ಮೋದಿ ನವಭಾರತ ರೂಪಿಸಬಲ್ಲರು : ರತನ್ ಟಾಟಾ ವಿಶ್ವಾಸ
Team Udayavani, Sep 20, 2017, 7:06 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಹುವಾಗಿ ಪ್ರಶಂಸಿಸಿರುವ “ಟಾಟಾ ಸನ್ಸ್’ ಸಮೂಹದ ಅಧ್ಯಕ್ಷ ರತನ್ ಟಾಟಾ ಅವರು, “ಮೋದಿ ಅವರಿಗೆ ಭಾರತವನ್ನು ರೂಪಾಂತರಿಸುವ ಅವಕಾಶ ನೀಡಬೇಕು, ಏಕೆಂದರೆ ಅವರು ನವಭಾರತ ನಿರ್ಮಾಣದ ದೃಷ್ಟಾರತೆಯನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.
ಸಿಎನ್‌ಬಿಸಿ ಟಿವಿ 18 ವಾಣಿಜ್ಯ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ರತನ್ ಟಾಟಾ ಅವರು ಪ್ರಧಾನಿ ಮೋದಿ ಅವರ ಅತ್ಯಂತ ತ್ವರಿತ ಗತಿಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬಹುವಾಗಿ ಪ್ರಶಂಸಿಸಿದರು. ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ನಾನು ಅವರ ಕಾರ್ಯ ವೈಖರಿ, ಆಡಳಿತ ದಕ್ಷತೆಗಳನ್ನು ಗಮನಿಸಿಕೊಂಡು ಬಂದಿದ್ದೇನೆ’ ಎಂದು ಹೇಳಿದರು
ಟಾಟಾ ನ್ಯಾನೋ ಕಾರ್ ಫ್ಯಾಕ್ಟರಿಯನ್ನು ಪಶ್ಚಿಮ ಬಂಗಾಲದಿಂದ ಗುಜರಾತ್‌ಗೆ ಸ್ಥಳಾಂತರಿಸುವುದಕ್ಕೆ ಕೇವಲ ಮೂರು ದಿನಗಳಲ್ಲಿ ಅಗತ್ಯವಿದ್ದ ಭೂಮಿಯನ್ನು ನೀಡಿ ನೆರವಾದ ಮೋದಿಯನ್ನು ರತನ್ ಟಾಟಾ ಕೃತಜ್ಞತೆಯಿಂದ ಸ್ಮರಿಸಿಕೊಂಡರು.
“ಪ್ರಧಾನಿ ಮೋದಿ ಅವರು ಭಾರತಕ್ಕೆ ಮತ್ತು ಭಾರತದ ಜನರಿಗೆ “ನವಭಾರತ’ದ ಕೊಡುಗೆ ನೀಡುವುದಾಗಿ ಹೇಳಿದ್ದಾರೆ. ಆದುದರಿಂದ ನಾವು ಅದಕ್ಕಾಗಿ ಅವರಿಗೊಂದು ಅವಕಾಶ ನೀಡಬೇಕು. ಮೋದಿ ಭಾರತವನ್ನು ಹೊಸದಾಗಿ ಕಾಣುವ ಸಾಮರ್ಥ್ಯ ಮತ್ತು ನವೋನ್ಮೆàಷತೆಯನ್ನು ಹೊಂದಿದ್ದಾರೆ. ಮೋದಿ ನಾಯಕತ್ವದಲ್ಲಿ ಭಾರತವು ನವಭಾರತವಾಗಿ ರೂಪುಗೊಳ್ಳುವ ವಿಶ್ವಾಸ ಮತ್ತು ಆಶಾವಾದವನ್ನು ನಾನು ಹೊಂದಿದ್ದೇನೆ’ ಎಂದು ರತನ್ ಟಾಟಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.