ದೇವರಾಜ್ ಬಿಝಿಯಾಗಿದ್ದಾರೆ!
Team Udayavani, Sep 15, 2017, 6:13 PM IST
“ನೀವು ಕರೆ ಮಾಡಿರುವ ಚಂದಾದಾರು ಬಿಝಿಯಾಗಿದ್ದಾರೆ’ ಎಂಬ ಚಿತ್ರದ ಬಗ್ಗೆ ಓದಿದ ನೆನಪಿರಬೇಕು. ಅದೇ “ತಿಥಿ’ ಖ್ಯಾತಿಯ ಪೂಜಾ ನಟಿಸುತ್ತಿರುವ ಹೊಸ ಚಿತ್ರ ಅದು. ಈ ಚಿತ್ರವನ್ನು “ದೂಧ್ ಸಾಗರ್’ ನಿರ್ದೇಶಿಸಿದ್ದ ಸ್ಯಾಮ್ಯುಯಲ್ ನಿರ್ದೇಶಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಇನ್ನಷ್ಟು ಬೆಳವಣಿಗೆಗಳಾಗಿದ್ದು, ಮುಂದಿನ ತಿಂಗಳ 10ರಂದು ಚಿತ್ರ ಪ್ರಾರಂಭವಾಗಲಿದೆ.
ಪ್ರಮುಖವಾಗಿ ಈ ಚಿತ್ರಕ್ಕೆ ದೇವರಾಜ್, ಶೃತಿ, ತಾರಾರಂತಹ ಹಿರಿಯರ ಆಗಮನವಾಗಿದೆ. ಈ ಮೂವರೂ ಚಿತ್ರದ ಕಥೆ ಕೇಳಿ ಒಪ್ಪಿಕೊಂಡು, ಚಿತ್ರದ ಭಾಗವಾಗುವುದಕ್ಕೆ ಸಮ್ಮತಿ ನೀಡಿದ್ದಾರೆ. ಇನ್ನು ಇವರೆಲ್ಲರ ಜೊತೆಗೆ ಶೀತಲ್ ಶೆಟ್ಟಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಮನೋಜ್ ಜಾರ್ಜ್ ಅವರ ಸಂಗೀತ, ಸುಬ್ಬಯ್ಯ ಕುಟ್ಟಪ್ಪ ಅವರ ಛಾಯಾಗ್ರಹಣವಿದೆ.
ಈ ಚಿತ್ರದಲ್ಲಿ ದೇವರಾಜ್ ಅವರದ್ದು ವಿಭಿನ್ನವಾದ ಪಾತ್ರವಾಗಿದ್ದು, ಹಿಂದೆಂದು ನೋಡಿರದ ಗೆಟ್ಟಪ್ಪಿನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರಂತೆ. ಅದಕ್ಕೆ ಸರಿಯಾಗಿ, ಅವರು ಈಗಾಗಲೇ ತಯಾರಿ ಶುರು ಮಾಡಿದ್ದಾರೆ. ಮನುಷ್ಯ ಸಂಬಂಧಗಳು ಸಡಿಲವಾದರೆ ಅದನ್ನು ಮತ್ತೆ ಸರಿಯಾಗಿಸೋದು ಎಷ್ಟು ಕಷ್ಟ ಎಂದು ಹೇಳುವ ಈ ಚಿತ್ರಕ್ಕೆ ಬೆಂಗಳೂರು, ಗೋವಾ, ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಈ ಚಿತ್ರವನ್ನು ಮಧುಸೂಧನ್, ತಮ್ಮ ಗೆಳೆಯರೊಂದಿಗೆ ಸೇರಿ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.