ಪೋಲಿಯೋ ಡ್ರಾಪ್ಸ್‌ ಹಾಕಿದ ಅರ್ಧ ತಾಸಿನೊಳಗೆ ಬಾಲಕನ ಸಾವು


Team Udayavani, Sep 22, 2017, 11:09 AM IST

Polio Death-700.jpg

ಹೊಸದಿಲ್ಲಿ : ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್‌ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಸ್‌ ಡ್ರಾಪ್ಸ್‌ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್‌ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು  ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್‌ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು. 

ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್‌ ನೀಡಿದರು ಎಂದು ವರದಿಗಳು ತಿಳಿಸಿವೆ. 

ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್‌ಬೀರ್‌ ಸಿಂಗ್‌ ಈ ಬಗ್ಗೆ ಹೇಳಿರುವುದು ಇಷ್ಟು :

ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್‌ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು. ಪೋಲಿಯೋ ಡ್ರಾಪ್ಸ್‌ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.

“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್‌ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು  ಡಾ. ಜಸ್‌ಬೀರ್‌ ಸಿಂಗ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.