ನೂತನ ಎಂಎಲ್ಸಿ : ಸೆ.18ರಂದು ಆದಿತ್ಯನಾಥ್, ಡಿಸಿಎಂ ಪ್ರಮಾಣ
Team Udayavani, Sep 16, 2017, 5:06 PM IST
ಲಕ್ನೋ : ರಾಜ್ಯ ವಿಧಾನ ಪರಿಷತ್ತಿಗೆ ಈಚೆಗೆ ಆಯ್ಕೆಯಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಮುಂದಿನ ಸೋಮವಾರ ಸೆ.18ರಂದು ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕಟ್ಟಡದ ತಿಲಕ್ ಹಾಲ್ನಲ್ಲಿ ಎಂಎಲ್ಸಿ ಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯ ವಿಧಾನ ಪರಿಷತ್ ಅಧ್ಯಕ್ಷ ರಮೇಶ್ ಯಾದವ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಮಂತ್ರಾಲಯದ ವಿಶೇಷ ಕಾರ್ಯದರ್ಶಿ ಛೇದಿಲಾಲ್ ಅವರು ಪತ್ರಿಕಾ ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.
ಕಳೆದ ಸೆ.8ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಇಬ್ಬರು ಡೆಪ್ಯುಟಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಮತ್ತು ಸಚಿವ ಸ್ವಂತ್ರದೇವ ಸಿಂಗ್ ಅವರು ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.
ಸೆ.11ರಂದು ಉ.ಪ್ರ.ದ ಸಹಾಯಕ ಸಚಿವ ಮೊಹ್ಸಿನ್ ರಜಾ ಅವರು ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರೊಂದಿಗೆ ವಿಧಾನ ಪರಿಷತ್ತಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಎಲ್ಲ ಐದು ಸ್ಥಾನಗಳು ಬಿಜೆಪಿ ಪಾಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.