ಮರ ಕಡಿಯದೆ ರಸ್ತೆ ಅಭಿವೃದ್ಧಿಗೆ ಪರಿಸರವಾದಿಗಳ ಆಗ್ರಹ

Team Udayavani, Sep 20, 2017, 12:31 PM IST

hub3.jpg

ಧಾರವಾಡ: ಮೀರಜ್‌ ಮತ್ತು ಸಾಂಗ್ಲಿ ಮಧ್ಯೆ ಗಿಡಗಳನ್ನು ಕಡಿಯದೆ ರಸ್ತೆ ಅಗಲೀಕರಣ ಮಾಡಿದ್ದು, ಅದೇ ಮಾದರಿಯಲ್ಲಿ ನರೇಂದ್ರ ಕ್ರಾಸ್‌ನಿಂದ ನಗರದ ಜುಬಿಲಿ ವೃತ್ತದ ವರೆಗಿನ ರಸ್ತೆ ಅಗಲೀಕರಣದ ಸಮಯದಲ್ಲಿ ಯಾವುದೇ ಗಿಡಗಳನ್ನು ಕಡಿಯದೆ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸುಸ್ಥಿರ ಅಭಿವೃದ್ಧಿ ವೇದಿಕೆ ಸಂಚಾಲಕ ಡಾ| ಸಂಜೀವ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. 

ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಇದೀಗ ಅಗಲೀಕರಣವಾಗುತ್ತಿದೆ. ಆದರೆ, ಈ ರಸ್ತೆಯಲ್ಲಿ 1500 ವಿವಿಧ ಜಾತಿಯ ಗಿಡಮರಗಳಿದ್ದು, ಪಕ್ಷಿ ವೈವಿಧ್ಯಕ್ಕೆ ಅನುಕೂಲವಾಗಿವೆ. ನೆರಳು, ಹಕ್ಕಿಗಳಿಗೆ ಆವಾಸ ನೀಡುವ 450ಕ್ಕೂ ಅಧಿ ಕ ಮರಗಳು ನಾಶವಾಗುತ್ತಿವೆ. ಅದಕ್ಕೆ ನಗರದ ಪ್ರಜ್ಞಾವಂತ ನಾಗರಿಕರು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. 

ಶಾಸಕ ಬೆಲ್ಲದ್‌ ಮಾತು ತಪ್ಪಿದ್ದಾರೆ: ಈ ಹಿಂದೆ ಕವಿಸಂದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಶಾಸಕ ಅರವಿಂದ ಬೆಲ್ಲದ ಜತೆಗೆ ಈ ಕುರಿತು ಚರ್ಚಿಸಲಾಗಿತ್ತು. ಅವರು ರಸ್ತೆ ಪಕ್ಕದ ಮರಗಳನ್ನು ಉಳಿಸಿಕೊಂಡೇ ಹೆದ್ದಾರಿ ಅಗಲೀಕರಣ ಯೋಜನೆ ಕಾರ್ಯಗತ ಮಾಡುವುದಾಗಿ ಹಾಗೂ ಎರಡು ತಿಂಗಳಲ್ಲಿ ಈ ಬಗ್ಗೆ ಸಭೆ ಕರೆಯುವುದಾಗಿ ವಾಗ್ಧಾನ ಮಾಡಿದ್ದರು. 

ಆದರೆ, ಕಳೆದ ಕೆಲ ದಿನಗಳಿಂದ ಯಾರೊಬ್ಬರಿಗೂ ತಿಳಿಸದೆ ಕಾಮಗಾರಿ ಪ್ರಾರಂಭಿಸಿರುವುದು ಗಮನಕ್ಕೆ ಬಂದಿದೆ. ಹಲವು ಸಂದೇಹಗಳನ್ನು ಹುಟ್ಟ ಹಾಕಿದೆ ಎಂದರು. ಡಾ| ಪ್ರಕಾಶ ಭಟ್‌ ಮಾತನಾಡಿ, ಅಗಲೀಕರಣ ವೇಳೆ ಮರ ಕಡಿಯುವುದಿಲ್ಲ ಎಂದು ಹೇಳುತ್ತಿದ್ದಾರೆಯೇ ಹೊರತು ಪ್ರತ್ಯಕ್ಷದಲ್ಲಿ ಸಭೆ ಕರೆಯುತ್ತಿಲ್ಲ.

ರಸ್ತೆ ಅಗಲೀಕರಣ ಕುರಿತು ಕಾನೂನು ಪ್ರಕಾರ ಸಾರ್ವಜನಿಕ ಜಾಗೃತಿ, ಅಹವಾಲು ಸ್ವೀಕಾರ ನಡೆದಿಲ್ಲ. ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದಿರುವಂತ ಅನೇಕ ಸಂಶಯಗಳು ಹುಟ್ಟಿಕೊಂಡಿವೆ ಎಂದರು. ಪಿ.ಬಿ. ಹಿರೇಮಠ, ಶಿವಾಜಿ ಸೂರ್ಯವಂಶಿ, ಓಟಿಲಿ ಆಯಾನೆಬೆನ್‌, ಪ್ರಕಾಶ ಗೌಡರ, ಅನೀಲ ಅಳ್ಳೋಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.