ಹೊಸತನದಿಂದ ಉದ್ಯಮದಲ್ಲಿ ಯಶಸ್ಸು : ರಂಗಪ್ರಸಾದ್
Team Udayavani, Sep 24, 2017, 3:32 PM IST
ಮಂಗಳೂರು: ಮೂಡ ಬಿದಿರೆ ಬಳಿಯ ಬಡಗಮಿಜಾರಿ ನಲ್ಲಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ನಲ್ಲಿ (ಮೈಟ್) 3 ದಿನಗಳ ಉದ್ಯಮಶೀಲತೆ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಎಂಟ್ರಿ ಪ್ರನ್ಯೂರ್ಶಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಇಡಿಐಐ) ಅಹಮದಾಬಾದ್ ಹಾಗೂ ಮೈಟ್ನ ಉದ್ಯಮಶೀಲತೆ ಅಭಿವೃದ್ಧಿ ವಿಭಾಗ ಆಯೋಜಿಸಿದೆ.
ಬೆಂಗಳೂರಿನ ಎಂಎಸ್ಎಂಇ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ನಿರ್ದೇಶಕ ರಂಗಪ್ರಸಾದ್ ಎಸ್.ಎನ್. ಅವರು ಶಿಬಿರವನ್ನು ಉದ್ಘಾಟಿಸಿ, ಉದ್ಯಮಿಗಳಾಗಲು ಬಯಸುವವರು ಸದಾ ಹೊಸತನದ ಹುಡುಕಾಟದಲ್ಲಿ ನಿರತರಾಗಿರಬೇಕು. ಆತ್ಮವಿಶ್ವಾಸ ಮತ್ತು ಧನಾತ್ಮಕ ವ್ಯಕ್ತಿತ್ವಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಸ್ಪರ್ಧಾ ತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಮುಖ್ಯ ಅತಿಥಿ ಕೆ. ಸಾಕ್ರೆಟಿಸ್ ಅವರು ಮೈಟ್ ತನ್ನ ಪೂರ್ವಭಾವಿ ಕ್ರಮಗಳಿಂದ ಕಳೆದ 5 ವರ್ಷಗಳಲ್ಲಿ ಇಪ್ಪತ್ತಕ್ಕೂ ಹೆಚ್ಚಿನ ಉದ್ಯಮಿಗಳನ್ನು ರೂಪಿಸುವಲ್ಲಿ ಯಶಸ್ಸು ಕಂಡಿದೆ. ಇಂತಹ ಉದ್ಯಮಶೀಲತಾ ಶಿಬಿರಗಳಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚು ಸಂಖ್ಯೆಯ ವಾಣಿಜ್ಯೋದ್ಯಮಿಗಳು ಮೂಡಿಬರಬೇಕು ಎಂದು ಹೇಳಿದರು.
ಪ್ರಾಂಶುಪಾಲ ಡಾ| ಜಿ.ಎಲ್. ಈಶ್ವರ ಪ್ರಸಾದ್ ಸ್ವಾಗತಿಸಿ ಉದ್ಯಮ ಶೀಲತೆ ಅಭಿವೃದ್ಧಿಪಡಿಸುವಲ್ಲಿ ಮೈಟ್ ತೆಗೆದುಕೊಂಡ ಉಪಕ್ರಮಗಳ ಕುರಿತು ಮಾಹಿತಿ ನೀಡಿದರು. ಮೆಕಾಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಸಂಚಾಲಕ ಸತ್ಯನಾರಾಯಣ ಶಿಬಿರದ ಮಹತ್ವವನ್ನು ವಿವರಿಸಿದರು. ಯುವ ಉದ್ಯಮಿ ರೀತೇಶ್ ಮಾತನಾಡಿ, ‘ಐಡಿಯಾಸ್ ಮತ್ತು ಇನ್ನೋವೇಶನ್’ ಕುರಿತು ಮಾತನಾಡಿದರು.
ಸೃಜನಾತ್ಮಕತೆ, ವ್ಯವಹಾರದ ಅಂಶ, ಎಂಎಸ್ಎಂಇ ಘಟಕದ ವಾಣಿಜ್ಯೋದ್ಯಮ ಮತ್ತು ಹಣಕಾಸಿನ ಸೌಲಭ್ಯಗಳು, ವಾಣಿಜ್ಯೋದ್ಯಮಿಗೆ ಬೇಕಾಗಿರುವ ಸಂವಹನ ಕೌಶಲಗಳು, ಉದ್ಯಮ ಪ್ರಾರಂಭಕ್ಕೆ ಪ್ರಾಜೆಕ್ಟ್ ರಿಪೋರ್ಟ್ ತಯಾರಿಸುವುದು ಸಹಿತ ವಿವಿಧ ಅಂಶಗಳ ಬಗ್ಗೆ ಶಿಬಿರದಲ್ಲಿ ಮಾಹಿತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.