78 ಕೈ ಶಾಸಕರ ವಿರುದ್ಧದ ದೂರು ರದ್ದು


Team Udayavani, Sep 26, 2017, 8:07 AM IST

26-STATE-6.jpg

ಬೆಂಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್‌ ಬಿ.ಅಡಿಯವರನ್ನು ಪದಚ್ಯುತಗೊಳಿಸುವ ನಿರ್ಣಯ ಕೈಗೊಂಡು ಕೈಸುಟ್ಟುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್‌ ಪಕ್ಷದ 78 ಮಂದಿ ಶಾಸಕರು ಪ್ರಾಸಿಕ್ಯೂಶನ್‌ ಎದುರಿಸುವ ಭೀತಿಯಿಂದ ಬಚಾವಾಗಿದ್ದಾರೆ!

ಉಪಲೋಕಾಯುಕ್ತ ಸುಭಾಷ್‌ ಬಿ. ಅಡಿ ಅವರನ್ನು ಪದಚ್ಯುತಗೊಳಿಸಲು ನಿರ್ಣಯ ಕೈಗೊಂಡು ನಿರ್ಣಯಕ್ಕೆ ಸಹಿ ಹಾಕಿದ ಶಾಸಕರ ವಿರುದ್ಧ “ಸಾಂವಿಧಾನಿಕ ಹುದ್ದೆಯಲ್ಲಿದ್ದವರಿಗೆ ಸಾರ್ವಜನಿಕ ಜೀವನದಲ್ಲಿ ಮಾನಹಾನಿ ಉಂಟು ಮಾಡಿದ’ ಆರೋಪದ ಮೇಲೆ ಪ್ರಾಸಿಕ್ಯೂಶನ್‌ ನಡೆಸಲು ಅನುಮತಿ ಹಾಗೂ ಕ್ರಮ ಜರುಗಿಸುವಂತೆ ಕೋರಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಈ ಎರಡೂ ಅರ್ಜಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ವಜಾಗೊಳಿಸಿದ್ದಾರೆ.

ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜನಾಧಿಕಾರ ಸಂಘರ್ಷ ಸಮಿತಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಸಲ್ಲಿಸಿದ್ದ ಎರಡು ಪ್ರತ್ಯೇಕ ದೂರುಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ಈ ಬಗ್ಗೆ ಕಾನೂನು ಪ್ರಾಧಿಕಾರದ ಅಭಿಪ್ರಾಯವನ್ನು ಕೇಳಿದ್ದರು. ಲೋಕಾಯುಕ್ತ ಅಥವಾ ಉಪಲೋಕಾಯುಕ್ತರಿಗೆ ಮಾನಹಾನಿ ಉಂಟು ಮಾಡಿದವರ ವಿರುದ್ಧ ಖುದ್ದು ಅವರೇ ವಿಚಾರಣೆ ನಡೆಸಿ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಲೋಕಾಯುಕ್ತ ಕಾಯಿದೆಯಲ್ಲಿ ಅವಕಾಶವಿದೆ. ಹೀಗಾಗಿ ಶಾಸಕರ ವಿರುದ್ಧ ದಾಖಲಾದ ಎರಡೂ ಖಾಸಗಿ ದೂರುಗಳನ್ನು ವಿಚಾರಣೆಗೊಳಪಡಿಸುವ ಅಗತ್ಯವಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಮೆರಿಟ್‌ ಆಧಾರದ ಮೇಲೆ ದೂರುಗಳನ್ನು ವಜಾಗೊಳಿಸಲಾಗಿದೆ ಎಂದು ಲೋಕಾಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. 

ಉಪಲೋಕಾಯುಕ್ತರ ಹುದ್ದೆಗೆ ಮಾನಹಾನಿ ಉಂಟುಮಾಡಿದ್ದ ಶಾಸಕರ ವಿರುದ್ಧದ ದೂರನ್ನು ವಜಾಗೊಳಿಸಿರುವ ಲೋಕಾಯುಕ್ತರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಲಾಗಿದೆ. ಅಲ್ಲಿ ನ್ಯಾಯ ಸಿಗುವ ಭರವಸೆಯಿದೆ.
ಆದರ್ಶ್‌ ಅಯ್ಯರ್‌, ಜನಾಧಿಕಾರ ಸಂಘರ್ಷ ಪರಿಷತ್‌ 

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.