ಏಶ್ಯನ್ ಪೇಟೆಯಲ್ಲಿ ತೇಜಿ: ಮುಂಬಯಿ ಶೇರು 93 ಅಂಕ ಜಿಗಿತ
Team Udayavani, Sep 20, 2017, 10:39 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಉತ್ತಮ ತೇಜಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಅಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 93 ಅಂಕಗಳ ಜಿಗಿತವನ್ನು ಸಾಧಿಸಿತು. ಪರಿಣಾಮವಾಗಿ ಆರ್ಐಎಲ್, ಎಲ್ ಆ್ಯಂಡ್ ಟಿ ಮತ್ತು ಐಟಿಸಿ ಶೇರುಗಳು ಉತ್ತಮ ಖರೀದಿಯನ್ನು ಕಂಡವು.
ನಿನ್ನೆ ಮಂಗಳವಾರದ ವಹಿವಾಟನ್ನು ಸೆನ್ಸೆಕ್ಸ್ 21.39 ಅಂಕಗಳ ನಷ್ಟದೊಂದಿಗೆ ಕೊನೆಗೊಳಿಸಿತ್ತು.
ಇಂದು ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 25 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡ 32,427.39 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 0.20 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,147.70 ಅಂಕಗಳ ಮಟ್ಟದಲ್ಲೂ ವ್ಯವಹರಿಸುತ್ತಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ರಿಲಯನ್ಸ್, ಡಾ. ರೆಡ್ಡಿ, ಲಾರ್ಸನ್, ಎಸ್ಬಿಐ ಮತ್ತು ಎಸ್ ಬ್ಯಾಂಕ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ಇದೇ ವೇಳೆ ಐಡಿಯಾ ಸೆಲ್ಯುಲರ್, ಬಿಪಿಸಿಎಲ್, ಟಾಟಾ ಮೋಟರ್, ಕೋಲ್ ಇಂಡಿಯಾ, ಹೀರೋ ಮೋಟೋ ಕಾರ್ಪ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.