ಶಾಲಾ ರಜೆ ಗೊಂದಲ ನಿವಾರಣೆಗೆ ಕ್ರಮ: ತನ್ವೀರ್ ಸೇಠ್
Team Udayavani, Sep 24, 2017, 11:45 AM IST
ಮಂಗಳೂರು : ಶಾಲೆಗಳಿಗೆ ವಿವಿಧ ರಜೆ ಘೋಷಣೆ ಕುರಿತಂತೆ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಏಕರೂಪದ ರಜಾ ಪದ್ಧತಿ ಜಾರಿಗೆ ತರಲಾಗುವುದು ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ವಕ್ಫ್ ಖಾತೆ ಸಚಿವ ತನ್ವಿರ್ ಸೇಠ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವರ್ಷ ದಸರಾ ರಜೆಯಲ್ಲಿ ವ್ಯತ್ಯಾಸಗಳಾಗಿವೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆಯಲ್ಲಿ ಮಾರ್ಪಾಟು ಮಾಡಲಾಗಿದೆ. ಇದನ್ನು ನಿವಾರಿಸಿ ಏಕರೂಪದ ರಜೆ ನಿಗದಿಪಡಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಕ್ರಮ ಕೈಗೊಳ್ಳಲಾಗುವುದು. ಹಬ್ಬಗಳಿಗೆ ಹೊಂದಿಕೆಯಾಗುವಂತೆ ರಜೆಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಪ್ರಕಟಿಸಲಾಗುವುದು ಎಂದರು.
ಉಪ ಲೋಕಾಯುಕ್ತರ
ಮಧ್ಯಾಂತರ ವರದಿ ಅಧ್ಯಯನ
ವಕ್ಫ್ ಆಸ್ತಿಗಳಿಗೆ ಸಂಬಂಧಪಟ್ಟು ಉಪ ಲೋಕಾಯುಕ್ತರು ಸಲ್ಲಿಸಿರುವ ಮಧ್ಯಾಂತರ ವರದಿಯನ್ನು ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದೆ ಎಂದು ಸಚಿವ ತನ್ವೀರ್ ಹೇಳಿದರು.
ವಕ್ಫ್ ಆಸ್ತಿ ರಕ್ಷಣೆಗೆ ಸರಕಾರ ಅವಶ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾನೂನು ಬಿಗಿಗೊಳಿಸಲಾಗಿದೆ. ಪ್ರಕರಣಗಳ ವಿಚಾರಣೆಗೆ ಬೆಂಗಳೂರು ಹಾಗೂ ಮೈಸೂರು ವಿಭಾಗಕ್ಕೆ ಒಂದು ಹಾಗೂ ಬೆಳಗಾವಿ ಹಾಗೂ ಕಲ್ಬುರ್ಗಿ ವಿಭಾಗಕ್ಕೆ ಒಂದರಂತೆ ಬಹು ಸದಸ್ಯತ್ವದ ಟ್ರಿಬ್ಯೂನಲ್ ರಚಿಸಿದ್ದು, ಸಂಚಾರಿ ಪೀಠದ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜತೆಗೆ ವಕ್ಫ್ ಆಸ್ತಿಗಳ ರಕ್ಷಣೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿಯೋರ್ವರ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸುವ ಪ್ರಸ್ತಾವನೆ ಇದೆ ಎಂದವರು ವಿವರಿಸಿದರು.
ವಕ್ಫ್ ಅಸ್ತಿಗಳ ನಿರ್ವಹಣೆ ಕುರಿತಂತೆ ಮಾಹಿತಿ ನೀಡಲು ನಿರ್ವಹಣೆಗಾರರು, ಮುತವಲ್ಲಿಗಳ ಸಮಾವೇಶಗಳನ್ನು ಜಿಲ್ಲಾ ಮಟ್ಟಗಳಲ್ಲಿ ನಡೆಸಲಾಗುತ್ತಿದೆ. ಈಗಾಗಲೇ 12 ಜಿಲ್ಲೆಗಳಲ್ಲಿ ಈ ರೀತಿಯ ಸಮಾವೇಶಗಳು ನಡೆದಿದ್ದು, ದಕ್ಷಿಣ ಜಿಲ್ಲೆಯ ಸಮಾವೇಶ ಇಂದು ನಡೆದಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.