ಕಡೆಗಣಿಸಿದ್ದರಿಂದ ಸಮುದಾಯ ಮತ್ತಷ್ಟು ಪ್ರಬಲ

Team Udayavani, Sep 25, 2017, 12:51 PM IST

kp-nanjundi.jpg

ಬೆಂಗಳೂರು: ಕಾಂಗ್ರೆಸ್‌ ಪಕ್ಷ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷ್ಯ ಮಾಡಿರುವುದರಿಂದ ಸಮುದಾಯದ ಸಂಘಟನೆ ಇನ್ನಷ್ಟು ಪ್ರಬಲವಾಗುತ್ತಿದೆ ಎಂದು ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.

ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಮತ್ತು ವಿಶ್ವಕರ್ಮ ಸಮುದಾಯ ಸಂಘದಿಂದ ಭಾನುವಾರ ಬನ್ನೇರುಘಟ್ಟ ರಸ್ತೆಯ ಅಪ್ಪಿ ಜೆ.ಜೆ. ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ 4ನೇ ವರ್ಷದ ವಿಶ್ವಕರ್ಮ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ವಿಶ್ವಕರ್ಮ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರ ಪರಿಣಾಮವಾಗಿ ಸಮುದಾಯದ ಸಂಘಟನೆ ಇನ್ನಷ್ಟು ವೇಗವಾಗಿ ಬೆಳೆಯುತ್ತಿದೆ. ಬಿಜೆಪಿಯಿಂದ ನಮ್ಮ ಸ್ವಾಭಿಮಾನಕ್ಕೆ ತಕ್ಕಂತೆ ಮನ್ನಣೆ ಸಿಕ್ಕಿದೆ ಎಂದರು.

ವಿಶ್ವಕರ್ಮ ಜಯಂತಿಗೆ ಅಮಿತ್‌ ಶಾ: ಅ.8ರಂದು ನಗರದ ಅರಮನೆ ಮೈದಾನದಲ್ಲಿ 9ನೇ ವಿಶ್ವಕರ್ಮ ಜಯಂತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ನಡೆಸಲಿದ್ದೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌, ಕೌಶಲಾಭಿವೃದ್ಧಿ ಸಚಿವ ಅನಂತ್‌ ಕುಮಾರ್‌ ಹೆಗಡೆ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ. ಜಯಂತ್ಯೋತ್ಸವದಲ್ಲಿ ವಿಶ್ವಕರ್ಮ ಸಮುದಾಯ ಶಕ್ತಿ ಪ್ರದರ್ಶನ ಮಾಡಲಿದ್ದೇವೆ ಎಂದು ಹೇಳಿದರು.

ಪ್ರಮುಖ ಮೂರು ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಜಯಂತೋತ್ಸವ ನಡೆಯಲಿದೆ. ಕೇಂದ್ರ ಸರ್ಕಾರದಿಂದ ವಿಶ್ವಕರ್ಮ ಅಭಿವೃದ್ಧಿ ನಿಗಮ ಆರಂಭಿಸಿ, ಅಗತ್ಯ ಅನುದಾನ ನೀಡಬೇಕು. ವಿಶ್ವಕರ್ಮ ಜಯಂತೋತ್ಸವನ್ನು ಕೇಂದ್ರ ಸರ್ಕಾರದಿಂದಲೇ ದೇಶಾದ್ಯಂತ ಆಚರಿಸಬೇಕು ಮತ್ತು ಚಿನ್ನಾಬೆಳ್ಳಿ ವ್ಯಾಪಾರಿಗಳ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ತಡೆಗೆ ಸೂಕ್ತ ಕಾಯ್ದೆಯೊಂದನ್ನು ಜಾರಿ ಮಾಡುವಂತೆ ಮನವಿ ಸಲ್ಲಿಸಲಿದ್ದೇವೆ ಎಂದರು.

ವಿಶ್ವಕರ್ಮ ಜಯಂತ್ಯೋತ್ಸವದಂದು ಐವರು ಗಣ್ಯರಿಗೆ ನೀಡುವ ವಿಶ್ವಕರ್ಮ ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಒಂದೆರೆಡು ದಿನದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದೇವೆ. ರಾಜ್ಯಾದ್ಯಂತ ಸಮುದಾಯದ ಸಂಘಟನೆ ಕಾರ್ಯ ನಡೆಯುತ್ತಿದೆ. ವಿಶ್ವಕರ್ಮ ಸಮುದಾಯ ನಾಡಿಗೆ ನೀಡಿದ ಕೊಡುಗೆಯನ್ನು ಎಲ್ಲರಿಗೂ ತಿಳಿಸುವ ಪ್ರಯತ್ನ ಮಾಡಲಿದ್ದೇವೆ ಎಂದು ಹೇಳಿದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಜೆ.ಲೋಕೇಶ್‌, ವಿಶ್ವಕರ್ಮ ಮುಖಂಡರಾದ ಕನ್ನಡ ಸೋಮು, ಶ್ಯಾಮ್‌ ಸುಂದರ್‌, ಎಸ್‌.ಲೋಕನಾಥಾಚಾರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.