ಮನೆ ಬಾಗಿಲಿಗೇ ತಂದು ಕೊಡ್ತಾರಂತೆ ಪೆಟ್ರೋಲ್‌, ಡೀಸೆಲ್‌!

Team Udayavani, Sep 28, 2017, 6:00 AM IST

Minister-Dharmendra-Pradhan.jpg

ನವದೆಹಲಿ: ಹಾಲು ಮತ್ತು ದಿನಪತ್ರಿಕೆಗಳನ್ನು ಮನೆ ಬಾಗಿಲಿಗೇ ತಲುಪಿಸುವ ಹಾಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಯಾಕೆ ತಲುಪಿಸಬಾರದು?

ಇದು ತೈಲ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ಐಡಿಯಾ! ಹಿಂದೊಮ್ಮೆ ಇದೇ ಪ್ರಸ್ತಾಪ ಇಟ್ಟು ಮುಜುಗರಕ್ಕೊಳಗಾಗಿದ್ದ ಇವರು, ಮತ್ತೂಮ್ಮೆ ಅದೇ ಪ್ರಸ್ತಾಪ ಮುಂದಿಟ್ಟಿದ್ದಾರೆ. 

ಬುಧವಾರ ದೆಹಲಿಯಲ್ಲಿ ಆರಂಭವಾದ ಮೊಬೈಲ್‌ ಕಾಂಗ್ರೆಸ್‌ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು, ಈಗಾಗಲೇ ಟೆಲಿಕಾಂ ಮತ್ತು ಐಟಿ ವಲಯದಲ್ಲಿ ಸಾಕಷ್ಟು ಮುಂದುವರಿದಿದ್ದೇವೆ. ಅದೇ ರೀತಿಯಲ್ಲೇ ತೈಲ ವಲಯದಲ್ಲೂ ಸುಧಾರಣೆ ತರಬೇಕಿತ್ತು, ಸರ್ಕಾರ ಶೀಘ್ರದಲ್ಲೇ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಮನೆ ಮನೆಗೆ ತಲುಪಿಸಲಿದೆ ಎಂದು ಹೇಳಿದ್ದಾರೆ. ಅಂದರೆ ಈಗ ಇ-ಕಾಮರ್ಸ್‌ ಸೈಟ್‌ಗಳು ಕಾರ್ಯ ನಿರ್ವಹಿಸುತ್ತಿರುವ ರೀತಿಯಲ್ಲೇ ತೈಲವೂ ಸಿಗಲಿದೆ ಎಂದು ತಿಳಿಸಿದ್ದಾರೆ.

ಟೆಲಿಕಾಂ ವಲಯದಲ್ಲಿನ ಅತ್ಯಾಧುನಿಕ ನೀತಿ, ಇತರೆ ವಲಯಗಳ ಬೆಳವಣಿಗೆಗೂ ಕಾರಣವಾಗಿದೆ. ಅದೇ ರೀತಿ ಪೆಟ್ರೋಲಿಯಂ ವಲಯದಲ್ಲೂ ಸುಧಾರಣೆ ತರಬೇಕು. ಸದ್ಯ 35 ಕೋಟಿ ಮಂದಿ ಪ್ರತಿ ದಿನ ಪೆಟ್ರೋಲ್‌ ಬಂಕ್‌ಗಳ ಮುಂದೆ ನಿಲ್ಲುತ್ತಿದ್ದಾರೆ. ಈ ಕ್ಯೂ ತಪ್ಪಿಸುವ ಸಲುವಾಗಿ ಇಂಧನವನ್ನು ಮನೆ ಬಾಗಿಲಿಗೆ ತಲುಪಿಸಲು ಚಿಂತನೆ ನಡೆಸಿದ್ದೇವೆ. ಇದರಿಂದ ಜನರ ಸಮಸ್ಯೆಗೆ ಕಡಿವಾಣ ಬಿದ್ದಂತಾಗುತ್ತದೆ ಎಂದು ಹೇಳಿದ್ದಾರೆ.

ಇದೇ ಮೊದಲಲ್ಲ: ಕಳೆದ ಏಪ್ರಿಲ್‌ನಲ್ಲೂ ಧರ್ಮೇಂದ್ರ ಪ್ರಧಾನ್‌ ಅವರು ಈ ಪ್ರಸ್ತಾಪ ಇಟ್ಟಿದ್ದರು. ಇ-ಕಾಮರ್ಸ್‌ ಸೈಟ್‌ಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಆರ್ಡರ್‌ ಮಾಡಿ ಮನೆಗೆ ತಂದುಕೊಡುವ ವ್ಯವಸ್ಥೆ ಮಾಡಲಿದ್ದೇವೆ ಎಂದಿದ್ದರು. ಅಲ್ಲದೆ ಇದಕ್ಕಾಗಿ ಪುಟ್ಟ ಮತ್ತು ಸಂಚಾರಿ ಪೆಟ್ರೋಲ್‌ ಪಂಪ್‌ಗ್ಳನ್ನು ಸ್ಥಾಪಿಸಲಿದ್ದೇವೆ ಎಂದೂ ಹೇಳಿದ್ದರು. ಆದರೆ ಪೆಟ್ರೋಲಿಯಂ ಮತ್ತು ಸುರಕ್ಷತಾ ಮಂಡಳಿ ಸಚಿವರ ಆಸೆಗೆ ತಣ್ಣಿರೇರಚಿತ್ತು. ಇದರಿಂದ ತೈಲವನ್ನು ದುರ್ಬಳಕೆ ಮಾಡಿಕೊಳ್ಳುವುದು ಸುಲಭವಾಗಲಿದೆ. ಜತೆಗೆ, ಇದು ಸುರಕ್ಷತಾ ವಿಧಾನವೂ ಅಲ್ಲ ಎಂದಿತ್ತು.

ಟಾಪ್ ನ್ಯೂಸ್

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.