ಕಂದಮ್ಮನನ್ನು ಮಣ್ಣಿನಲ್ಲಿ ಹೂತು ಅತ್ಯಾಚಾರ..!
Team Udayavani, Sep 23, 2017, 9:01 AM IST
ಬೆಳಗಾವಿ/ಹಾರೂಗೇರಿ: ಮೂರು ವರ್ಷದ ಕಂದಮ್ಮನನ್ನು ಸ್ವಂತ ಸೋದರ ಮಾವನೇ ಮಣ್ಣಿನಲ್ಲಿ ಜೀವಂತ ಹೂತು,
ನಂತರ ಅತ್ಯಾಚಾರ ಎಸಗಿದ ಪೈಶಾಚಿಕ ಕೃತ್ಯ ರಾಯಬಾಗ ತಾಲೂಕಿನ ಹಾರೂಗೇರಿ ಸಮೀಪದ ಕುರುಬ ಗೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಇದೇ ಗ್ರಾಮದ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬಾತನೇ ಪೈಶಾಚಿಕ ಕೃತ್ಯ ಎಸಗಿದ್ದು, ಈತನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಾಕೊಲೇಟ್ ಕೊಡಿಸುವ ನೆಪದಲ್ಲಿ ತನ್ನ ಸ್ವಂತ ತಂಗಿಯ ಮಗಳನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಉದ್ದಪ್ಪ ಮೂರು ವರ್ಷದ ಕಂದಮ್ಮನನ್ನು ಮನೆಗೆ ಬಂದು ಕರೆದೊಯ್ದಿದ್ದಾನೆ. ಸುಮಾರು 500 ಮೀಟರ್ ದೂರದಲ್ಲಿರುವ ಕಬ್ಬಿನ ಗದ್ದೆಗೆ ಕರೆದೊಯ್ದು ಮೊದಲು ಬಾಯಿ ಮುಚ್ಚಿ, ಮಣ್ಣಿನಿಂದ ಬಾಯಿ ಹಾಗೂ ಹೊಟ್ಟೆ ಭಾಗವನ್ನು ಮುಚ್ಚಿದ್ದಾನೆ. ಉಸಿರುಗಟ್ಟಿ ಹಸುಳೆ ಮೃತಪಟ್ಟಿದೆ. ಮಗು ಸತ್ತಿದೆ ಎಂದು ಖಾತ್ರಿ ಪಡಿಸಿಕೊಂಡು ನಂತರ
ಮೃತದೇಹದ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಅತ್ಯಾಚಾರದ ಬಗ್ಗೆ ಮಾಹಿತಿ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃತ್ಯ ಎಸಗಿದ ನಂತರ ಮಣ್ಣು ಮೆತ್ತಿಕೊಂಡಿದ್ದ ಬಟ್ಟೆಗಳನ್ನು ಮನೆಗೆ ಬಂದು ತೊಳೆದುಕೊಳ್ಳುವಾಗ ಆತನ ತಾಯಿ ಪ್ರಶ್ನೆ ಮಾಡಿದರೂ “ಗೊತ್ತಿಲ್ಲ ‘ ಎಂದಿದ್ದಾನೆ. ಅನುಮಾನಗೊಂಡ ಸ್ಥಳೀಯರು ಧರ್ಮದೇಟು ನೀಡಿ ವಿಚಾರಿಸಿದಾಗ ಬಾಯಿ ಬಿಟ್ಟಿದ್ದಾನೆ. ಕಾಮುಕನ ಪೈಶಾಚಿಕ ಕೃತ್ಯದ ಬಗ್ಗೆ ಆಕ್ರೋಶಗೊಂಡ ಗ್ರಾಮಸ್ಥರು ಆತನನ್ನು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದಿ, ಡಿಎಸ್‌ಪಿ ಎಸ್.ಎಸ್.ಚಿಟಗುಬ್ಬಿ, ರಾಯಬಾಗ ಸಿಪಿಐ, ಹಾರೂಗೇರಿ
ಪಿಎಸ್‌ಐ ಮಹ್ಮದ್ ರಫಿಕ ತಹಸೀಲ್ದಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರೋಪಿಯನ್ನು ವಿಚಾರಣೆ ಗೊಳಪಡಿಸಿ ಶುಕ್ರವಾರ ಸಂಜೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಗುವಿನ ಮೃತದೇಹವನ್ನು ಬೆಳಗಾವಿಗೆ ತಂದು ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕಣ್ಣೀರಿಟ್ಟ ಎಎಸ್‌ಪಿರವೀಂದ್ರ ಗಡಾದಿ ಪೈಶಾಚಿಕ ಕೃತ್ಯ ನಡೆದ ಸ್ಥಳಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಎಎಸ್‌ಪಿ ರವೀಂದ್ರ ಗಡಾದಿ ಮಗುವಿನ ಸ್ಥಿತಿ ಕಂಡು ಕಣ್ಣೀರಿಟ್ಟರು. ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದನ್ನು ಕಂಡು ಗದ್ಗದಿತರಾದ ಅವರು, ಅರ್ಧ ಭಾಗ ಮಣ್ಣಿನಲ್ಲಿ ಹೂತಿದ್ದ ದೇಹ ಕಂಡು ಕೆಲಕಾಲ ಏನೂ ತೋಚದೇ ಕಣ್ಣೊರೆಸಿಕೊಂಡರು. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ ಗಡಾದಿ, ವೈದ್ಯಕೀಯ ತಪಾಸಣೆಗೆ ಬೆಳಗಾವಿಗೆ ಕರೆ ತರುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.