ಕೊರಟಗೆರೆಯಿಂದಲೇ ಸ್ಪರ್ಧಿಸಲು ಪರಂ ಸಿದ್ಧತೆ
Team Udayavani, Sep 23, 2017, 9:38 AM IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸೋಲಿನಿಂದ ಕ್ಷೇತ್ರ ಬದಲಾಯಿಸುವ ಆಲೋಚನೆ ಹೊಂದಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಇದೀಗ ಕೊರಟಗೆರೆ ಕ್ಷೇತ್ರದಿಂದಲೇ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಅದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗಿಳಿಯಲು ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದ್ದು, ವಾರದಲ್ಲಿ ಕನಿಷ್ಠ ಮೂರು ದಿನ ಕೊರಟಗೆರೆ ಕ್ಷೇತ್ರದಲ್ಲಿ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸದೇ ಹೋದರೆ, ಮುಂದಿನ ಬಾರಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳಲು ಅವಕಾಶ ದೊರೆಯುವುದಿಲ್ಲ ಎಂಬ ಕಾರಣಕ್ಕೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಚುನಾವಣೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿಯೂ ಸೋತು ಸರ್ಕಾರದಲ್ಲಿ ಸಚಿವರಾಗಲೂ ಸಾಕಷ್ಟು ಪರದಾಡಿದ್ದ ಪರಮೇಶ್ವರ್, 2018ರ ಚುನಾವಣೆಗೆ ಸ್ಪರ್ಧಿಸುವುದೋ ಬೇಡವೋ ಎಂಬ ಗೊಂದಲದಲ್ಲಿದ್ದರು. ಈ ನಡುವೆ ಕ್ಷೇತ್ರ ಬದಲಾಯಿಸಿ ಬೆಂಗಳೂರಿನ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆಯೂ ಚಿಂತನೆ ನಡೆಸಿದ್ದರು. ಇದೀಗ ಕೊರಟಗೆರೆಯಲ್ಲೇ ಸ್ಪರ್ಧೆಗೆ ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ, ಕೊರಟಗೆರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಜನರ ನಾಡಿ ಮಿಡಿತ ಏನು ಎಂಬುದನ್ನು ತಿಳಿದುಕೊಳ್ಳಲು ಪರಮೇಶ್ವರ್ ಅವರು ಖಾಸಗಿಯಾಗಿ 2 ಬಾರಿ ಸಮೀಕ್ಷೆ ನಡೆಸಿದ್ದಾರೆ. ಸಮೀಕ್ಷೆಯಲ್ಲಿ ಗೆಲ್ಲುವ ಬಗ್ಗೆ ಸಕಾರಾತ್ಮಕ ವರದಿ ಬಂದಿದ್ದು, ತಮ್ಮ ಕ್ಷೇತ್ರದ ಶಾಸಕರಾಗುವವರು ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೆ ಬೆಂಬಲಿಸಬಹುದು ಎಂಬ ಅಭಿಪ್ರಾಯ ಮತದಾರರದ್ದು ಎಂಬ ಅಂಶ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಅದೇ ಕ್ಷೇತ್ರದಲ್ಲಿ ಮತ್ತೂಂದು ಬಾರಿ ಅದೃಷ್ಟ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಜನ ಸಂಪರ್ಕ: ಕೊರಟಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಸುಧಾಕರ ಲಾಲ್ ನಿರಂತರ ಜನ ಸಂಪರ್ಕದಲ್ಲಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಮಾತ್ರ ಕ್ಷೇತ್ರಕ್ಕೆ ತೆರಳಿದರೆ, ಜನರ ವಿಶ್ವಾಸ ಗಳಿಸುವುದು ಕಷ್ಟ ಎಂಬುದನ್ನು ಅರಿತಿರುವ ಪರಮೇಶ್ವರ್ ಈಗಿನಿಂದಲೇ ನಿರಂತರ ಜನರ ಸಂಪರ್ಕದಲ್ಲಿರಲು ವಾರದಲ್ಲಿ ಕನಿಷ್ಠ ಮೂರು ದಿನ ಕ್ಷೇತ್ರದಲ್ಲಿ ಕಾರ್ಯಕರ್ತರು ಮತ್ತು ಮತದಾರರನ್ನು
ಭೇಟಿ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿಯೇ ಬೆಂಗಳೂರಿನಲ್ಲಿಯೇ ವಾಸ ವಿರುವ ಡಾ. ಜಿ. ಪರಮೇಶ್ವರ್ ತಮನ್ನು ಭೇಟಿ ಮಾಡಲು ಕೊರಟಗೆರೆಯಿಂದ ಆಗಮಿಸುವ ಕ್ಷೇತ್ರದ ಜನರನ್ನು ನೋಡಿಕೊಳ್ಳಲು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಕ್ಷೇತ್ರದಿಂದ ಬಂದವರನ್ನು ಗಮನಿಸಲೇಂದೇ ಸಿಬ್ಬಂದಿಯನ್ನೂ ನೇಮಿಸಿಕೊಂಡಿದ್ದು, ಅವರ ಸಮಸ್ಯೆ ಆಲಿಸಿ, ಸೂಕ್ತ ಸಹಾಯ, ಸಹಕಾರ ನೀಡಿ ಕಳುಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
2018ರ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಸೋಲು ಕಾಣಬಾರದೆಂದು ಕ್ಷೇತ್ರದಲ್ಲಿ ಜಾತಿ ಆಧಾರಿತ ಸಂಘಟನೆಗಳನ್ನು ಗುರುತಿಸಿ ಅವುಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಚುನಾವಣೆ ಗೆಲುವಿಗೆ ಹೆಚ್ಚು ಸಹಕಾರಿಯಾಗುವ ಸಾಮಾಜಿಕ ಜಾಲತಾಣವನ್ನೂ ಪ್ರಭಾವಶಾಲಿಯಾಗಿ ಬಳಸಿಕೊಳ್ಳಲು ತಮ್ಮದೇ ಆದ ಜಾಲತಾಣ ನಿರ್ವಹಣಾ ತಂಡವನ್ನು ರಚಿಸಿಕೊಂಡಿದ್ದು, ಆ ತಂಡದ ಮೂಲಕ ಕ್ಷೇತ್ರದಲ್ಲಿ ವಾಟ್ಸ್‌ಆಪ್ ಗ್ರೂಪ್‌ಗ್ಳನ್ನು ಮಾಡಿ ನಿರಂತರ ಸಂಪರ್ಕ ದಲ್ಲಿರಲು ಮುಂದಾಗಿದ್ದಾರೆ ಎನ್ನಲಾಗಿದೆ.
ನಾನು ಕೊರಟಗೆರೆ ಯಿಂದ ಸ್ಪರ್ಧಿಸ ಬೇಕೋ, ಬೇರೆ ಕ್ಷೇತ್ರದಿಂದ ಸ್ಪರ್ಧಿಸಬೇಕೋ ಎನ್ನುವುದನ್ನು ಸೂಕ್ತ ಸಂದರ್ಭದಲ್ಲಿ ಪ್ರಕಟಿಸುತ್ತೇನೆ.
ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ
ಶಂಕರ್ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.