ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ
Team Udayavani, Sep 24, 2017, 7:20 AM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿದ್ದ ಭಿನ್ನಮತ ಶಮನವಾಗಿ ಎಲ್ಲವೂ ಸರಿಹೋಗಿದೆ ಎನ್ನುವಷ್ಟರಲ್ಲಿ ಮತ್ತೆ ಅಸಮಾಧಾನ ಹೊಗೆಯಾಡಿದೆ. ಬೂತ್ ಕಮಿಟಿಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ರಚಿಸಲಾಗಿರುವ ಬೂತ್ ಸಮಿತಿ ಸಭೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಈ ಹಿಂದೆ ಮುನಿಸಿಕೊಂಡಿದ್ದ ಬಣ ಗೈರುಹಾಜರಾಗುವ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿಹೋಗಿಲ್ಲ ಎಂಬ ಸಂದೇಶ ರವಾನಿಸಿದೆ.
ಬೂತ್ ಸಮಿತಿಯ ಸದಸ್ಯರಾಗಿರುವ ಭಾನುಪ್ರಕಾಶ್, ಎಂ.ಬಿ.ನಂದೀಶ್, ಗಿರೀಶ್ ಪಟೇಲ್ ಸೇರಿ ಹಲವರು ಶನಿವಾರ ನಡೆಸಿದ ಬೂತ್ ಸಮಿತಿ ಸಭೆಗೆ ಗೈರು ಹಾಜರಾಗಿದ್ದಾರೆ. ಮೂಲಗಳ ಪ್ರಕಾರ ಇವರೆಲ್ಲರೂ ಸಭೆಗೆ ಆಗಮಿಸಲು ಸಿದ್ಧರಿದ್ದರೂ ಶುಕ್ರವಾರ ರಾತ್ರಿ ಕೆಲವರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಬಾರದಂತೆ ಹೇಳಿರುವ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು ಎಂದು ಹೇಳಲಾಗಿದೆ.
ಈ ಆರೋಪವನ್ನು ಅಲ್ಲಗಳೆದಿರುವ ಬಿಜೆಪಿ ಮೂಲಗಳು, ಪಕ್ಷದ ವತಿಯಿಂದ ಯಾರಿಗೂ ದೂರವಾಣಿ ಕರೆ ಮಾಡಿ ಸಭೆಗೆ ಹಾಜರಾಗದಂತೆ ಸೂಚಿಸಿಲ್ಲ. ಇದೆಲ್ಲವೂ ಕಪೋಲ ಕಲ್ಪಿತ. ಅನಗತ್ಯವಾಗಿ ಗೊಂದಲ ಮೂಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿವೆ. ಆದರೆ, ಸಭೆಗೆ ಕೆಲವರು ಗೈರಾಗಿರುವುದು ಪಕ್ಷದಲ್ಲಿ ಇನ್ನೂ ಅಸಮಾಧಾನ ಉಳಿದುಕೊಂಡಿದೆ ಎಂಬುದು ಸಾಬೀತಾಗಿದೆ.
ರಾಜ್ಯದಲ್ಲಿ 36 ಸಂಘಟನಾ ಜಿಲ್ಲೆಗಳಿದ್ದು, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ನೇತೃತ್ವದಲ್ಲಿ ಪ್ರತಿ ಜಿಲ್ಲೆಗೊಬ್ಬ ಬೂತ್ ಕಮಿಟಿ ಉಸ್ತುವಾರಿ ಯನ್ನು ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಕೇಡರ್ ಮಟ್ಟದಿಂದ ಬಂದಿರುವವರಿಗೆ ಆದ್ಯತೆ ನೀಡಲಾಗಿದೆ. ಶನಿವಾರ ಈ ಸಮಿತಿಯ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಈ 36 ಮಂದಿಯ ಜತೆಗೆ ಇನ್ನೂ 36 ಮಂದಿ ಸಹ ಉಸ್ತುವಾರಿಗಳು ಸೇರಿದಂತೆ ಸುಮಾರು 75 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿತ್ತು. ಆದರೆ, ಈ ಹಿಂದೆ ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಕೆಲವರಿಗೆ ಬಿಜೆಪಿ ರಾಜ್ಯ ಕಚೇರಿ ಹೆಸರಿನಲ್ಲಿ ದೂರವಾಣಿ ಕರೆ ಮಾಡಿ ಸಭೆಗೆ ಬಾರದಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದವರು ಸಭೆಯಲ್ಲಿ ಪಾಲ್ಗೊಳ್ಳಲಿಲ್ಲ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಸಭೆಗೆ ಗೈರುಹಾಜರಾದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತಾದರೂ ಅವರಾರೂ ಕರೆ ಸ್ವೀಕರಿಸಲಿಲ್ಲ.
ಸಂತೋಷ್‌ಗೆ ಆದ್ಯತೆ ನೀಡುತ್ತಿರುವುದೇ ಕಾರಣ?
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಬಿ.ಎಲ್.ಸಂತೋಷ್ ಅವರಿಗೆ ಪ್ರಾಶಸ್ತ್ಯ ನೀಡುತ್ತಿರುವುದು ಕೆಲವರಲ್ಲಿ ಅಸಮಾಧಾನ ಉಂಟುಮಾಡಿದೆ. ಈ ಮಧ್ಯೆ ಬೂತ್ ಸಮಿತಿಯಲ್ಲಿ ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದವರಿಗೆ ಆದ್ಯತೆ ನೀಡಿರುವುದು ಈ ಅಸಮಾಧಾನ ಹೆಚ್ಚುವಂತೆ ಮಾಡಿತ್ತು. ಈ ಕಾರಣಕ್ಕಾಗಿ ಸಂತೋಷ್ ಬೆಂಬಲಿಗರು ಎನ್ನಲಾಗುತ್ತಿರುವ ಕೆಲವರನ್ನು ರೊಚ್ಚಿಗೆಬ್ಬಿಸಿ ಪಕ್ಷದ ವಿರುದ್ಧ ಮಾತನಾಡುವಂತೆ ಮಾಡಲು ಸಭೆಗೆ ಬಾರದಂತೆ ದೂರವಾಣಿ ಕರೆ ಮಾಡಿ ಹೇಳಿದ್ದರು. ರೊಚ್ಚಿಗೆದ್ದು ಪಕ್ಷದ ರಾಜ್ಯ ನಾಯಕರ ವಿರುದ್ಧ ಮಾತನಾಡಿದರೆ “ಸಂತೋಷ್ ಅವರ ಬೆಂಬಲಿಗರು ಈ ರೀತಿ ಮಾಡು ತ್ತಿದ್ದಾರೆ’ ಎಂದು ವರಿಷ್ಠರಿಗೆ ದೂರು ನೀಡುವ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.