ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿವಿಧ ಸೇವಾ ಕಾರ್ಯ
Team Udayavani, Sep 18, 2017, 6:35 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 67ನೇ ಹುಟ್ಟುಹಬ್ಬ ನಿಮಿತ್ತ ರಾಜ್ಯದ ವಿವಿಧೆಡೆ ಸಮಾಜಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಶುಭ ಕೋರಲಾಯಿತು. ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಸ್ವತ್ಛತಾ ಆಂದೋಲನ, ಪ್ರತಿಮೆಗಳ ಸ್ವತ್ಛತೆ, ಇತ್ತೀಚೆಗೆ ಬಿದ್ದ ಮಳೆಯಿಂದ ಸಂತ್ರಸ್ತರಾದ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳು ನಡೆದವು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಸೇರಿದಂತೆ ಪಕ್ಷದ ಶಾಸಕರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಆಯಾ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.
ಕೋಲಾರ ಜಿಲ್ಲೆ ಶ್ರೀನಿವಾಸಪುರ, ಬಾಗೇಪಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಲಹಂಕ, ತಿ.ನರಸೀಪುರ, ಹೊಳೆನರಸೀಪುರಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೋಲಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ತುಮಕೂರು ಜಿಲ್ಲೆ ಕೊರಟಗೆರೆ, ಹಾಸನದ ಹೊಳೆನರಸೀಪುರ, ದೇವನಹಳ್ಳಿ, ಬಂಗಾರಪೇಟೆಗಳಲ್ಲಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣನ್ನು ವಿತರಿಸಲಾಯಿತು.
ಚಾಮರಾಜನಗರದ ಮಹದೇಶ್ವರ ಬಡಾವಣೆಯ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ತಿ.ನರಸೀಪುರ ಖಾಸಗಿ ಬಸ್ ನಿಲ್ದಾಣ ವೃತ್ತದಲ್ಲಿ ಮೋದಿಗೆ ಯುವಮೋರ್ಚಾದಿಂದ ಶುಭ ಕೋರುವ ಸಹಿ ಅಭಿಯಾನ ನಡೆಸಲಾಯಿತು. ರಾಮನಗರದ ಅಂಬೇಡ್ಕರ್ ಕಾಲೋನಿಯಲ್ಲಿ 15ಕ್ಕೂ ಹೆಚ್ಚು ಪೌರ ಕಾರ್ಮಿಕ ಕುಟುಂಬಗಳಿಗೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕುಕ್ಕರ್‌ಗಳನ್ನು ವಿತರಿಸಿದರು.
ವ್ಯಾಪಾರಸ್ಥರಿಗೆ ಕೊಡೆ ವಿತರಣೆ:
ಮೋದಿ ಅವರ 67ನೇ ಜನ್ಮದಿನವನ್ನು ಕುಷ್ಟಗಿಯ ನರೇಂದ್ರ ಮೋದಿ ಅಭಿಮಾನಿ ಬಳಗದವರು ಬೀದಿ ಬದಿ ವ್ಯಾಪಾರಸ್ಥರಿಗೆ ಕೊಡೆಗಳನ್ನು ಕೊಡುಗೆಯಾಗಿ ನೀಡುವುದರ ಮೂಲಕ ಆಚರಿಸಿದರು. ಬೀದಿ ಬದಿ ವ್ಯಾಪಾರಸ್ಥರು, ಬಿಸಿಲು-ಮಳೆಯೆನ್ನದೆ ವ್ಯಾಪಾರದಲ್ಲಿ ನಿರತರಾಗಿರುತ್ತಾರೆ. ಹೀಗಾಗಿ, ಅವರಿಗೆ ಕೊಡೆಗಳನ್ನು ನೀಡುತ್ತಿರುವುದಾಗಿ ನರೇಂದ್ರ ಮೋ ದಿ ಅಭಿಮಾನಿ ಬಳಗದ ದೊಡ್ಡಪ್ಪ ಸುಂಕದ ಹೇಳಿದರು.
ನಿವೃತ್ತ ಯೋಧರಿಗೆ ಸನ್ಮಾನ
ಗಂಗಾವತಿ: ಬಿಜೆಪಿ ಯುವ ಮುಖಂಡ ಎಚ್.ಆರ್.ಚನ್ನಕೇಶವ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಮೋದಿಯವರ 67ನೇ ಜನ್ಮದಿನವನ್ನು ನಿವೃತ್ತ ಸೈನಿಕರನ್ನು ಸನ್ಮಾನಿಸುವ ಮೂಲಕ ಆಚರಿಸಲಾಯಿತು ನಿವೃತ್ತ ಸೈನಿಕರಾದ ಹುಸೇನಸಾಬ, ವೆಂಕಟೇಶ, ಕಿಶನ್, ರವಿ, ಫಕೀರಪ್ಪ ಹಾಗೂ ಪ್ರಗತಿಪರ ರೈತ ಶೇಷರಾವ್ ಗೂಗಿ ಬಂಡಿಕ್ಯಾಂಪ್ ಇವರನ್ನು ಸನ್ಮಾನಿಸಲಾಯಿತು. ಬಳಿಕ, ಸರಕಾರಿ ಆಸ್ಪತೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೇಡ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.