೆ ನಿಯಂತ್ರಣಕ್ಕಾಗಿ ಚರಂಡಿಗಳಿಗೆ ಬೀಚಿಂಗ್ ಪೌಡರ್ ಸಿಂಪಡಿಕೆ ಸೇರಿದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೂಡಲೇ ಕೈಗೊಳ್ಳುವುದು. ಕುಡಿಯುವ ನೀರಿನ ಟ್ಯಾಂಕ್ ಗಳನ್ನು 15 ದಿನಗಳೊಮ್ಮ ಸ್ವತ್ಛತೆ ಮಾಡಿ ಬೀಚಿಂಗ್ ಪೌಡರ್ ಸಿಂಪಡಿಸುವುದು ಸೇರಿದಂತೆ ಇತರೆ ಮುಂಜಾಗ್ರತ
ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಪಂ ಇಒ ವಾರದಲ್ಲಿ ಎರಡು ಬಾರಿಯಾದರೂ ತಮ್ಮ ಕ್ಷೇತ್ರ ವ್ಯಾಪ್ತಿಗೆ 4 ಗ್ರಾಮ ಪಂಚಾಯತಿಗೆ ಭೇಟಿ ನೀಡಿಬೇಕು.
ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯಗಳ ನಿರ್ಮಣ ಹಾಗೂ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಸಹಾಯಧನ ಪಾವತಿ ಮಾಡುವ ಮೂಲಕ 2 ಮುಂದಿನ ಅಕ್ಟೋಬರ್ 2.ರೊಳಗೆ ಗ್ರಾಮ ಪಂಚಾಯತಿಯನ್ನು ಬಯಲು ಬಹಿರ್ದೆಸಿ ಮುಕ್ತ ಮಾಡಲು ಅಧಿಕಾರಿಗಳು ಶ್ರಮ ವಹಿಸಬೇಕು ಸೂಚಿಸಿದರು. ತಾಪಂ ಇಒ ಟಿ.ವೆಂಕೊಬಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಪಿಡಿಒಗಳು ಕೇಂದ್ರ ಸ್ಥಾನದಿಂದ ದೂರ ಉಳಿಯುತ್ತಿದ್ದಾರೆ ಎಂಬ ದೂರುಗಳು ಗ್ರಾಮಸ್ಥರಿಂದ ವ್ಯಾಪಕವಾಗಿ ಕೇಳಿ
ಬರುತ್ತಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ವಾಸವಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು. ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುವವರಿಗೆ ಮಾತ್ರ ಅವಕಾಶವಿದ್ದು, ನಿರ್ಲಕ್ಷ್ಯಧೋರಣೆ ಅನುಸರಿಸುವ ಅಧಿಕಾರಿಗಳು ಬೇರೆಡೆ ಹೋಗಬಹುದು.
ಎಸ್.ಭೀಮಾನಾಯ್ಕ,
ಹಗರಿಬೊಮ್ಮಹಳ್ಳಿ ಶಾಸಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.