ದಸರಾ: ಜೈಲಿನಲ್ಲಿ ರಾಮಾ ರಾಮಾರೇ ಚಿತ್ರ ಪ್ರದರ್ಶನ

Team Udayavani, Sep 18, 2017, 12:57 PM IST

mys1.jpg

ಮೈಸೂರು: ದಸರಾ ಚಲನಚಿತ್ರೋತ್ಸವ ಸೆ.21 ರಿಂದ 28 ರವರೆಗೆ ಐನಾಕ್ಸ್‌ ಮತ್ತು ಡಿಆರ್‌ಸಿ ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಆಯೋಜಿಸಲಾಗಿದೆ. ದಸರಾ ಚಲನಚಿತ್ರ ಉಪಸಮಿತಿ ಅಧ್ಯಕ್ಷ ರಾಚಪ್ಪ ಅಧ್ಯಕ್ಷತೆಯಲ್ಲಿ ಭಾನುವಾರ ವಾರ್ತಾ ಭವನದಲ್ಲಿ ಚಲನಚಿತ್ರೋತ್ಸವ ಆಯೋಜನೆ ಕುರಿತು ಸಭೆ ನಡೆಸಲಾಯಿತು.

ಚಲನಚಿತ್ರೋತ್ಸವ ಸಮಿತಿ ಉಪ ವಿಶೇಷಾಧಿಕಾರಿಗಳಾದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌ ಮಾತನಾಡಿ, ಚಿತ್ರೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲಾಗುತ್ತಿದ್ದು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆ.21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆಂದರು.

ಸಮಿತಿ ಕಾರ್ಯಾಧ್ಯಕ್ಷರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ  ಆರ್‌.ರಾಜು, ಚಿತ್ರೋತ್ಸವವನ್ನು ಆಯೋಜಿಸಲು ಆರ್ಟಿಸ್ಟಿಕ್‌ ನಿರ್ದೇಶಕರಾಗಿ ಮೈಸೂರು ಫಿಲಂ ಸೊಸೈಟಿ ಮನು ಅವರನ್ನು ನೇಮಕ ಮಾಡಿ ಅವರ ನೇತೃತ್ವದಲ್ಲಿ ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ.

ಡಿಆರ್‌ಸಿ ಚಿತ್ರಮಂದಿರದಲ್ಲಿ ಪ್ರತಿ ದಿನ 4 ಕನ್ನಡ ಚಲನಚಿತ್ರಗಳು ಪ್ರದರ್ಶನವಾಗಲಿದೆ. 30ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಮೈಸೂರಿಗೆ ಅತಿಥಿಗಳಾಗಿ ಆಗಮಿಸಿರುವ ಕಾವಾಡಿಗರು, ಮಾವುತರ ಕುಟುಂಬದವರಿಗೆ ಉಚಿತ ಪ್ರದರ್ಶನ ಇರಲಿದೆ. ಬಾಲಕರ-ಬಾಲಕಿಯರ ಬಾಲಮಂದಿರದಲ್ಲಿರುವ ಮಕ್ಕಳು, ವಿಕಲಚೇತನರ ನಿಲಯಗಳಲ್ಲಿರುವ ಮಕ್ಕಳಿಗೆ ಡಿಆರ್‌ಸಿ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದಲ್ಲಿ ಚಲನಚಿತ್ರ ವೀಕ್ಷಣೆಗೆ ಅವಕಾಶ  ಕಲ್ಪಿಸಲಾಗುತ್ತಿದೆ.

ಐನಾಕ್ಸ್‌ ಮಲ್ಟಿಫ್ಲೆಕ್ಸ್‌ನಲ್ಲಿ ರಾಷ್ಟ್ರೀಯ ಮತ್ತು ವಿದೇಶದ ಪ್ರಖ್ಯಾತ ಚಿತ್ರಗಳು ಇರಲಿದೆ. 300 ರೂ.ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಉದ್ಘಾಟನೆಯಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್‌.ವಿ.ರಾಜೇಂದ್ರಸಿಂಗ್‌ ಬಾಬು, ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಚಿತ್ರ ಕಲಾವಿದರಾದ ಆದಿತ್ಯ, ಧ್ರುವಸಜಾ, ರಚಿತಾ ರಾಮ್‌, ನಂದಕಿಶೋರ್‌, ಸುಂದರ್‌ರಾಜ್‌, ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಮತ್ತು ಶೋಭರಾಜ್‌, ಒಂದು ಮೊಟ್ಟೆ ಕಥೆ, ರಣರಣಕ ಚಿತ್ರ ತಂಡ ಇರಲಿದ್ದಾರೆ. ನಂತರ ಒಂದು ಮೊಟ್ಟೆಯ ಕಥೆ ಚಿತ್ರ ಪ್ರದರ್ಶನ ನಡೆಯಲಿದೆ.

ಸೆ.22 ರಂದು ಮನಮಂಥನ ಚಿತ್ರ ನಿರ್ದೇಶಕ ಸುರೇಶ್‌ ಹೆಬ್ಳೀಕರ್‌ ಅವರು ಐನಾಕ್ಸ್‌ ಚಿತ್ರಮಂದಿರದಲ್ಲಿ ಸಂವಾದ ನಡೆಸಲಿದ್ದಾರೆ. ಸೆ.27ರಂದು ಮಾರಿಕೊಂಡವರು ಚಿತ್ರ ನಿರ್ದೇಶಕ ಶಿವರುದ್ರಯ್ಯ ಸಂವಾದ ನಡೆಸಲಿದ್ದಾರೆ. ವಿಶೇಷವಾಗಿ ಮನ:ಪರಿವರ್ತನೆ ಸಂದೇಶ ಇರುವ ಚಿತ್ರ ರಾಮಾ ರಾಮಾರೇ ಪ್ರದರ್ಶನವನ್ನು ಕೇಂದ್ರ ಕಾರಾಗೃಹದಲ್ಲಿ ಸೆ.24 ರಂದು ಏರ್ಪಡಿಸಲಾಗಿದೆ ಎಂದರು. ಸಭೆಯಲ್ಲಿ ಉಪ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ‌ ರವಿಚಂದ್ರು, ಸದಸ್ಯರಾದ ಕೆ.ಎಸ್‌.ಶಿವರಾಮು ಮತ್ತಿತರರಿದ್ದರು.

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.