ಮುಂದಿನ ತಿಂಗಳಲ್ಲೇ ರಾಹುಲ್‌ಗೆ ಅಧ್ಯಕ್ಷ ಪಟ್ಟ?
Team Udayavani, Sep 24, 2017, 7:20 AM IST
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂದಿನ ತಿಂಗಳು ಅಧ್ಯಕ್ಷ ಹುದ್ದೆಗೆ ಏರುವುದು ಖಚಿತ.
ಇದುವರೆಗೆ ಪಕ್ಷದ ನಾಯಕರು ನಿಗದಿತ ತಿಂಗಳ ಹೆಸರನ್ನು ಉಲ್ಲೇಖೀಸುತ್ತಿ ದ್ದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. 1998ರಿಂದ ಸತತವಾಗಿ 19 ವರ್ಷಗಳ ಕಾಲ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆ ಯಲ್ಲಿ ಪದತ್ಯಾಗ ಮಾಡಲು ಮುಂದಾಗಿದ್ದಾರೆ ಎಂದು ದೆಹಲಿ ಮೂಲದ ಇಂಗ್ಲಿಷ್ ಪತ್ರಿಕೆಯೊಂದು ವರದಿ ಮಾಡಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಯುನೈಟೆಡ್ ಪ್ರೊಗ್ರೆಸಿವ್ ಅಲಯನ್ಸ್ (ಯುಪಿಎ) ಅನ್ನು ಸ್ಥಾಪಿಸಿ 15 ಪಕ್ಷಗಳ ಮೈತ್ರಿಯೊಂದಿಗೆ 2004 ಮತ್ತು 2009ರಲ್ಲಿ ಸತತ ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದ ಹೆಗ್ಗಳಿಕೆ ಅವರದ್ದು.
ಇಷ್ಟು ಮಾತ್ರವಲ್ಲ ಬರೋಬ್ಬರಿ 19 ವರ್ಷಗಳ ಕಾಲ ಅಧ್ಯಕ್ಷ ಹುದ್ದೆಯಲ್ಲಿದ್ದ ಅವರು ನಿವೃತ್ತಿ ಹೊಂದಿದ ಬಳಿಕ ಪಕ್ಷದ ಯಾವುದೇ ಹುದ್ದೆ ವಹಿಸದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಕಾಂಗ್ರೆಸ್‌ನ ಸಂಸದೀಯ ಮಂಡಳಿ ಅಧ್ಯಕ್ಷ ರಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ಹೇಳಿವೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ, ಮುಂದಿನ ತಿಂಗಳು ನಡೆಯುವ ಪಕ್ಷದ ಆಂತರಿಕ ಚುನಾವಣೆ ಯಲ್ಲಿ ಅಧ್ಯಕ್ಷರನ್ನಾಗಿ ರಾಹುಲ್ ಗಾಂಧಿಯವರನ್ನು ನೇಮಿಸಲಾಗುತ್ತದೆ ಎಂದು ಹೇಳಿದ್ದರು.
ಇನ್ನು ರಣತಂತ್ರ ರೂಪಿಸುವ ಕೆಲಸ: “ಈ ನಿರ್ಧಾರ ಸೋನಿಯಾ ಸಕ್ರಿಯ ರಾಜಕೀ ಯದಿಂದ ನಿವೃತ್ತಿ ಪಡೆಯುತ್ತಾರೆ ಎಂದು ಅರ್ಥವಲ್ಲ. ಕಾಂಗ್ರೆಸ್ ಸಂಸದೀಯ ಮಂಡಳಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ರತಿಪಕ್ಷಗಳ ಜತೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಮುಂಚೂಣಿಯ ನೇತೃತ್ವ ವಹಿಸುವುದನ್ನು ಮುಂದುವರಿಸಲಿ ದ್ದಾರೆ. ಯಾವುದೇ ವಿಚಾರದಲ್ಲಿ ಪ್ರತಿಪಕ್ಷ ಗಳೆಲ್ಲ ಒಮ್ಮತಕ್ಕೆ ಬರಬೇಕು ಎಂದರೆ ಅದಕ್ಕೆ ಸೋನಿಯಾಜಿ ಮಾತೇ ಅಂತಿಮ’ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.
ಹಾಲಿ ಉಪಾಧ್ಯಕ್ಷ ಅಧ್ಯಕ್ಷ ಹುದ್ದೆಗೇರಿ ದಾಗ ಸೋನಿಯಾ ಗಾಂಧಿ ಯಾವ ರೀತಿ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುತ್ತಿದ್ದರೋ ಅದೇ ರೀತಿಯಾಗಿ ನೀತಿ ನಿರೂಪಿಸಲು ಮುಕ್ತ ಅವಕಾಶ ಸಿಗುತ್ತದೆ ಎಂದು ಮತ್ತೂಬ್ಬ ಕಾಂಗ್ರೆಸ್ ನಾಯಕ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯೊಂದರ ಅಧ್ಯಕ್ಷ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.