ಜೆಡಿಎಸ್‌ಗೆ 4 ಸ್ಥಾಯಿ ಸಮಿತಿ: ಮುಂದುವರಿದ ಪಾಲಿಕೆ ದೋಸ್ತಿ


Team Udayavani, Sep 25, 2017, 12:52 PM IST

JDS-Meeting-(1).jpg

ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮುಂದುವರಿಸಲಿರುವ ಜೆಡಿಎಸ್‌, ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ ಪಕ್ಷಕ್ಕೆ ಬಿಟ್ಟುಕೊಟ್ಟು, ಉಪಮೇಯರ್‌ ಹಾಗೂ ತೆರಿಗೆ ಮತ್ತು ಆರ್ಥಿಕ ಸೇರಿದಂತೆ ಪ್ರಮುಖ ನಾಲ್ಕು ಸ್ಥಾಯಿ ಸಮಿತಿಗಳನ್ನು ತನ್ನ ಬಳಿ ಇಟ್ಟುಕೊಳ್ಳಲು ತೀರ್ಮಾನಿಸಿದೆ.

ಬಿಬಿಎಂಪಿ ಮೈತ್ರಿ ಹಾಗೂ ಮೇಯರ್‌, ಉಪಮೇಯರ್‌ ಆಯ್ಕೆ ಸಂಬಂಧ ಭಾನುವಾರ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ನಿವಾಸದಲ್ಲಿ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಜೆಡಿಎಸ್‌ ಶಾಸಕ ಕೆ. ಗೋಪಾಲಯ್ಯ ಹಾಗೂ ವಿಧಾನಪರಿಷತ್‌ ಸದಸ್ಯ ಟಿ.ಎ. ಶರವಣ ಇದ್ದರು.

ಮೇಯರ್‌ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಅನ್ನುವುದು ನಿಮಗೆ (ಕಾಂಗ್ರೆಸ್‌) ಬಿಟ್ಟ ವಿಚಾರ. ಆದರೆ, ಉಪಮೇಯರ್‌ ಸ್ಥಾನ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸೇರಿದಂತೆ ಪ್ರಮುಖ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಮ್ಮ (ಜೆಡಿಎಸ್‌) ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಅಲ್ಲದೇ ಕಳೆದ 2 ವರ್ಷದ ಮೈತ್ರಿಯ ಅವಧಿಯಲ್ಲಿ ಜೆಡಿಎಸ್‌ನ್ನು ಕಡೆಗಣಿಸಿರುವುದು, ಅನುದಾನ ಹಂಚಿಕೆಯಲ್ಲಿ ಮಾಡಲಾದ ತಾರತಮ್ಯ ಸೇರಿದಂತೆ ಅನೇಕ ನೋವುಗಳನ್ನು ಪಕ್ಷದ ಕಾರ್ಪೋರೇಟರ್‌ಗಳು ಹೇಳಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ಅದೆಲ್ಲವೂ ಸರಿಯಾಗಬೇಕು. ಅದೇ ರೀತಿ ಸಮನ್ವಯ ಸಮಿತಿ ರಚನೆಗೆ ಕಾಂಗ್ರೆಸ್‌ ಒಪ್ಪಬೇಕು. ಪ್ರಮುಖ ತೀರ್ಮಾನಗಳು ಈ ಸಮನ್ವಯ ಸಮಿತಿಯಲ್ಲೇ ಆಗಬೇಕು ಎಂದು ದೇವೇಗೌಡರು ಹೇಳಿದ್ದಕ್ಕೆ ರಾಮಲಿಂಗಾರೆಡ್ಡಿ ಒಪ್ಪಿಕೊಂಡು, ಮುಂದಿನ ದಿನಗಳಲ್ಲಿ ಇಂತಹದ್ದಕ್ಕೆ ಅವಕಾಶ ನೀಡದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಒಕ್ಕಲಿಗರೇತರಿಗೆ ಉಪಮೇಯರ್‌ ಸ್ಥಾನ: ರಾಮಲಿಂಗಾರೆಡ್ಡಿ ಅವರೊಂದಿಗಿನ ಸಭೆ ಬಳಿಕ ದೇವೇಗೌಡರು, ಜೆಡಿಎಸ್‌ನ ಎಲ್ಲ 14 ಕಾರ್ಪೋರೇಟರ್‌ಗಳು ಹಾಗೂ ಕೆಲವು ಶಾಸಕರೊಂದಿಗೆ ಸಭೆ ನಡೆಸಿದರು. ಕಳೆದ ಎರಡು ಅವಧಿಗೆ ಉಪಮೇಯರ್‌ ಸ್ಥಾನಕ್ಕೆ ಒಕ್ಕಲಿಗ ಅಭ್ಯರ್ಥಿಗಳಿಗೆ ಅವಕಾಶ ನೀಡಿರುವುದರಿಂದ ಈ ಬಾರಿ ಒಕ್ಕಲಿಗರೇತರ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಹಾಗಾಗಿ ಓಬಿಸಿ ಅಥವಾ ಮುಸ್ಲಿಂ ಅಭ್ಯರ್ಥಿಯನ್ನು ಉಪಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಬೇಕಿದೆ.

ಅಲ್ಲದೇ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸೇರಿದಂತೆ ನಾಲ್ಕು ಪ್ರಮುಖ ಸಮಿತಿಗೆ ಪಕ್ಷದ 14 ಕಾರ್ಪೋರೇಟರ್‌ಗಳ ಪೈಕಿ ಇಲ್ಲಿವರೆಗೆ ಅಧಿಕಾರ ಅನುಭವಿಸದೇ ಇದ್ದವರನ್ನು ಪರಿಗಣಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಉಪಮೇಯರ್‌ ಸ್ಥಾನಕ್ಕೆ ಮೂವರು ಆಕಾಂಕ್ಷಿಗಳಿದ್ದು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿಯವರ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.