ಯದುವೀರ್‌ರಿಗೆ ಬಹುಪರಾಕ್‌..ಬಹುಪರಾಕ್‌… 


Team Udayavani, Sep 22, 2017, 12:38 PM IST

mys5.jpg

ಮೈಸೂರು: ಶರನ್ನವರಾತ್ರಿ ಅಂಗವಾಗಿ ಅರಮನೆಯಲ್ಲಿ ಮೈಸೂರು ರಾಜವಂಶಸ್ಥರ ಖಾಸಗಿ ದರ್ಬಾರ್‌ ಆರಂಭಗೊಂಡಿದೆ. ನವರಾತ್ರಿ ಸಂದರ್ಭದಲ್ಲಿ ಮೈಸೂರು ಅರಸರ ಸಂಪ್ರದಾಯದಂತೆ ಪ್ರತಿದಿನವೂ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್‌ ನಡೆಸುವುದು  ಸಂಪ್ರದಾಯ. ಅದರಂತೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಗುರುವಾರ ಐತಿಹಾಸಿಕ ಅಂಬಾವಿಲಾಸ ಅರಮನೆ ದರ್ಬಾರ್‌ ಹಾಲ್‌ನಲ್ಲಿ ಖಾಸಗಿ ದರ್ಬಾರ್‌ ನಡೆಸಿದರು.

ನವರಾತ್ರಿ ಮೊದಲ ದಿನ ಪಾಡ್ಯವಾಗಿದ್ದು, ಖಾಸಗಿ ದರ್ಬಾರ್‌ ಆಚರಣೆ ಹಿನ್ನೆಲೆಯಲ್ಲಿ ಯದುವೀರ್‌ರಿಗೆ ಮುಂಜಾನೆಯೇ ಎಣ್ಣೆ ಶಾಸ್ತ್ರ ಮಾಡಿ ûೌರಿಕರಿಂದ ಚೌಲ ಮಾಡಿಸಿ ನಂತರ ಮಂಗಳ ಸ್ನಾನ ಮಾಡಿಸಲಾಯಿತು. ಬಳಿಕ ಮುತ್ತೆçದೆಯರು ಹಾಗೂ ಪುರೋಹಿತ ಮನೆತನದ ಮಹಿಳೆಯರು ಯದುವೀರ್‌ ಒಡೆಯರ್‌ರಿಗೆ ಆರತಿ ಬೆಳಗುತ್ತಿದ್ದಂತೆ ಪೂಜೆಗೆ ಅಣಿಯಾದರು.

ಅದರಂತೆ ಅರಮನೆಯಲ್ಲಿರುವ ಚಾಮುಂಡಿತೊಟ್ಟಿಯಲ್ಲಿ ಗಣಪತಿಗೆ ಪೂಜೆ ನೆರವೇರಿಸಿದ ಯದುವೀರ್‌, ಬಳಿಕ ಕಲಶಪೂಜೆ, ಕಂಕಣಪೂಜೆ ನಡೆಸಿ, ಕುಲದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪತ್ನಿ ತ್ರಿಷಿಕಾಕುಮಾರಿ ಒಡೆಯರ್‌ರಿಂದ ರಾಜಮನೆತನದ ಪದ್ಧತಿಯಂತೆ ಬೆಳಗ್ಗೆ 8.20ರಿಂದ 9.20ರೊಳಗೆ ಕಂಕಣ ಧರಿಸಲಾಯಿತು. ಇದಕ್ಕೂ ಮುನ್ನ ಸಿಂಹಾಸನಕ್ಕೆ ಬೆಳಗ್ಗೆ 7.55ರಿಂದ 8.15ರೊಳಗೆ ಸಿಂಹಗಳನ್ನು ಜೋಡಣೆ ಮಾಡಲಾಯಿತು.

ಬಳಿಕ ಪಟ್ಟದ ಆನೆಗಳಾದ ಗೋಪಿ, ವಿಕ್ರಮ, ಪಟ್ಟದ ಕುದುರೆ, ಪಟ್ಟದ ಹಸು, ಒಂಟೆ, ಅರಮನೆ ಆನೆಗಳಾದ ಪ್ರೀತಿ, ಸೀತಾ, ರೂಪ ಹಾಗೂ ಚಂಚಲ ಆನೆಯನ್ನು ಸವಾರಿ ತೊಟ್ಟಿಗೆ ಕರೆತರಲಾಯಿತು. ಅರಮನೆ ಆವರಣದಲ್ಲಿರುವ ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಕಲಶದೊಂದಿಗೆ ದೇವರನ್ನು ತರಲಾಯಿತು. ಪಟ್ಟದ ಆನೆ, ಕುದುರೆ, ಹಸು ಸೇರಿದಂತೆ ಅರಮನೆ ಪುರೋಹಿತರು ಕಂಕಣ ಧರಿಸಿದ್ದ ಯದುವೀರ ಒಡೆಯರ್‌ರಿಗೆ ಹರಸಿದರು.

ಖಾಸಗಿ ದರ್ಬಾರ್‌ ಆರಂಭಕ್ಕೂ ಮುನ್ನ ಸವಾರಿ ತೊಟ್ಟಿಯಿಂದ ಯದುವೀರ ಒಡೆಯರ್‌ರನ್ನು ದರ್ಬಾರ್‌ ಹಾಲ್‌ಗೆ ಕಟ್ಟಿಗೆಯವರು, ಜೋಪಾದವರು, ದೀವಟಿಗೆಯವರು ಸಕಲ ಬಿರುದು ಬಾವಲಿಯೊಂದಿಗೆ ಬಹುಪರಾಕ್‌ ಹಾಕಿ ದರ್ಬಾರ್‌ ಹಾಲ್‌ಗೆ ಕರೆತಂದರು. ನಂತರ ಮಧ್ಯಾಹ್ನ 12 ಗಂಟೆಯಿಂದ ಸಿಂಹಾಸನಾರೋಹಣಕ್ಕೂ ಮುನ್ನ ಕಲಶ ಪೂಜೆ ನಡೆಯಿತು. ನಂತರ ಸಿಂಹಾಸನಕ್ಕೆ 3 ಸುತ್ತು ಪ್ರದಕ್ಷಿಣೆ ಹಾಕಿದ ಯದುವೀರ್‌, ಮಧ್ಯಾಹ್ನ 12.45ರಿಂದ 12.55ರ ಶುಭ ಘಳಿಗೆಯಲ್ಲಿ ರತ್ನಖಚಿತ ಸಿಂಹಾಸನವೇರಿ ವೀರಾಜಮಾನರಾಗಿ ಕಂಗೊಳಿಸಿದರು.

ಈ ವೇಳೆ ಶ್ರೀಚಾಮುಂಡೇಶ್ವರಿ ದೇವಾಲಯ, ಮೇಲುಕೋಟೆ ಚೆಲುವನಾರಾಯಣಸ್ವಾಮಿ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಅರಮನೆ ಆವರಣದಲ್ಲಿರುವ ಎಲ್ಲಾ ದೇವಾಲಯಗಳು ಸೇರಿದಂತೆ ಸುಮಾರು 23 ದೇವಾಲಯಗಳಿಂದ ತಂದಿದ್ದ ಪ್ರಸಾದವನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಗೆ ನೀಡಿ ತೀರ್ಥ ಪ್ರೋಕ್ಷಣೆ ಮಾಡಿ ಶುಭ ಕೋರಿದರು. ಬಳಿಕ ದೃಷ್ಟಿ ತೆಗೆಯಲಾಯಿತು. ನಂತರ ಯದುವೀರ್‌ ಅವರು ಸಿಂಹಾಸನದ ಮೇಲೆ ಎದ್ದುನಿಂತು ಸೆಲ್ಯೂಟ್‌ ಹೊಡೆದು ಹೊಗಳು ಭಟ್ಟರು ಹಾಗೂ ದೀವಿಟಿಗೆಕಾರರಿಂದ ಗೌರವ ಹಾಗೂ ಬಹುಪರಾಕ್‌ ಪಡೆದು ಸವಾರಿ ತೊಟ್ಟಿಯತ್ತ ತೆರಳಿದರು.

ಖಾಸಗಿ ದರ್ಬಾರ್‌ ಮುಗಿಸಿ ಸವಾರಿ ತೊಟ್ಟಿಗೆ ಆಗಮಿಸಿದ ಯದುವೀರ್‌ರಿಗೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್‌ ಪಾದ ಪೂಜೆ ಮಾಡಿದರು. ಈ ವೇಳೆ ಪ್ರಮೋದಾದೇವಿ ಒಡೆಯರ್‌ ಖಾಸಗಿ ದರ್ಬಾರ್‌ ವೀಕ್ಷಿಸಿದರು. ಅಲ್ಲದೆ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಅರಮನೆಗೆ ಆಗಮಿಸಿ ಖಾಸಗಿ ದರ್ಬಾರ್‌ ವೀಕ್ಷಿಸಿದರು. ನಂತರ ಸಿಂಹಾಸನವನ್ನು ವಸ್ತ್ರಗಳಿಂದ ಮರೆಮಾಡಲಾಯಿತು. 

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.