ನಾನು ಪ್ರೊಫೆಸರ್ ಎಂದು ಹೇಳುತ್ತಿದ್ದರೂ ಥಳಿಸಿದರು
Team Udayavani, Sep 28, 2017, 6:45 AM IST
ಗೋರಖ್ಪುರ/ವಾರಾಣಸಿ: “ನಾನು ಪ್ರಾಧ್ಯಾಪಕಿ. ದಯವಿಟ್ಟು ಹೊಡೆಯಬೇಡಿ. ಆದರೆ ಪೊಲೀಸರು ಕೇಳಲೇ ಇಲ್ಲ’ ಹೀಗೆಂದು ಕಳೆದ ಶನಿವಾರ ಬನಾರಸ್ ಹಿಂದೂ ವಿವಿ ಆವರಣದಲ್ಲಿ ನಡೆದಿದ್ದ ಗಲಾಟೆಯ ವೇಳೆ ಉಂಟಾದ ಬೆಳವಣಿಗೆ ಬಗ್ಗೆ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್ ಪ್ರತಿಮಾ ಗೊಂಡ್ ಹೇಳಿಕೊಂಡಿದ್ದಾರೆ.
ಗಲಾಟೆ ಉಂಟಾದ ದಿನ ಕ್ಯಾಂಪಸ್ನಲ್ಲಿ ತಮ್ಮ ಬಳಿ ನಿಂತಿದ್ದ ವಿದ್ಯಾರ್ಥಿನಿ ಏಟು ತಗುಲಿ ಬಿದ್ದಿದ್ದರು. ಅವರನ್ನು ಕಾಪಾಡಲು ಹೋದ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಗಲಭೆ ನಡೆಸುತ್ತಿದ್ದ ಗುಂಪು ಮತ್ತು ಪೊಲೀಸರು ತಾವಿದ್ದಲ್ಲಿಗೇ ಬಂತು. ಹೀಗಾಗಿ ಅಲ್ಲಿ ಸಿಕ್ಕಿ ಹಾಕುವಂತಾಯಿತು. ಪೊಲೀಸರನ್ನು ತಡೆದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದಿದ್ದಾರೆ ಅವರು.
ಸಮಾಜವಿರೋಧಿ ಶಕ್ತಿಗಳು: ಬನಾರಸ್ ಹಿಂದೂ ವಿವಿಯಲ್ಲಿ ಉಂಟಾಗಿದ್ದ ಗಲಭೆಯ ಹಿಂದೆ ಸಮಾಜ ವಿರೋಧಿ ಶಕ್ತಿಗಳ ಕೈವಾಡ ಇದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಬುಧವಾರ ಗೋರಖ್ಪುರದಲ್ಲಿ ಮಾತನಾಡಿದ ಅವರು, ಮೇಲ್ನೋಟಕ್ಕೇ ಈ ಅಂಶ ಸಾಬೀತಾಗುತ್ತದೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಕಾರಣವೇನು ಎಂಬುದನ್ನು ಕಂಡುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಲಾಗಿದೆ ಎಂದಿದ್ದಾರೆ. ಈ ನಡುವೆ ವಿವಿ ಆವರಣದಲ್ಲಿ ಉಂಟಾದ ಘಟನೆಯ ಹೊಣೆ ಹೊತ್ತು ಮುಖ್ಯ ಪಾಲನಾ ಅಧಿಕಾರಿ ಪ್ರೊ.ಓ.ಎನ್.ಸಿಂಗ್ ಬುಧವಾರ ರಾಜೀನಾಮೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.