ಬರದ ಛಾಯೆ ಬದಲಿಸಿದ ವರುಣ
Team Udayavani, Sep 16, 2017, 8:51 AM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಸುರಿದ ಮಳೆ ಬರಗಾಲದ ಚಿತ್ರಣವನ್ನೇ ಬದಲಾಯಿಸಿದೆ. ಆಗಸ್ಟ್ ಮಧ್ಯ
ಭಾಗದವರೆಗೆ ಹಲವೆಡೆ ಮಳೆ ಬಾರದೆ ಇದ್ದುದರಿಂದ 176 ತಾಲೂಕುಗಳ ಪೈಕಿ ಸುಮಾರು 160 ತಾಲೂಕುಗಳಲ್ಲಿ ಬರ ಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿತ್ತು. ಆದರೆ, ವರುಣನ ಕೃಪೆಯಿಂದ ಬರ ಮಾಯ ವಾಗಿ ರಾಜ್ಯ ಸರಕಾರ ಬರ ಪೀಡಿತ ಪ್ರದೇಶ ಘೋಷಣೆಯನ್ನೇ ಕೈಬಿಡುವ ಪರಿಸ್ಥಿತಿ ಈಗ ನಿರ್ಮಾಣವಾಗಿದೆ.
ರಾಜ್ಯದ 176 ತಾಲೂಕುಗಳ ಪೈಕಿ 36 ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಒಂದು ತಾಲೂಕಿನಲ್ಲಿ ಅತಿ ಕಡಿಮೆ, 48 ತಾಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. 91 ತಾಲೂಕುಗಳಲ್ಲಿ ವಾಡಿಕೆ ಮಳೆಯಾಗಿದ್ದು, ಆಗಸ್ಟ್, ಸೆಪ್ಟಂಬರ್ನಲ್ಲಿ ಸುರಿದ ಮಳೆ ಸರಕಾರ ಮತ್ತು ರಾಜ್ಯದ ಜನತೆಯಲ್ಲಿ ಮಂದಹಾಸ ಮೂಡಿಸಿದೆ. ಕರಾವಳಿ ಭಾಗದಲ್ಲಿ ಬೆಳ್ತಂಗಡಿ, ಬಂಟ್ವಾಳ, ಸುಳ್ಯ ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ಅತೀ ಕಡಿಮೆ ಮಳೆ ಬಿದ್ದಿದ್ದು, ಧಾರವಾಡ ಮತ್ತು ಕೊಡಗು ಜಿಲ್ಲೆಗಳ ಎಲ್ಲ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ.
ಕಂದಾಯ ಇಲಾಖೆ ಪ್ರತಿ ವರ್ಷ ಜೂನ್ನಿಂದ ಸೆಪ್ಟಂಬರ್ವರೆಗೂ ಮಳೆಯ ಪ್ರಮಾಣವನ್ನು ನೋಡಿಕೊಂಡು ಮುಂಗಾರು ಹಂಗಾಮಿನ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಸೆಪ್ಟಂಬರ್ 14ರ ವರೆಗಿನ ಮಳೆಯ ಪ್ರಮಾಣವನ್ನು ಗಮನಿಸಿದಾಗ, 37 ತಾಲೂಕುಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಸೆಪ್ಟಂಬರ್ ಅಂತ್ಯದ ವರೆಗೂ ಇನ್ನೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಅದರ ಆಧಾರದಲ್ಲಿ ಬರ ಪೀಡಿತ ತಾಲೂಕುಗಳ ಪಟ್ಟಿ ಸಿದ್ಧಪಡಿಸಲು ಕಂದಾಯ ಇಲಾಖೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.