ಪ್ರತ್ಯೇಕ ಧರ್ಮದ ಬಗ್ಗೆ ಸ್ಪಷ್ಟತೆ ಇದೆ: ಸಚಿವ ಶರಣ ಪ್ರಕಾಶ್
Team Udayavani, Sep 16, 2017, 6:25 AM IST
ಬೆಂಗಳೂರು: ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಂತ್ರ ಧರ್ಮವಾಗಬೇಕು ಎಂಬ ಬಗ್ಗೆ ಸ್ಪಷ್ಟತೆಯಿದ್ದು, ಯಾವ ಹೆಸರಿನಲ್ಲಿ ಧರ್ಮವಾಗಬೇಕು ಎಂಬ ಬಗ್ಗೆ ಸಮಿತಿಯ ನಿರ್ಣಯದಂತೆ ಮುಂದುವರಿಯಲಾಗುವುದು ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಪ್ರತ್ಯೇಕ ಧರ್ಮ ವಿಚಾರದಲ್ಲಿ ಯಾವುದೇ ವಿವಾದವಿಲ್ಲ. ಎಲ್ಲರೂ ಒಟ್ಟಿಗೆ ಮುಂದುವರಿಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೇಳಿಕೆ ಸಂಬಂಧ ಯಾವುದೇ ವಿವಾದವೂ ಇಲ್ಲ. ಹಿನ್ನಡೆಯೂ ಆಗಿಲ್ಲ. ಸ್ವತಂತ್ರ ಧರ್ಮವಾಗಬೇಕು ಎಂಬುದಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಸದ್ಯದಲ್ಲೇ ಸಭೆ ಸೇರಿ ಸಮಿತಿ ರಚನೆಗೆ ಚರ್ಚಿಸಿ ಮುಂದುವರಿಯಲಾಗುವುದು ಎಂದು ಹೇಳಿದರು.
ಪ್ರತ್ಯೇಕ ಧರ್ಮಕ್ಕೆ ವೀರ ಲಿಂಗಾಯತ ಎಂಬ ಹೆಸರಿಡಬೇಕು ಎಂಬ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿರುತ್ತದೆ. ಸಮಾಜದಲ್ಲಿ ಒಮ್ಮತದಿಂದ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.