ಪರ್ಯಾಯಾಧಿಪತಿ ಪಲಿಮಾರು ಶ್ರೀಗಳಿಂದ ಬಿಲ್ಲವರ ಭವನಕ್ಕೆ ಭೇಟಿ
Team Udayavani, Sep 22, 2017, 12:35 PM IST
ಮುಂಬಯಿ: ಮುಂದಿನ ಉಡುಪಿ ಪರ್ಯಾಯ ಪೀಠವನ್ನು ಅಲಂಕರಿಸಲಿರುವ, ಪರ್ಯಾಯ ಸಂಚಾರಕ್ಕಾಗಿ ಮುಂಬಯಿ ಮಹಾನಗರಕ್ಕೆ ಸೆ. 21ರಂದು ಆಗಮಿಸಿದ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಸಂಜೆ ಸಾಂತಾಕ್ರೂಜ್ ಪೂರ್ವದ ಬಿಲ್ಲವರ ಭವನದ ಶ್ರೀ ನಾರಾಯಣಗುರು ಮಂದಿರಕ್ಕೆ ಪಾದಾರ್ಪಣೆಗೈದು ಪೂಜೆ ಸಲ್ಲಿಸಿದರು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಮತ್ತು ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್ ಶ್ರೀಪಾದರಿಗೆ ಪುಷ್ಪಾರ್ಚನೆಗೈದು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಶ್ರೀಗಳು ಭವನದ ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ರವೀಂದ್ರ ಶಾಂತಿ ಪೂಜೆಯನ್ನು ನೆರವೇರಿಸಿ ಮಹಾಮಂಗಳಾರತಿಗೈದರು. ಕೋಟಿ-ಚೆನ್ನಯ ಮತ್ತು ಕಾಂತಬಾರೆ ಬೂದಬಾರೆ ಅವರ ಭಾವಚಿತ್ರಕ್ಕೆ ಸಂತೋಷ್ ಕೆ. ಪೂಜಾರಿ ಅವರು ಪುಷ್ಪಾರ್ಚನೆಗೈದು ನಮಿಸಿ ತೀರ್ಥ ಪ್ರಸಾದ ವಿತರಿಸಿದರು.
ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಗೌವ ಜೊತೆ ಕಾರ್ಯದರ್ಶಿಗಳಾದ ಹರೀಶ್ ಜಿ. ಸಾಲ್ಯಾನ್, ಆಶಾಲತಾ ಕೋಟ್ಯಾನ್, ದೇವೇಂದ್ರ ಬಂಗೇರ ಖಾರ್, ಭವನದ ವ್ಯವಸ್ಥಾಪಕ ಭಾಸ್ಕರ್ ಟಿ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದು ಶ್ರೀಗಳಿಗೆ ಸಾಂಪ್ರದಾಯಿಕ ಗೌರವ ನೀಡಿದರು. ಮಹಿಳೆಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
Unique Achiever: ಗಡಿನಾಡಿನ ಅನನ್ಯ ಸಾಧಕ ಪ್ರೊ| ಪಿ. ಶ್ರೀಕೃಷ ಭಟ್
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.