ಪಿಂಚಣಿ ಬಾಕಿ ಹಣಕ್ಕಾಗಿ ಸರಣಿ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
Team Udayavani, Sep 22, 2017, 1:00 PM IST
ಹುಬ್ಬಳ್ಳಿ: ಮಹಾನಗರ ಪಾಲಿಕೆಗೆ ಬರಬೇಕಾದ ಪಿಂಚಣಿ ಬಾಕಿ ಹಣ ತರುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ವಿಫಲವಾಗಿದ್ದು, ಸೆ.25ರ ನಂತರ ಅವರ ನಿವಾಸ ಹಾಗೂ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ನಾಗೇಶ ಕಲಬುರ್ಗಿ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಗೆ 107 ಕೋಟಿ ರೂ. ಪಿಂಚಣಿ ಹಣ ಸರಕಾರದಿಂದ ಬರಬೇಕಾಗಿದೆ. ಬೇರೆ ಯೋಜನೆಗಳಿಗೆ ಮೀಸಲಿರಿಸಿದ್ದ ಹಣವನ್ನೇ ಪಾಲಿಕೆ ನಿವೃತ್ತ ನೌಕರರಿಗೆ ನೀಡಿದ್ದು, ಇದರಿಂದಾಗಿ ಅಭಿವೃದ್ಧಿ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದರು.
ಪಿಂಚಣಿ ಹಣ ನೀಡುವ ಕುರಿತು ಸಾಕಷ್ಟು ಹೋರಾಟ ಮಾಡಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಹಲವು ಬಾರಿ ಒತ್ತಾಯಿಸಲಾಗಿದೆ. ಪಿಂಚಣಿ ಹಣ ತಂದರೆ ಪಕ್ಷದಿಂದ ಸನ್ಮಾನ ಮಾಡಲಾಗುವುದೆಂದು ಸಹ ಘೋಷಿಸಲಾಗಿತ್ತು.
ಆದರೆ ಮಹಾನಗರದ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಿಂಚಿತ್ತು ತಲೆಕೆಡಿಸಿಕೊಂಡಿಲ್ಲ. ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಇವರಿಂದ ಆಗಿಲ್ಲ. ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಸೆ.25ರಂದು ಪಂಡೀತ ದೀನದಯಾಳ ಅವರ ಜನ್ಮ ಶತಮಾನೋತ್ಸವದ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿದ ನಂತರ ಪ್ರತಿಯೊಂದು ಮೋರ್ಚಾದಿಂದ ನಿತ್ಯವೂ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದರು.
ಪಾಲಿಕೆ ಆಯುಕ್ತರು ಕೂಡ ನಗರದ ಅಭಿವೃದ್ಧಿ ವಿಚಾರದಲ್ಲಿ ಸ್ಪಂದಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಮಳೆಯಿಂದ ನಿರ್ಮಾಣವಾಗಿರುವ ಪ್ರಮುಖ ರಸ್ತೆ ಹಾಗೂ ಒಳ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ಆಗುತ್ತಿಲ್ಲ. ಪ್ರತಿಯೊಂದಕ್ಕೂ ಅಡ್ಡಗಾಲು ಹಾಕುತ್ತಿದ್ದಾರೆ.
ಸಣ್ಣ ಅಭಿವೃದ್ಧಿ ಕಾರ್ಯಗಳು ಕೂಡ ನಡೆಯುತ್ತಿಲ್ಲ. ನಗರದ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ ತೋರುತ್ತಿದ್ದಾರೆಂದು ಆರೋಪಿಸಿದರು. ಇತ್ತೀಚೆಗೆ ಬಾಗಲಕೋಟೆಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಪಾಲಿಕೆ ಸದಸ್ಯ ವೀರಣ್ಣ ಸವಡಿ ಅವರನ್ನು ವಿಧಾನಸಭೆ ಚುನಾವಣೆಗೆ ಹುಬ್ಬಳ್ಳಿ-ಧಾರವಾಡದ ಸಂಚಾಲಕರನ್ನಾಗಿ ಆಯ್ಕೆ ಮಾಡಿದೆ ಎಂದು ತಿಳಿಸಿದರು.
ಮುಖಂಡರಾದ ಮಹೇಶ ಟೆಂಗಿನಕಾಯಿ, ದತ್ತಮೂರ್ತಿ ಕುಲಕರ್ಣಿ, ಸತೀಶ ಶೇಜವಾಡಕರ, ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಶಿವಾನಂದ ಮುತ್ತಣ್ಣವರ, ಮಹೇಶ ಬುರ್ಲಿ, ಶಿವು ಮೆಣಸಿನಕಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.