ಭೂಗತ ಚಟುವಟಿಕೆಗಳಲ್ಲಿ ತೊಡಗಿದ್ದ “ಮಾಜಿ’ಗಳ ವಿಚಾರಣೆ
Team Udayavani, Sep 20, 2017, 9:27 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಅಚ್ಚರಿಯ ಬೆಳವಣಿಗೆಯಲ್ಲಿ ಈ ಹಿಂದೆ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರು ಸೇರಿ ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ.
ಮಂಗಳವಾರ ಎಸ್‌ಐಟಿ ಅಧಿಕಾರಿಗಳು, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕೆಲವರನ್ನು ವಿಚಾರಣೆ ಗೊಳಪಡಿಸಿ ಕೆಲವು ಅನುಮಾನಗಳಿಗೆ ಉತ್ತರ ಪಡೆದು ಕೊಂಡರು. ಈ ಹಿಂದೆ ಶಂಕೆಯ ಮೇರೆಗೆ ವಶಕ್ಕೆ ಪಡೆದ ಕೆಲವರ ಫೋನ್‌ನಿಂದ ಮಂಗಳವಾರ ವಿಚಾರಣೆಗೊಳಗಾದವರಿಗೆ ದೂರವಾಣಿ ಕರೆಗಳು ಹೋಗಿದ್ದವು. ಹೀಗಾಗಿ ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಂಡಿದ್ದೇವೆಂದು ಎಸ್‌ಐಟಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಮುಖ ರೌಡಿಗಳನ್ನು ಎಸ್ ಐಟಿ ಕಚೇರಿಯಲ್ಲಿ ಪ್ರತ್ಯೇಕವಾಗಿಯೇ ವಿಚಾರಣೆ ನಡೆಸಲಾಗಿದೆ. ಈ ಹಿಂದೆ ಗೌರಿ ಪರಿಚಯವಿತ್ತೇ? ಅವರ ವಿರುದ್ಧ ಯಾವುದಾದರೂ ಮಾನಹಾನಿ ಕೇಸ್ ದಾಖಲಿಸಿದ್ದರೇ? ಎಂಬಿತ್ಯಾದಿ ತನಿಖಾ ಭಾಗವಾಗಿ ಕೆಲ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದು, ಈ ಹತ್ಯೆಗೂ ತಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇನ್ನೂ ಹಲವು ಮಾಜಿ ರೌಡಿಶೀಟರ್‌ಗಳನ್ನು ವಿಚಾರಣೆಗೊಳಪಡಿಸಲಿದ್ದೇವೆ.
ಉಳಿದಂತೆ ಲಂಕೇಶ್ ಪತ್ರಿಕೆಯಲ್ಲಿ ಯಾರ್ಯಾರ ವಿರುದ್ಧ ಲೇಖನ ಪ್ರಕಟಗೊಂಡಿದ್ದವೋ ಎಲ್ಲರನ್ನೂ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.
ಮತ್ತೂಂದೆಡೆ ಗೌರಿ ಹತ್ಯೆಯಲ್ಲಿ ನಕ್ಸಲರ ಕೈವಾಡವಿರುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಗೌರಿ ಲಂಕೇಶ್ ಜತೆ ನಿರಂತರ ಸಂಪರ್ಕದಲ್ಲಿದ್ದವರೂ, ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದು, ಇದಕ್ಕೆ ಒಂದು ಬಣ ವಿರೋಧ ವ್ಯಕ್ತವಾಗಿತ್ತೆಂಬ ಮಾಹಿತಿ ಲಭ್ಯವಾಗಿತ್ತು.
ಹೀಗಾಗಿ ಸಭೆಯಲ್ಲಿ ಗೌರಿ ಹೊರತುಪಡಿಸಿ ಮತ್ಯಾರಾದರೂ ಭಾಗವಹಿಸಿದ್ದರೇ ಅವರನ್ನು ಪತ್ತೆಹಚ್ಚಿ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಬಲಪಂಥೀಯ ಬಣದ ಕೈವಾಡದ ಶಂಕೆಯ ಆಯಾಮದಲ್ಲೂ ತನಿಖೆ ಮುಂದುವರಿದಿದೆ ಎಂದರು. ಗೌರಿಲಂಕೇಶ್ ಹತ್ಯೆ ಸಂಬಂಧಿಸಿದ ಎಫ್ಎಸ್‌ಎಲ್ ವರದಿ ಇನ್ನೂ ಸಿಕ್ಕಿಲ್ಲ. ವರದಿ ಬಂದ ಬಳಿಕ ಮತ್ತಷ್ಟು ಸಾಕ್ಷ್ಯ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.