8 ವಲಯಗಳಲ್ಲಿ 418 ರಹಸ್ಯ ಬ್ಯಾಂಕ್‌ ಖಾತೆ!


Team Udayavani, Sep 19, 2017, 11:49 AM IST

netra.jpg

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ಪಾಲಿಕೆಯ ಎಂಟೂ ವಲಯಗಳಲ್ಲಿ 418 ರಹಸ್ಯ ಬ್ಯಾಂಕ್‌ ಖಾತೆಗಳಿರುವುದು ಪತ್ತೆಯಾಗಿದೆ. ಆದರೆ ಇಂಥ ಬ್ಯಾಂಕ್‌ ಖಾತೆಗಳ ಬಗ್ಗೆ ಪಾಲಿಕೆ ಅಧಿಕಾರಿಗಳಿಗೇ ಮಾಹಿತಿ ಇಲ್ಲದಿರುವುದು ಆತಂಕ ಮೂಡಿಸಿದೆ.

ಸೋಮವಾರ ಬಿಬಿಎಂಪಿ ಲೆಕ್ಕಪತ್ರ ಸ್ಥಾಯಿ ಸಮಿತಿಯ ಸಭೆಯಲ್ಲಿ ಪಾಲಿಕೆಯ ಎಂಟು ವಲಯಗಳ ಸಹಾಯಕ ಹಣಕಾಸು ನಿಯಂತ್ರಕರು ಹಾಗೂ ಕೇಂದ್ರ ಕಚೇರಿಯ ಸಹಾಯಕ ಹಣಕಾಸು ನಿಯಂತ್ರಕರ ಸಭೆ ನಡೆಸಿದ ಪರಿಣಾಮ ಒಟ್ಟು 418 ಬ್ಯಾಂಕ್‌ ರಹಸ್ಯ ಖಾತೆಗಳಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪಾವತಿಸುವ ತೆರಿಗೆ ಹಣ ಯಾವ ಖಾತೆಗೆ ಜಮೆಯಾಗಿದೆ ಹಾಗೂ ಯಾರು ಬಳಕೆ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕಿದೆ. 

ಬಿಬಿಎಂಪಿ ಹೆಸರಿನಲ್ಲಿ ಎಷ್ಟು ಬ್ಯಾಂಕ್‌ ಖಾತೆಗಳಿವೆ ಎಂಬ ಮಾಹಿತಿ ಈವರೆಗೆ ಪಾಲಿಕೆಯ ಅಧಿಕಾರಿಗಳಿಗೆ ಅಥವಾ ಜನಪ್ರತಿನಿಧಿಗಳಿಗೆ ಸಿಕ್ಕಿರಲಿಲ್ಲ. ಈ ಹಿಂದೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಎಂ.ಶಿವರಾಜು ಅವರು ಬಳಕೆಯಲ್ಲಿದ್ದ ಬ್ಯಾಂಕ್‌ ಖಾತೆಗಳನ್ನು ಮುಚ್ಚಿಸಿ 27 ಬ್ಯಾಂಕ್‌ಗಳನ್ನು ಮಾತ್ರ ಉಳಿಸಿಕೊಂಡಿದ್ದರು. ಆದರ ನಂತರವೂ ಪಾಲಿಕೆಯ ಹೆಸರಿನಲ್ಲಿ 418 ಖಾತೆಗಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ತಪ್ಪು ಮಾಹಿತಿ: ಬ್ಯಾಂಕ್‌ ಖಾತೆಗಳ ಕುರಿತು ಜನಪ್ರತಿನಿಧಿಗಳಾಗಲಿ, ಸ್ಥಾಯಿ ಸಮಿತಿಗಳಾಲಿ ಅಧಿಕಾರಿಗಳನ್ನು ಮಾಹಿತಿ ಕೇಳಿದರೆ ಪಾಲಿಕೆಯಲ್ಲಿ 136 ಬ್ಯಾಂಕ್‌ ಖಾತೆಗಳಿವೆ ಎಂಬ ಮಾಹಿತಿಯನ್ನಷ್ಟೇ ನೀಡುತ್ತಿದ್ದರು. ಈ ಬ್ಯಾಂಕ್‌ ಖಾತೆಗಳಿಂದಲೇ ಖರ್ಚು ಮತ್ತು ವೆಚ್ಚಗಳನ್ನು ನೋಡಿಕೊಳ್ಳುತ್ತಿರುವ ಮಾಹಿತಿ ನೀಡಿದ್ದಾರೆ. ಆದರೆ, ಸೋಮವಾರದ ಸಭೆಯಲ್ಲಿ ಬರೋಬ್ಬರಿ 418 ಬ್ಯಾಂಕ್‌ ಖಾತೆಗಳಿರುವುದು ಬೆಳಕಿಗೆ ಬಂದಿದೆ. 

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 46 ಬ್ಯಾಂಕ್‌ ಖಾತೆಗಳನ್ನು ನಿರ್ವಹಣೆ ಮಾಡಲಾಗುತ್ತದೆ. ಉಳಿದಂತೆ ಎಂಟು ವಲಯಗಳ ಅಧಿಕಾರಿಗಳು ತಮಗೆ ಇಷ್ಟ ಬಂದ ಹಾಗೆ ಬ್ಯಾಂಕ್‌ ಖಾತೆಗಳನ್ನು ತೆರೆದು ನಿರ್ವಹಣೆ ಮಾಡುತ್ತಿದ್ದು, ಆ ಮೂಲಕ ಭಾರಿ ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳು ಮೂಡತೊಡಗಿದೆ. 

ಶಿಕ್ಷಣ ವಿಭಾಗದಲ್ಲಿ 92 ಖಾತೆ: ಪಾಲಿಕೆಯ ಶಿಕ್ಷಣ ವಿಭಾಗ ಒಂದರಲ್ಲಿಯೇ ಒಟ್ಟು 92 ಬ್ಯಾಂಕ್‌ ಖಾತೆಗಳು ಪತ್ತೆಯಾಗಿದ್ದು, ಅದರದಲ್ಲಿ ಪೂರ್ವ ಮತ್ತು ಪಶ್ಚಿಮ ಎರಡು ವಲಯದಲ್ಲಿ ಅತಿ ಹೆಚ್ಚು ಬ್ಯಾಂಕ್‌ ಖಾತೆಗಳಿರುವುದಾಗಿ ತಿಳಿಸಿದೆ. ಈ ಖಾತೆಗಳನ್ನು ಬಿಬಿಎಂಪಿ ಶಾಲೆಯ ಮುಖ್ಯೋಪಾಧ್ಯಾಯರು ನಿರ್ವಹಣೆ ಮಾಡುತ್ತಿದ್ದು, ಯಾವುದಕ್ಕೆ ಎಷ್ಟು ಹಣವನ್ನು ಬಳಸಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. 

46 ಖಾತೆಗಳಲ್ಲಿ 1800 ಕೋಟಿ ರೂ.: ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ನಿರ್ವಹಣೆ ಮಾಡುತ್ತಿರುವ 46 ಬ್ಯಾಂಕ್‌ ಖಾತೆಗಳಲ್ಲಿ ಒಟ್ಟು 1800 ಕೋಟಿ ರೂ. ಹಣವಿದ್ದು, ಉಳಿದ 372 ಬ್ಯಾಂಕ್‌ ಖಾತೆಗಳಲ್ಲಿ ಎಷ್ಟು ಹಣವಿದೆ ಎಂಬ ಮಾಹಿತಿಯಿಲ್ಲ. ಇನ್ನೂ 50 ಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳಿರುವ ಬಗ್ಗೆ ಅನುಮಾನವಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗುವುದು. ಜತೆಗೆ ಯಾವ ಖಾತೆಗೆ ಎಷ್ಟು ಜಮೆಯಾಗಿದೆ ಹಾಗೂ ಎಷ್ಟು ಹಣವನ್ನು ಪಡೆಯಲಾಗಿದೆ ಎಂಬ ಮಾಹಿತಿಯನ್ನು ಕಲೆ ಹಾಕಲಾಗುವುದು ಎಂದು ಲೆಕ್ಕಪತ್ರ ಸ್ಥಾಯಿ ಸಮಿತಿ ಸದಸ್ಯ ಗೌತಮ್‌ ಕುಮಾರ್‌ ತಿಳಿಸಿದ್ದಾರೆ. 

ಪಾಲಿಕೆಯಲ್ಲಿ ಎಷ್ಟು ಬ್ಯಾಂಕ್‌ ಖಾತೆಗಳಿವೆ, ಯಾವ ಖಾತೆಗೆ ಎಷ್ಟು ಹಣ ಸಂದಾಯವಾಗುತ್ತಿದೆ ಎಂಬ ಮಾಹಿತಿ ಸ್ವತಃ ಬಿಬಿಎಂಪಿ ಆಯುಕ್ತರಿಗೆ ಸವಾಲಿನ ಪ್ರಶ್ನೆಯಾಗಿದೆ. ಈ ಕುರಿತು ಮುಖ್ಯ ಹಣಕಾಸು ಅಧಿಕಾರಿಗೆ ಸಮಿತಿಯಿಂದ ನಿರ್ಣಯ ಮಾಡಿ ಎಷ್ಟು ಬ್ಯಾಂಕ್‌ ಖಾತೆಗಳಿವೆ ಯಾವ ಖಾತೆಯಲ್ಲಿ ಎಷ್ಟು ಹಣವಿದೆ ಎಂಬುದರ ಕುರಿತು ಮಾಹಿತಿ ನೀಡುವಂತೆ ಪತ್ರ ಬರೆಯಲಾಗುವುದು. 
-ನೇತ್ರಾ ನಾರಾಯಣ್‌, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ

ಪತ್ತೆಯಾದ ಬ್ಯಾಂಕ್‌ ಖಾತೆಗಳು
-ಕೇಂದ್ರ ಕಚೇರಿ    46
-ದಕ್ಷಿಣ ವಲಯ    32
-ಮಹದೇವಪುರ     16
-ಪಶ್ಚಿಮ ವಲಯ    64
-ಬೊಮ್ಮನಹಳ್ಳಿ    17
-ದಾಸರಹಳ್ಳಿ    13
-ರಾಜರಾಜೇಶ್ವರಿ ನಗರ    15
-ಪೂರ್ವ ವಲಯ    91
-ಶಿಕ್ಷಣ ವಿಭಾಗದ    92
-ಹಣಕಾಸು ವಿಭಾಗ    4
-ಜನನ, ಮರಣ ನೋಂದಣೆ    4
-ಅರಣ್ಯ, ಕೆರೆ ನಿರ್ವಹಣೆ    2
-ಒಟ್ಟು     418

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.