“ಕುರುಡ ಕರಿ ಬೆಕ್ಕು ಹುಡುಕುವಂತಿದೆ’


Team Udayavani, Sep 16, 2017, 7:15 AM IST

b150147.jpg

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯಶೈಲಿಯು “ಕುರುಡನೊಬ್ಬ ಕತ್ತಲಕೋಣೆಯಲ್ಲಿ ಕರಿ ಬೆಕ್ಕನ್ನು ಬೆನ್ನಟ್ಟಿ ಹುಡುಕುವಂತಿದೆ’  ಇದು ,ಮಾಜಿ ಸಿಎಂ ಯಡಿಯೂರಪ್ಪ ಪರ ವಕೀಲರು ಎಸಿಬಿ ತನಿಖಾ ವೈಖರಿ ಬಗ್ಗೆ ಹೈಕೋರ್ಟ್‌ಗೆ ತಿಳಿಸಿದ ಪರಿಯಿದು.

ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್‌ , ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್‌ ಸಂಬಂಧ ಅರ್ಜಿದಾರರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲದಿದ್ದರೂ, ವಿನಾಕಾರಣ ಎಸಿಬಿ  ಎಫ್ಐಆರ್‌ ದಾಖಲಿಸಿಕೊಂಡು “ಕುರುಡನೊಬ್ಬ ಕತ್ತಲಕೋಣೆಯಲ್ಲಿ ಕಪ್ಪುಬಣ್ಣದ ಬೆಕ್ಕನ್ನು ಬೆನ್ನಟ್ಟಿ ಹುಡುಕುವಂತೆ ನಡೆದುಕೊಳ್ಳುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರು ಲಂಚಕ್ಕೆ ಬೇಡಿಕೆ ಇಟ್ಟ, ಪಡೆದುಕೊಂಡಿರುವ, ಯಾರಿಂದ ಪಡೆದುಕೊಂಡಿದ್ದಾರೆ ಹೇಗೆ ಸ್ವೀಕರಿಸಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳಿಲ್ಲ. ಜೊತೆಗೆ ದೂರುದಾರರು  ಭೂ ಮಾಲೀಕರಲ್ಲ, ಸರ್ಕಾರಿ ಅಧಿಕಾರಿಯೂ ಅಲ್ಲ ಹೀಗಿದ್ದರೂ ಮೂರನೇ ವ್ಯಕ್ತಿ ನೀಡಿದ ದೂರನ್ನೇ ಪರಿಗಣಿಸಿ ತನಿಖೆ ನಡೆಸಲು ಮುಂದಾಗಿದೆ ಎಂದರು.ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತನಿಖೆ ನಡೆದರೇ ಆರೋಪದ ಬಗ್ಗೆ ಸಾಬೀತಾಗಬಹುದಲ್ಲ ಎಂದಿತು.

ಇದಕ್ಕೆ ಉತ್ತರಿಸಿದ  ವಕೀಲರು ,ಎಸಿಬಿ ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಬೇಕಾದ ಅಗತ್ಯ ಸಾಕ್ಷ್ಯಾಧಾರಗಳೇ ಲಭ್ಯವಿಲ್ಲ. ಯಾರೋ ನೀಡಿದ ದೂರನ್ನು ಪರಿಗಣಿಸಿ ಏಕಾಏಕಿ ಎಫ್ಐಆರ್‌ ದಾಖಲಿಸುವುದಾದರೇ ಸರ್ಕಾರಿ ಅಧಿಕಾರಿಗಳ ವಿರುದ್ಧ ಲೆಕ್ಕವಿಲ್ಲದಷ್ಟು ಪ್ರಕರಣಗಳು ದಾಖಲಾಗುತ್ತವೆ. ಹೀಗಾಗಿ ಅರ್ಜಿದಾರರ ವಿರುದ್ಧ ತನಿಖೆ ಮುಂದುವರಿಸಲು ಕಾನೂನಿನಲ್ಲಿ ಅವಕಾಶವಿಲ್ಲದಿರುವುದರಿಂದ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು.

ಈ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ. 18ಕ್ಕೆ ಮುಂದೂಡಿತು. ಅಲ್ಲದೆ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ನೀಡಿರುವ ಮಧ್ಯಂತರ ಆದೇಶವನ್ನು ವಿಸ್ತರಿಸಿತು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.