ಇರಾನಿ ಗ್ಯಾಂಗ್‌ನ ಮೂವರು ಬಲೆಗೆ
Team Udayavani, Sep 17, 2017, 11:08 AM IST
ಬೆಂಗಳೂರು: ಇತ್ತೀಚೆಗೆ ಈಶಾನ್ಯ ವಿಭಾಗದಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ಸರ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇರಾನಿ ಗ್ಯಾಂಗ್‌ನ ಮೂವರನ್ನು ಬಂಧಿಸಿದ್ದಾರೆ. ಕರಾರ್ ಹುಸೈನ್ ಸೈಯದ್(36), ಸಫìರಾಜ್(45), ಮಹಮೊದ್ ಸೈಯದ್ ಅಲಿ(31) ಬಂಧಿತರು.
ಮೊದಲ ಇಬ್ಬರು ಆರೋಪಿಗಳು ಮಹಾರಾಷ್ಟ್ರದ ಥಾಣೆ ಮೂಲದವರಾಗಿದ್ದು, ಕಲುºರ್ಗಿಯ ಮಹಮದ್ ಸೈಯದ್ ಅಲಿಯನ್ನು ಸಂಪರ್ಕಿಸಿ ಆಗಾಗ್ಗೆ ಕರ್ನಾಟಕಕ್ಕೆ ಬಂದು ಸರ ಕದ್ದು ಹೋಗುತ್ತಿದ್ದರು. ಕೊಡಿಗೇಹಳ್ಳಿ, ಯಲಹಂಕ ಉಪನಗರ, ವಿದ್ಯಾರಣ್ಯಪುರ, ಅಮೃತಹಳ್ಳಿ, ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಆರೋಪಿಗಳು, ಮುಂಜಾನೆ ಮತ್ತು ಸಂಜೆ ಒಂಟಿಯಾಗಿ ಓಡಾಡುತ್ತಿದ್ದ ಮಹಿಳೆಯರಿಗೆ ವಿಳಾಸ, ಅಪರಿಚಿತ ವ್ಯಕ್ತಿಯನ್ನು ಕೇಳುವ ನೆಪದಲ್ಲಿ ಸರ ಕಸಿದು ಪರಾರಿಯಾಗುತ್ತಿದ್ದರು.
ಇರಾನಿ ಗ್ಯಾಂಗ್ ಸದಸ್ಯರ ಪತ್ತೆಗಾಗಿ ಈಶಾನ್ಯ ವಿಭಾಗದ ಡಿಸಿಪಿ ಗಿರೀಶ್ ವಿಶೇಷ ತಂಡ ರಚಿಸಿದ್ದರು. ಈ ತಂಡ ಮೊದಲಿಗೆ ಕರಾರ್ ಹುಸೈನ್ ಸೈಯದ್ ಮತ್ತು ಸಫìರಾಜ್ ಎಂಬವರನ್ನು ಬಂಧಿಸಿತ್ತು. ಬಳಿಕ ಈ ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದ ನಂತರ, ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಮೊಹಮದ್ ಸೈಯದ್ ಅಲಿನನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಈ ಮೂವರು ಇರಾನಿ ತಂಡದ ಸದಸ್ಯರು ಎಂದು ತಿಳಿದು ಬಂದಿದೆ. ಇವರ ಬಂಧನದಿಂದ ಮಹಾರಾಷ್ಟ್ರ ಸೇರಿದಂತೆ ನಗರದ 10 ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಅಪಹರಣ ಪ್ರಕರಣಗಳು ಪತ್ತೆಯಾಗಿವೆ.
ಈ ಪೈಕಿ ಕರಾರ್ ಹುಸೈನ್ ಸೈಯದ್ ವಿರುದ್ಧ ಮುಂಬೈನ ವಿವಿಧ ಠಾಣೆಗಳಲ್ಲಿ 25ಕ್ಕೂ ಅಧಿಕ ಸರ ಅಪಹರಣ ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಮುಂಬೈ ನಗರ ಪೊಲೀಸರು 3 ವರ್ಷಗಳ ಹಿಂದೆ ಮೋಕಾ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪಿಗಳಿಂದ 18 ಸರ, 2 ಬೈಕ್ ಸೇರಿದಂತೆ 20 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.