ಡ್ರೈವಿಂಗ್ ಲೈಸನ್ಸ್: ಆಧಾರ್ ಜೋಡಣೆ ಕಡ್ಡಾಯ
Team Udayavani, Sep 16, 2017, 8:14 AM IST
ಗುರುಗ್ರಾಮ: ಪಾನ್ ಕಾರ್ಡ್ ಜತೆಗೆ ಆಧಾರ್ ಜೋಡಣೆ ಮಾಡಿದ ಬಳಿಕ ಇನ್ನು ಡ್ರೈವಿಂಗ್ ಲೈಸನ್ಸ್ಗೂ ಆಧಾರ್ ಜೋಡಣೆ ಮಾಡಬೇಕು. ಇಂಥ ಒಂದು ಕ್ರಮದ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಬಹು ಪರವಾನಿಗೆ ವ್ಯವಸ್ಥೆ ನಿಯಂತ್ರಿಸಲು ಇಂಥ ಕ್ರಮ ಅನಿವಾರ್ಯ ಎನ್ನುವುದು ಕೇಂದ್ರ ಸರಕಾರದ ವಾದ.
ಹರಿಯಾಣದ ಗುರುಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಈ ಮಾಹಿತಿ ನೀಡಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆಗೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಈ ವ್ಯವಸ್ಥೆ ಜಾರಿಯಾಗಲಿದೆ ಎಂದಿದ್ದಾರೆ. ಡಿಜಿಟಲ್ ಗುರುತಿನ ಮೂಲಕ ವಾಹನ ಇರುವಿಕೆಯನ್ನು ಮತ್ತಷ್ಟು ದೃಢಪಡಿಸಬಹುದು. ಅದಕ್ಕೆ ತಂತ್ರಜ್ಞಾನ ನೆರವು ನೀಡಲಿದೆ ಎಂದಿದ್ದಾರೆ ಕೇಂದ್ರ ಸಚಿವ. ಹೀಗಾಗಿ ಕೇಂದ್ರ ಸರಕಾರ ಅದನ್ನು ಆದ್ಯತೆಯ ಮೇಲೆ ಜಾರಿಗೊಳಿಸಲಿದೆ ಎಂದು ಹೇಳಲಾಗುತ್ತಿದೆ.
ಆಧಾರ್ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದೆ. ಅದನ್ನು ಕದಿಯಲು ಅಥವಾ ಸೋರಿಕೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.