ನಾಯಕರ ಜಾತಿ ಪ್ರತ್ರದ ಗೊಂದಲಕ್ಕೆ ತೆರೆ
Team Udayavani, Sep 20, 2017, 12:04 PM IST
ನಂಜನಗೂಡು: ಹಲವು ವರ್ಷಗಳಿಂದ ಗೊಂದಲಕ್ಕೊಳ್ಳಗಾಗಿದ್ದ ನಾಯಕರ ಜಾತಿ ಪ್ರಮಾಣಪತ್ರಕ್ಕೆ ಈಗ ತೆರೆ ಎಳೆಯಲಾಗಿದೆ ಎಂದು ಸ್ಥಳಿಯ ಶಾಸಕ ಕಳಲೆ ಕೇಶವಮೂರ್ತಿ ತಿಳಿಸಿದರು. ಅ.5 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಪರಿವಾರ ಬೇಸ್ತ ನಾಯಕ ಎಂದು ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಿದ್ದ ಎಲ್ಲರಿಗೂ ಈಗ ನಾಯಕರೆಂಬ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದು, ಇನ್ನು ಮುಂದೆ ಈ ಗೊಂದಲವಿರಲ್ಲ ಎಂದು ಕಳಲೆ ಘೋಷಿಸಿದರು.
ಜಿ.ಪಂ ಮಾಜಿ ಸದಸ್ಯ ಚಿಕ್ಕರಂಗನಾಯಕ ಜಾತಿ ಪ್ರಮಾಣ ಪತ್ರ ನೀಡಲು ಶಾಸಕರಲ್ಲಿ ಒತ್ತಾಯ ಮಾಡಿದ ಮೇರೆಗೆ ಪ್ರಮಾಣ ಪತ್ರ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮತ್ತು ಜಯಂತಿ ಆಚರಣೆ ದಿನದಂದು ನಂಜನಗೂಡಿನಲ್ಲಿ ಎಲ್ಲಾ ಬಾರ್ ಹಾಗೂ ಮಧ್ಯದ ಅಂಗಡಿಗಳನ್ನು ಬಂದ್ ಮಾಡಲು ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವವರು ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ತಾಲೂಕು ನಾಯಕ ಸಂಘದ ಅಧ್ಯಕ್ಷ ಹಳ್ಳಿದಿಡ್ಡಿ ಬಂಗಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಹುಲ್ಲಹಳ್ಳಿ ನಾಗೇಂದ್ರ, ಖಜಾಂಚಿ ಹೆಡತಲೆ ರಂಗಸ್ವಾಮಿ, ತಾಲೂಕು ನಾಯಕರ ಸಂಘದ ಮಾಜಿ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಕಳಲೆ ಭೈರನಾಯಕ, ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸ್, ಜಿಪಂ ಸದಸ್ಯೆ ಲತಾ, ಮಹದೇವನಾಯಕ, ತಾಲೂಕು ತಹಶೀಲ್ದಾರ್ ದಯಾನಂದ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.