ಪರಿಷತ್ ಸದಸ್ಯರ ಅಹೋರಾತ್ರಿ ಧರಣಿ ತಾತ್ಕಾಲಿಕ ಮುಂದೂಡಿಕೆ
Team Udayavani, Sep 16, 2017, 6:15 AM IST
ಬೆಂಗಳೂರು:ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನಪರಿಷತ್ ಸದಸ್ಯರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ನಡೆಸುತ್ತಿದ್ದ ಅಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಸೆಪ್ಟೆಂಬರ್ 19 ರವರೆಗೆ ಮುಂದೂಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸೆಪ್ಟೆಂಬರ್ 19 ಕ್ಕೆ ಸಭೆ ನಿಗದಿಗೊಳಿಸಲಾಗಿದೆ. ಅಲ್ಲಿವರೆಗೆ ಧರಣಿ ಕೈಬಿಡುವಂತೆ ಮುಖ್ಯಮಂತ್ರಿಯವರು ಮಾಡಿದ ಮನವಿಗೆ ಸ್ಪಂದಿಸಿ ತಾತ್ಕಾಲಿಕವಾಗಿ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಯವರ ಜತೆ ನಡೆದ ಸಭೆಯ ನಂತರ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಅವರ ಕಚೇರಿಯಲ್ಲಿ ಸಭೆ ನಡೆಸಿ, ಧರಣಿ ತಾತ್ಕಾಲಿಕವಾಗಿ ಮುಂದೂಡುವ ತೀರ್ಮಾನ ಕೈಗೊಳ್ಳಲಾಯಿತು.
ಮುಖ್ಯಮಂತ್ರಿಯವರು ಬೇಡಿಕೆಗಳ ಈಡೇರಿಕೆ ಬಗ್ಗೆ ಪೂರಕವಾಗಿ ಸ್ಪಂದಿಸುವ ಭರವಸೆ ಇದೆ. ಜತೆಗೆ ಕಾಲವಕಾಶ ಕೋರಿ ಸೆಪ್ಟೆಂಬರ್ 19 ಕ್ಕೆ ಮತ್ತೂಮ್ಮೆ ಸಭೆ ನಿಗದಿ ಮಾಡಿದ್ದಾರೆ. ಹೀಗಾಗಿ ಅಲ್ಲಿವರೆಗೆ ಕಾಯುತ್ತೇವೆ. ಅಂದಿನ ಸಭೆಯಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ಸೆಪ್ಟೆಂಬರ್ 20 ರಂದು ಮತ್ತೆ ಶಿಕ್ಷಕರು-ಉಪನ್ಯಾಸಕರ ಸಂಘಟನೆಗಳ ಜತೆ ಸಭೆ ನಡೆಸಿ ಮುಂದಿನ ಹೋರಾಟ ರೂಪು-ರೇಷೆ ನಿಗದಿಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಲಾಗುವುದು ಎಂದು ಜೆಡಿಎಸ್ ಸದಸ್ಯ ರಮೇಶ್ಬಾಬು ತಿಳಿಸಿದ್ದಾರೆ.
ಹೀಗಾಗಿ, ಹತ್ತು ದಿನಗಳಿಂದ ನಡೆಯುತ್ತಿದ್ದ ಆಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮೆರವಣಿಗೆಯಲ್ಲೇ ಹೋದರು ಶುಕ್ರವಾರ ಗೃಹ ಕಚೇರಿ ಕೃಷ್ಣಾಗೆ ಮುಖ್ಯಮಂತ್ರಿಯವರ ಜತೆ ಚರ್ಚೆಗಾಗಿ ಧರಣಿ ನಿರತ ವಿಧಾನಪರಿಷತ್ ಸದಸ್ಯರು ಮೆರವಣಿಗೆಯಲ್ಲೇ ತೆರಳಿದರು.ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಿತ್ತಿ ಪತ್ರಗಳನ್ನು ಹಿಡಿದು ಹದಿಮೂರು ವಿಧಾನಪರಿಷತ್ ಸದಸ್ಯರು ಹಾಗೂ ಶಿಕ್ಷಕರ ಉಪನ್ಯಾಸಕರುಗಳು ಬೃಹತ್ ಸಂಖ್ಯೆಯಲ್ಲಿ ವಿಧಾನಸೌಧದಿಂದ ಕೃಷ್ಣಾವರೆಗೆ ನಡೆದುಕೊಂಡೇ ಹೋದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.