ಟವರ್‌ಗಳಿಂದ ಆದಾಯ ಸಂಗ್ರಹ
Team Udayavani, Sep 20, 2017, 11:43 AM IST
ಬೆಂಗಳೂರು: ನಗರದಲ್ಲಿ ಅಳವಡಿಸುವ ಮೊಬೈಲ್ ಟವರ್‌ಗೆ 50 ಸಾವಿರ ರೂ. “ಅಳವಡಿಕೆ ಶುಲ್ಕ’ ಮತ್ತು 12 ಸಾವಿರ ರೂ. ವಾರ್ಷಿಕ ತೆರಿಗೆ ವಿಧಿಸಲು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ನಿರ್ಧರಿಸಿದೆ. ಆದಾಯ ವೃದ್ಧಿಗಾಗಿ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಮೊಬೈಲ್ ಟವರ್‌ಗಳಿವೆ ಎಂದು ಅಂದಾಜಿಸಲಾಗಿದೆ.
ಆದರೆ, ಆ ಟವರ್‌ಗಳಿಂದ ಈವರೆಗೆ ಬಿಬಿಎಂಪಿಗೆ ಯಾವುದೇ ಆದಾಯ ಬಂದಿಲ್ಲ. ಹೀಗಾಗಿ ಟವರ್‌ಗಳಿಂದ ತೆರಿಗೆ ವಸೂಲಿಗೆ ಮುಂದಾಗಿರುವ ಬಿಬಿಎಂಪಿ ಪ್ರತಿ ಟವರ್ ಅಳವಡಿಕೆಗೆ 50 ಸಾವಿರ ರೂ. ಅಳವಡಿಕೆ ಶುಲ್ಕ ಹಾಗೂ ಪ್ರತಿ ವರ್ಷ 12 ಸಾವಿರ ತೆರಿಗೆ ವಸೂಲಿ ಮಾಡಲು ಉದ್ದೇಶಿಸಿದೆ. ಈ ಸಂಬಂದ ನಿರ್ಣಯ ಕೈಗೊಂಡು ಆಯುಕ್ತರಿಗೆ ಕಳುಹಿಸಲಾಗಿದೆ, ಆಯುಕ್ತರಿಂದ ಅಂತಿಮ ಆದೇಶ ಹೊರಬಂದ ನಂತರ ಟವರ್‌ಗಳಿಂದ ಶುಲ್ಕ ವಸೂಲಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು.
3,300 ಟವರ್‌ಗಳ ಘೋಷಣೆ
ಮೊಬೈಲ್ ಟವರ್ ಅಳವಡಿಕೆ ಮಾಡಿಕೊಂಡಿರುವ ಸಂಸ್ಥೆಗಳಿಗೂ ಟವರ್‌ಗಳ ಪಟ್ಟಿ ನೀಡುವಂತೆ ಸೂಚಿಸಲಾಗಿದೆ. ಅದರಂತೆ ಇಂಡಸ್ ಮತ್ತು ರಿಲಾಯನ್ಸ್ ಜಿಯೋ ಸಂಸ್ಥೆಗಳು ಟವರ್‌ಗಳ ಮಾಹಿತಿಯನ್ನು ಬಿಬಿಎಂಪಿಗೆ ನೀಡಿವೆ. ಅದರಂತೆ ಇಂಡಸ್ ಸಂಸ್ಥೆ 2,300 ಹಾಗೂ ರಿಲಾಯನ್ಸ್ ಜಿಯೋ ಸಂಸ್ಥೆ 1 ಸಾವಿರ ಟವರ್ ಅಳವಡಿಸಿರುವುದಾಗಿ ತಿಳಿಸಿವೆ. ಈ ಮಧ್ಯೆ ಅಕ್ರಮ ಮೊಬೈಲ್ ಟವರ್‌ಗಳ ಪತ್ತೆಗಾಗಿ ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.