ವಿಜಯನಗರ ಮೆಟ್ರೋ ಬಳಿ ಅಂಡರ್‌ ಪಾಸ್‌ ಬಜಾರ್‌


Team Udayavani, Sep 16, 2017, 12:49 PM IST

highcourt.jpg

ಬೆಂಗಳೂರು: ವಿಜಯನಗರ ಮೆಟ್ರೋ ನಿಲ್ದಾಣ ಮುಂಭಾಗದ ಫ‌ುಟ್‌ಪಾತ್‌ನಲ್ಲಿ “ಸುರಂಗ ಮಾರ್ಗದ ಹೈಟೆಕ್‌ ಬಜಾರ್‌ ‘ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ  ತಿಳಿಸಿದೆ.

ವಿಜಯನಗರ ಮೆಟ್ರೋ ನಿಲ್ದಾಣ ಮುಂಭಾಗದ ಫ‌ುಟ್‌ಪಾತ್‌ ಜಾಗ ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಶುಕ್ರವಾರ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್‌.ಕೆ ಮುಖರ್ಜಿ  ಹಾಗೂ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ  ವಿಭಾಗೀಯ ಪೀಠ ನಡೆಸಿತು.

ಈ ವೇಳೆ ವಾದ ಮಂಡಿಸಿದ ಬಿಬಿಎಂಪಿ ಪರ ವಕೀಲರು, ಫ‌ುಟ್‌ಪಾತ್‌ ತೆರವುಗೊಳಿಸಲು ಪಾಲಿಕೆ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ವಿಜಯನಗರದ ಮೆಟ್ರೋ ನಿಲ್ದಾಣದ ಮುಂಭಾದ ಸುರಂಗ ಮಾರ್ಗದಲ್ಲಿ ಹೈಟೆಕ್‌ ಬಜಾರ್‌ ನಿರ್ಮಾಣ ಮಾಡಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಅದೇ ರೀತಿ ಶಿವಾಜಿನಗರ ಬಸ್‌ ನಿಲ್ದಾಣದಲ್ಲಿಯೂ ಬಜಾರ್‌ ನಿರ್ಮಿಸಲು ನಿರ್ಧರಿಸಿದ್ದು ಈ ಸಂಬಂಧ ಅಕ್ಟೋಬರ್‌ 9 ರಂದು 10 ಕೋಟಿ ರೂ. ವೆಚ್ಚದ ಟೆಂಡರ್‌ನ್ನು ಕರೆಯಲಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವಾದ ಪರಿಗಣಿಸಿದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆಗೆ ಫ‌ುಟ್‌ಪಾತ್‌ ತೆರವಿಗೆ ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿ ನೀಡಿ ಎಂದು ಸೂಚಿಸಿ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿತು. ವಿಜಯನಗರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಮೆಟ್ರೋ ನಿಲ್ದಾಣದ ಮುಂಭಾಗದ ಫ‌ುಟ್‌ಪಾತ್‌ ಜಾಗ ಒತ್ತುವರಿ ಮಾಡಿಕೊಂಡಿರುವ ಕೆಲ ವ್ಯಕ್ತಿಗಳು, ಬಟ್ಟೆ ಅಂಗಡಿ, ಹೋಟೆಲ್‌ ಸೇರಿದಂತೆ ಇನ್ನಿತರೆ 140 ಅಂಗಡಿಗಳನ್ನು ನಡೆಸುತ್ತಿದ್ದಾರೆ.ಇದರಿಂದ ಜನಸಾಮಾನ್ಯರಿಗೆ ಓಡಾಡಲು ಜಾಗವಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ.

ಅಲ್ಲದೆ ಮೆಟ್ರೋ ರೈಲಿನ ಸಂಚಾರ ಅವಲಂಬಿಸಿರುವ ಬಹುತೇಕರು ಸರ್ವೀಸ್‌ ರಸ್ತೆಯಲ್ಲಿಯೇ ತಮ್ಮ ಬೈಕ್‌ ಹಾಗೂ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರ ದಟ್ಟಣೆಯಾಗುತ್ತಿದೆ. ಹೀಗಾಗಿ, ಫ‌ುಟ್‌ಪಾತ್‌ ಮೇಲಿನ ಅಂಗಡಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಹಾಗೂ ಪಾರ್ಕಿಂಗ್‌ ವ್ಯವಸ್ಥೆ  ಸರಿಪಡಿಸಬೇಕು, ವಾಹನ ನಿಲುಗಡೆಗೆ ಸೂಕ್ತ ಸ್ಥಳ ದೊರಕಿಸಿಕೊಡುವಂತೆ ಸಂಚಾರ ಪೊಲೀಸ್‌ ವಿಭಾಗಕ್ಕೆ ನಿರ್ದೇಶಿಸುವಂತೆ ಕೋರಿ ದೇಸಾಯಿ ಡಿ. ಹೇಮೇಶ್‌ ಬಾಬು ಎಂಬುವವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.