ಮಾತೃಪೂರ್ಣದಿಂದ ಮರಣ ಪ್ರಮಾಣ ಇಳಿಕೆ


Team Udayavani, Sep 23, 2017, 1:27 PM IST

hub3.jpg

ಧಾರವಾಡ: ಮಾತೃಪೂರ್ಣ ಯೋಜನೆಗೆ ಎಲ್ಲರ ಸಹಕಾರ ಮುಖ್ಯವಾಗಿದ್ದು, ಇದರಿಂದ ಮಹಿಳೆ ಮತ್ತು ಮಕ್ಕಳ ಮರಣ ಪ್ರಮಾಣ ತಗ್ಗಿಸಬಹುದು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. 

ನಗರದ ಡಾ| ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಶುಕ್ರವಾರ ಜರುಗಿದ ಮಾತೃಪೂರ್ಣ ಯೋಜನೆ ಅನುಷ್ಠಾನ ಪೂರ್ವಭಾವಿಯಾಗಿ ಹಮ್ಮಿಕೊಂಡ ಬೆಳಗಾವಿ ವಿಭಾಗಮಟ್ಟದ ಅಧಿಕಾರಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕಿಯರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. 

ಮಾತೃಪೂರ್ಣ ಯೋಜನೆಯ ಲಾಭವನ್ನು ಎಲ್ಲರೂ ಪಡೆಯಬೇಕು. ಅಲೆಮಾರಿಗಳು, ರೈತ ಕಾರ್ಮಿಕ ಹೆಣ್ಣು ಮಕ್ಕಳು, ಗುಡ್ಡಗಾಡು ಪ್ರದೇಶದ ವಾಸಿಗಳು ಅಂಗನವಾಡಿಗಳು ದೂರ ಇರುವ ಕಾರಣಗರ್ಭಿಣಿಯರಿಗೆ ಪ್ರತಿನಿತ್ಯ ಬರಲು ತೊಂದರೆಗಳಿದ್ದರೆ ಅವುಗಳನ್ನು ತಿಳಿದು ಸ್ಥಳೀಯ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದರು. 

ಮಹಿಳೆ ಮತ್ತು ಮಕ್ಕಳಿಗೆ ಸಂಬಂ ಧಿಸಿದ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ಮೇಲ್ವಿಚಾರಕಿಯರು ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕು. ನಿಮ್ಮಿಂದ ಪರಿಹಾರ ನೀಡಲು ಸಾಧ್ಯವಾಗದಿದ್ದಲ್ಲಿ ಮೇಲ್ವಿಚಾರಕಿಯರನ್ನು ಭೇಟಿಯಾಗಿ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರ ಮಟ್ಟದಲ್ಲಿ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು. 

ಅಂಗನವಾಡಿ ಕಾರ್ಯಕರ್ತರಲ್ಲಿ ಈ ಯೋಜನೆ ಬಗ್ಗೆ ಅರಿವು ಮೂಡಬೇಕು. ಪ್ರತಿ ಗರ್ಭಿಣಿ ಮಹಿಳೆಯರಿಗೆ ಅವರ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಈ ಯೋಜನೆ ಬಗ್ಗೆ ತಿಳಿಸಬೇಕು. ಗರ್ಭಿಣಿಯರು ಮತ್ತು ಬಾಣಂತಿಯರು ಅಂಗನವಾಡಿಯಲ್ಲಿ ನೀಡುವ ಪೌಷ್ಟಿಕ ಆಹಾರ ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಎಲ್ಲ ಅಗತ್ಯ ವಿಟಾಮಿನ್‌ ದೊರೆಯುತ್ತದೆ ಎಂದರು. 

ಸಂವಾದ: ನಂತರ ಮೇಲ್ವಿಚಾರಕಿಯರು ಮತ್ತು ಅ ಧಿಕಾರಿಗಳೊಂದಿಗೆ ನಡೆದ ಸಂವಾದದಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ಅಂಗನವಾಡಿಗೆ ಬಾರದಿರಲು ಏನೇ ಕಾರಣಗಳಿದ್ದರೂ ತಿಳಿಸುವಂತೆ ಸಚಿವರು ಕೇಳಿದರು. ಇದಕ್ಕೆ ಉತ್ತರಿಸಿದ ಮೇಲ್ವಿಚಾರಕಿಯರು, ಗಡಿ ಪ್ರದೇಶದಲ್ಲಿ ಭಾಷೆಯ ಸಮಸ್ಯೆ, ಶ್ರೀಮಂತರು, ಸ್ವಪ್ರತಿಷ್ಠೆಯುಳ್ಳವರು, ಜಾತಿಯತೆ ಮಾಡುವ ಕೆಲವರು ಈ ರೀತಿ ಅಂಗನವಾಡಿಗೆ ಬಂದು ಊಟ ಸೇವಿಸಲು ನಿರಾಕರಿಸುವ ಸಮಸ್ಯೆಗಳು ಇರುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌, ನಿರ್ದೇಶಕರಾದ ದೀಪಾ ಚೋಳನ್‌, ಜಂಟಿ ನಿರ್ದೇಶಕ ಕಲಮದಾನಿ, ಉಪ ನಿರ್ದೇಶಕ ಬಿ.ಎಸ್‌.ಕಲಾದಗಿ, ಡಿಎಚ್‌ಒ ಓ.ಆರ್‌.ಎಮ್‌.ದೊಡ್ಡಮನಿ, ಬೆಳಗಾವಿ ವಿಭಾಗಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.