ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ರೂವಾರಿಗಳಾಗಿ: ಪ್ರಮೋದ್
Team Udayavani, Sep 19, 2017, 6:55 AM IST
ಉಡುಪಿ: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳಾಬೇಕು. ಶಿಕ್ಷಣ ನೀಡುವುದಕ್ಕಿಂತಲೂ ಇತರ ಚಟುವಟಿಕೆಗಳಿಗೆ ಗಮನ ಕೊಡುವುದನ್ನು ನಿಲ್ಲಿಸಬೇಕು ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಸೋಮವಾರ ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆದ ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ, ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಯು. ಅಹಲ್ಯಾ ರಮಾನಂದ ರಾವ್ ಅವರ ಸಮ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿ ಎಂಜಿನಿಯರ್, ಡಾಕ್ಟರ್ ಆಗಬೇಕೆಂದು ಬಯಸುತ್ತಾರೆ. ಇಂತಹ ಪ್ರವೃತ್ತಿಯನ್ನು ಶಿಕ್ಷಕರು ಸರಿಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಪೌರಾಯುಕ್ತ
ಡಿ. ಮಂಜುನಾಥಯ್ಯ, ನಗರಸಭೆ ಸದಸ್ಯರಾದ ದಿನಕರ ಶೆಟ್ಟಿ ಹೆರ್ಗ, ರಮೇಶ್ ಕಾಂಚನ್, ಯುವರಾಜ್ ಪಿ., ಶಾಂತಾರಾಮ್ ಸಾಲ್ವಂಕಾರ್, ನಾರಾಯಣ ಕುಂದರ್, ಮಂಗಳೂರು ವಿ.ವಿ. ಸೆನೆಟ್ ಸದಸ್ಯ ಅಮೃತ್ ಶೆಣೈ, ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿ ಲೋಕೇಶ್, ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ. ಪ್ರಕಾಶ್ ಶೆಣೈ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ನಾಯ್ಕ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಹರಿದಾಸ ಬಿ.ಸಿ. ರಾವ್ ಶಿವಪುರ ಅಭಿನಂದನ ಭಾಷಣ ಮಾಡಿದರು. ನಗರಸಭೆ ಸದಸ್ಯ ಸುಕೇಶ್ ಕುಂದರ್ ಅವರು ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ನಿರಂಜನ್ ರಾವ್ ಪ್ರಸ್ತಾವನೆಗೈದರು.
ಸತೀಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವನಿತಾ ಅವರು ವಂದಿಸಿದರು.
ಉಡುಪಿ: ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಯು. ಅಹಲ್ಯಾ ರಮಾನಂದ ರಾವ್ ಅವರನ್ನು ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.