ಮಂಗಳೂರು-ದೋಹಾ ವಿಮಾನತುರ್ತು ಭೂಸ್ಪರ್ಶ: ತಪ್ಪಿದ ಅನಾಹುತ

Team Udayavani, Sep 22, 2017, 8:32 AM IST

22-STATE-8.jpg

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 173 ಮಂದಿ ಪ್ರಯಾಣಿಕರನ್ನು ಹೊತ್ತು ದೋಹಾಕ್ಕೆ ಗುರುವಾರ ಸಂಜೆ ಹೊರಟಿದ್ದ ಏರ್‌ ಇಂಡಿಯಾದ ವಿಮಾನವು ತಾಂತ್ರಿಕ ದೋಷದಿಂದಾಗಿ ಟೇಕ್‌ ಆಫ್‌ ಆದ ಅರ್ಧತಾಸಿನಲ್ಲಿಯೇ ತುರ್ತು ಭೂಸ್ಪರ್ಶವಾದ ಘಟನೆ ಸಂಭವಿಸಿದೆ. ಆ ಮೂಲಕ, ಸಂಭವಿಸಬಹುದಾದ ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸುವಲ್ಲಿ ಪೈಲಟ್‌ ಯಶಸ್ವಿಯಾಗಿದ್ದು, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

 ಏರ್‌ ಇಂಡಿಯಾ “ಎಕ್ಸ್‌ಪ್ರೆಸ್‌ ಐಎಕ್ಸ್‌ 821′ ಎಂಬ ವಿಮಾನವು ಗುರುವಾರ ಸಂಜೆ 5.30ಕ್ಕೆ ದೋಹಾ ಕಡೆಗೆ ಹೊರಟಿತ್ತು. ಆದರೆ, ವಿಮಾನ ಹಾರಾಟ ಪ್ರಾರಂಭಿಸಿದ ಸುಮಾರು ಅರ್ಧ ತಾಸಿನಲ್ಲಿಯೇ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಪೈಲಟ್‌ ವಿಮಾನವನ್ನು ಮತ್ತೆ ಮಂಗಳೂರು ವಿಮಾನ ನಿಲ್ದಾಣದತ್ತ ಹಿಂತಿರುಗಿಸಿದ್ದಾರೆ. ಹೀಗಾಗಿ, ಈ ವಿಮಾನವನ್ನು ಸಂಜೆ
ಸುಮಾರು 6.30ಕ್ಕೆ ಮಂಗಳೂರು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸುವಲ್ಲಿ ಪೈಲಟ್‌ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್‌, “ವಿಮಾನವು ನಿಲ್ದಾಣದಿಂದ ಹೊರಟ ಅರ್ಧ ಗಂಟೆಯಲ್ಲಿ ಒಂದು ಎಂಜಿನ್‌ ಕೆಟ್ಟು ಹೋದ ಕಾರಣ, ತುರ್ತು ಭೂಸ್ಪರ್ಶ ಮಾಡಬೇಕಾಗಿ ಬಂತು. ವಿಮಾನವು ಯಶಸ್ವಿಯಾಗಿ
ಲ್ಯಾಂಡಿಂಗ್‌ ಆಗಿದ್ದು, ಪ್ರಯಾಣಿಕರೆಲ್ಲ ಸುರಕ್ಷಿತರಾಗಿದ್ದಾರೆ.

ಪ್ರಯಾಣ ಸಾಧ್ಯವಾಗದ ಹಿನ್ನೆಲೆಯಲ್ಲಿ ದೋಹಾಕ್ಕೆ ತೆರಳುವುದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ. ತುರ್ತು ಭೂಸ್ಪರ್ಶ ಮಾಡಿದ ಹಿನ್ನಲೆಯಲ್ಲಿ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರಿಗೆ ಮಂಗಳೂರು ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಉಳಿದುಕೊಳ್ಳುವುದಕ್ಕೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. 

ಸೆಲ್ಫಿ ತೆಗೆದುಕೊಂಡ ಪ್ರಯಾಣಿಕರು: ವಿಮಾನವು ಹಾರಾಟ ನಡೆಸುತ್ತಿರಬೇಕಾದರೆ, ಎಂಜಿನ್‌ ಕೆಟ್ಟು ಹೋಗಿ ಶಬ್ದ ಕೇಳಿಸುತ್ತಿದ್ದರೂ ಆ ಸಂದರ್ಭದ ಅಪಾಯದ ಪರಿಸ್ಥಿತಿಯನ್ನು ಪೈಲಟ್‌ ಹಾಗೂ ವಿಮಾನದಲ್ಲಿದ್ದ ಏರ್‌ ಇಂಡಿಯಾ ಸಿಬ್ಬಂದಿ ಬಹಳ ಪ್ರಶಂಸಾರ್ಹ ರೀತಿ ನಿಭಾಯಿಸಿದ್ದಾರೆ. ಪ್ರಯಾಣಿಕರೆಲ್ಲರೂ, ಪೈಲಟ್‌ನ ಧೈರ್ಯ ಹಾಗೂ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಿಸಿರುವುದಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇಅಲ್ಲ, ತಮ್ಮ ಪ್ರಾಣ ಉಳಿಸಿದ ಖುಷಿಗೆ ಪೈಲಟ್‌ ಜತೆಗೆ ಸೆಲ್ಫಿ ಕೂಡ ತೆಗೆದುಕೊಂಡು ಸಂಭ್ರಮಪಟ್ಟಿದ್ದಾರೆ. 

ಟಾಪ್ ನ್ಯೂಸ್

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.