7 ದಿನಗಳ ಕುಸಿತಕ್ಕೆ ಅಂತ್ಯ: ಮುಂಬಯಿ ಶೇರು 123 ಅಂಕ ಏರಿಕೆ
Team Udayavani, Sep 28, 2017, 4:52 PM IST
ಮುಂಬಯಿ : ಏಳು ದಿನಗಳ ನಿರಂತರ ಕುಸಿತವನ್ನು ಕಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 123 ಅಂಕಗಳ ಏರಿಕೆಯೊಂದಿಗೆ 31,216.36 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿದೆ.
ದೇಶೀಯ ಹೂಡಿಕೆದಾರರು, ಈಚಿನ ಕುಸಿತದಲ್ಲಿ ಅಗ್ಗದ ಧಾರಣೆಗೆ ಕುಸಿದಿದ್ದ ಬ್ಯಾಂಕಿಂಗ್, ಫಾರ್ಮಾ, ಮೆಟಲ್, ರಿಯಲ್ಟಿ ಶೇರುಗಳನ್ನು ಖರೀದಿಸಿದ ಕಾರಣ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯನ್ನು ಕಂಡು ಏಳು ದಿನಗಳ ನಿರಂತರ ಕುಸಿತಕ್ಕೆ ತಡೆ ಹಾಕಿದರು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ 33.20 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 9,768.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಸೆನ್ಸೆಕ್ಸ್ ಕಳೆದ ಏಳು ದಿನಗಳ ಕುಸಿತದಲ್ಲಿ ಒಟ್ಟು 1,263.95 ಅಂಕಗಳನ್ನು ಕಳೆದುಕೊಂಡು ಬಡವಾಗಿತ್ತು.
ಇಂದಿನ ವಹಿವಾಟಿನಲ್ಲಿ 1,547 ಶೇರುಗಳು ಮುನ್ನಡೆ ಸಾಧಿಸಿದರೆ 970 ಶೇರುಗಳು ಹಿನ್ನಡೆಗೆ ಗುರಿಯಾದವು. 164 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.