ಅಕ್ರಮ ತಂಬಾಕು ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ

Team Udayavani, Sep 21, 2017, 11:09 AM IST

bg-2.jpg

ದೇವನಹಳ್ಳಿ: ಪಟ್ಟಣದ ಹಳೇ ಬಸ್‌ ನಿಲ್ದಾಣ ಮತ್ತು ಇತರ ಕಡೆ ಪೊಲೀಸ್‌ ಇಲಾಖೆ ಮತ್ತು ತಂಬಾಕು ಮಾರಾಟ ನಿಯಂತ್ರಣಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದರು.

ದೇವನಹಳ್ಳಿ ಪೊಲೀಸ್‌ ಠಾಣೆ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ತಂಬಾಕು ನಿಯಂತ್ರಣದ ಉನ್ನತ ಮಟ್ಟದ ಸಮಿತಿ ವತಿಯಿಂದ ನಡೆದ ಕಾರ್ಯಾಚರಣೆಯಲ್ಲಿ ನಗರದ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣ, ವಿಜಯಪುರ ಸರ್ಕಲ್‌,
ರಾಣಿ ಸರ್ಕಲ್‌, ಹಳೇ ಬಸ್‌ ನಿಲ್ದಾಣ, ಆರ್‌ಟಿಓ ಸುತ್ತಮುತ್ತಲ ಪ್ರದೇಶ, ಹೆದ್ದಾರಿ ಅಕ್ಕಪಕ್ಕದ ಪ್ರದೇಶ ಸೇರಿದಂತೆ ಇತರ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಹೋಟೆಲ್‌, ಬಸ್‌ ನಿಲ್ದಾಣಗಳು ತಂಬಾಕು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳು, ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶ ಬಾರ್‌ ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ, ಶಾಲಾ-ಕಾಲೇಜುಗಳ ಬಳಿ
ತಂಬಾಕು ಉತ್ಪನ್ನಗಳ ಮಾರಾಟ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ತಂಬಾಕು ಉತ್ಪನ್ನಗಳ ಅನಧಿಕೃತ ಜಾಹೀರಾತುಗಳ ಪ್ರದರ್ಶನ ಸೇರಿದಂತೆ ಇನ್ನಿತರ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ಕ್ರಮ ಜರುಗಿಸಿದ್ದಾರೆ.

ಪಟ್ಟಣದಲ್ಲಿ 110 ಪ್ರಕರಣ ದಾಖಲು: ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಸಹಾಯಕ ಪೊಲೀಸ್‌ ಕಮೀಷನರ್‌ ಜಿ.ಗುರುಸ್ವಾಮಿ ಮಾತನಾಡಿ, ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ವಿಶೇಷ ಕಾರ್ಯಾಚರಣೆ ಅಡಿ 110
ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳದಲ್ಲೇ 20, 900 ರೂ. ದಂಡ ವಸೂಲಿ ಮಾಡಲಾಗಿದೆ. ತಂಬಾಕು ದುಷ್ಪರಿಣಾಮದ ಕುರಿತು ಹಾಗೂ ಕೋಟಾ ಕಾಯ್ದೆ ಕುರಿತು ಈಗಾಗಲೇ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದ ಜನಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಉಪ ಪೊಲೀಸ್‌ ಆಯುಕ್ತರ ಆದೇಶದ್ವನಯ ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಅನುಷ್ಠಾನದ ಉದ್ದೇಶದಿಂದ ವಿಭಾಗಾದ್ಯಂತ ಪ್ರತಿ ತಾಣ ಮಟ್ಟದಲ್ಲಿ ವಿಶೇಷ ಕಾರ್ಯಾಚರಣೆ/ದಾಳಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

60 ಸಾವಿರ ರೂ. ದಂಡ: ತಂಬಾಕು ನಿಯಂತ್ರಣ ಯೋಜನೆ ಜಾಗೃತ ದಳ ಸದಸ್ಯ ಜಾನ್‌ ಕೆನಡಿ ಮಾತನಾಡಿ, ರಾಜ್ಯ ಹೈಕೋರ್ಟ್‌ ಆದೇಶದಂತೆ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಉನ್ನತಮಟ್ಟದ ಜಾಗೃತ ದಳ ನೇಮಕಮಾಡಿ ಮಾರಾಟಕ್ಕೆ ಕಡಿವಾಣ ಹಾಕಲು ಈಗಾಗಲೇ ಸಮಿತಿ ರಚಿಸಿದೆ ಎಂದರು.

ಕಠಿಣ ಕ್ರಮದ ಎಚ್ಚರಿಕೆ: ಪೊಲೀಸ್‌ ಇನ್ಸ್‌ ಪೆಕ್ಟರ್‌ ಶಿವಸ್ವಾಮಿ, ಕಳೆದ ಒಂದು ವಾರದಿಂದ ಈಶಾನ್ಯ ವಿಭಾಗದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು 319 ಪ್ರಕರಣ ದಾಖಲಿಸಿ 60 ಸಾವಿರ ರೂ.ದಂಡ ವಸೂಲಿ ಮಾಡಲಾಗಿದೆ. ದಾಳಿಯು ನಿರಂತರವಾಗಿ ಮುಂದುವರಿಯಲಿದ್ದು, ಕಾಯ್ದೆ ಉಲ್ಲಂ ಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಯೋಜನಾ ಜಾಗೃತ ದಳದ ಸಮಿತಿ ಸದಸ್ಯರಾದ ಅಮಿತ್‌ ಕಾರ್ನಿಕ್‌, ಎನ್‌.ಜಿ.ಅಚ್ಯುತ, ಪೊಲೀಸ್‌ ಉಪನಿರೀಕ್ಷಕ ನಂದೀಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.